ಗೋಶಾಲೆ ಸ್ಥಗಿತಕ್ಕೆ ವಿರೋಧ
Team Udayavani, Jul 27, 2017, 11:13 AM IST
ಮೊಳಕಾಲ್ಮೂರು: ಹಿರೇಕೆರೆಹಳ್ಳಿ ಗ್ರಾಮದ ಗೋಶಾಲೆಯನ್ನು ಸರ್ಕಾರ ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ಸೆಂಟರ್
ಆಫ್ ಟ್ರೇಡ್ ಯೂನಿಯನ್ಸ್ ನ ತಾಲೂಕು ಘಟಕದ ಕಾರ್ಯಕರ್ತರು ಮತ್ತು ರೈತರು ಪಟ್ಟಣದ ತಾಲೂಕು ಕಚೇರಿ ಮುಂಭಾಗದ ಮುಖ್ಯ ರಸ್ತೆ ತಡೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭಲ್ಲಿ ಮಾತನಾಡಿದ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಎಚ್.ಎ. ಮಾರಣ್ಣ, ತಾಲೂಕಿನಲ್ಲಿ ಭೀಕರ ಬರದಛಾಯೆ ಆವರಿಸಿ ಜಾನುವಾರುಗಳಿಗೆ ಮೇವು ನೀರಿಲ್ಲದೆ ನಿಶಕ್ತವಾಗಿ ಸಾಯುವ ದುಸ್ಥಿತಿ ನಿರ್ಮಾಣವಾಗಿದೆ ಎಂದರು. ಈಗಾಗಲೇ ಹಿರೇಕೆರೆಹಳ್ಳಿ ಗೋಶಾಲೆಗೆ ಬೊಮ್ಮಲಿಂಗನಹಳ್ಳಿ, ತಳವಾರಹಳ್ಳಿ, ಯರೆನಹಳ್ಳಿ, ಹಿರೇಕೆರೆಹಳ್ಳಿ, ಹೊಸಹಟ್ಟಿ, ಕಾಟನಾಯಕನಹಳ್ಳಿ, ಮೇಗಳಹಟ್ಟಿ ಸೇರಿದಂತೆ ಹಲವಾರು ಗ್ರಾಮಗಳ ಸುಮಾರು ಮೂರು ಸಾವಿರಕ್ಕೂ ಹೆಚ್ಚಿನ ಜಾನುವಾರುಗಳು ಆಶ್ರಯ ಪಡೆದಿದ್ದವು ಎಂದು ತಿಳಿಸಿದರು.
ತಾಲೂಕಿನಲ್ಲಿ ಈವರೆಗೂ ಉತ್ತಮ ಮಳೆಯಾಗಿ ಹುಲ್ಲು ಬೆಳೆದಿಲ್ಲ. ಈಗಿದ್ದರೂ ಸರ್ಕಾರ ಅವೈಜ್ಞಾನಿಕವಾಗಿ ಗೋಶಾಲೆಗಳನ್ನು ಮುಚ್ಚಲು ಆದೇಶ ನೀಡಿರುವುದು ಅಮಾನವೀಯ. ಗೋಶಾಲೆಗಳನ್ನು ಮುಚ್ಚಿರುವುದರಿಂದ ಸಾವಿರಾರು ಜಾನುವಾರುಗಳು ಮೇವು, ನೀರಿಲ್ಲದೆ ಸಾವನ್ನಪ್ಪಲಿವೆ. ಇನ್ನು ಕೆಲವು ಜಾನುವಾರುಗಳನ್ನು ಕಸಾಯಿಖಾನೆಗೆ ತಳ್ಳುವ ಸಾಧ್ಯತೆ ಇರುವುದರಿಂದ ಗೋವುಗಳ ರಕ್ಷಣೆಗಾಗಿ ಹಿರೇಕೆರೆಹಳ್ಳಿ ಸೇರಿದಂತೆ ತಾಲೂಕಿನ ಎಲ್ಲ ಗೋಶಾಲೆಗಳನ್ನು ಮುಚ್ಚದೆ ಮುಂದುವರಿಸಬೇಕು. ಇಲ್ಲದಿದ್ದರೆ ಹೋರಾಟ
ಮಾಡಲಾಗುವುದೆಂದರು.
ಸಿಐಟಿಯು ಉಪಾಧ್ಯಕ್ಷ ದಾನಸೂರ ನಾಯಕ ಮಾತನಾಡಿ, ಸರ್ಕಾರವು ಮೂಕ ಪ್ರಾಣಿಗಳ ಸಂರಕ್ಷಣೆಯಲ್ಲಿ ನಿರ್ಲಕ್ಷ ವಹಿಸಿದೆ ಜಾನುವಾರುಗಳ ಸಂರಕ್ಷಣೆಗೆ ಸ್ಥಗಿತಗೊಳಿಸಿರುವ ಗೋಶಾಲೆಗಳನ್ನು ಮುಂದುವರಿಸಬೇಕು. ಜಾನುವಾರುಗಳಿಗೆ ಮೇವು ನೀರನ್ನು ಕಲ್ಪಿಸಿ ಜಾನುವಾರುಗಳನ್ನು ಸಂರಕ್ಷಿಸಬೇಕು. ತಾಲೂಕಿನ ವಾಸ್ತವ ಪರಿಸ್ಥಿತಿ ಅವಲೋಕಿಸಿ ಗೋಶಾಲೆಗಳನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು. ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ತಹಶೀಲ್ದಾರ್ ಜಿ. ಕೊಟ್ರೇಶ್ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಪಂ ಸದಸ್ಯ ತಿಪ್ಪೇರುದ್ರಪ್ಪ, ರೈತರಾದ ರಾಜಣ್ಣ, ಟಿಪ್ಪುಸುಲ್ತಾನ್, ರಾಮಾಂಜನೇಯ,ನಾಗರಾಜ್, ಸಿದ್ದಪ್ಪ, ಶಿವಮೂರ್ತಿ, ಸಣ್ಣಪ್ಪಜ್ಜ, ಮಲ್ಲಯ್ಯ, ಸಿಐಟಿಯು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.