ಹರ್ಯಾಣ ಮಾದರಿ ನಿಯಮ ರೂಪಿಸಿ
Team Udayavani, Oct 5, 2020, 7:21 PM IST
ಚಿತ್ರದುರ್ಗ: ಹರ್ಯಾಣ ರಾಜ್ಯದ ಮಾದರಿಯಲ್ಲಿ ನಿಯಮ ರೂಪಿಸಿ ಎಲ್ಲಾ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ವೇತನ ಶ್ರೇಣಿ ಹಾಗೂ ವೇತನ ಭತ್ಯೆ ನೀಡಿ ಸಮಾನ ನೌಕರರಿಗೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಭಾನುವಾರ ನಗರದ ಜಿಲ್ಲಾಧಿ ಕಾರಿ ಕಚೇರಿ ಎದುರು ಧರಣಿ ನಡೆಸಿದರು.
ಹೊರಗುತ್ತಿಗೆಯಲ್ಲಿ ಕೆಲಸ ಮಾಡುವ ನೌಕರರಿಗೆ ಮಧ್ಯವರ್ತಿಗಳಿಲ್ಲದೆ ನೇರವಾಗಿ ವೇತನ ಜಾರಿ ಮಾಡ ಬೇಕು. ಒಳಗುತ್ತಿಗೆ ನೌಕರರಿಗೆ ಇರುವ ಸೌಲಭ್ಯಗಳನ್ನು ಒದಗಿಸಬೇಕು. ಆರೋಗ್ಯ ಭಾಗ್ಯ ಯೋಜನೆಯನ್ನು ಎಲ್ಲಾ ನೌಕರರಿಗೆ ವಿಸ್ತರಿಸಬೇಕು. ಕೇಂದ್ರ ಸರ್ಕಾರ ನೀಡುವ ಬೋನಸ್ ಹೆಚ್ಚಳ ಪ್ರಕ್ರಿಯೆ ಆರಂಭಿಸಿ ಎಂದು ಒತ್ತಾಯಿಸಿದರು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಿ, ಎನ್ ಎಚ್‌ಎಂ ಸೇರಿದಂತೆ ಎಲ್ಲಾ ಹುದ್ದೆ ಗಳನ್ನು ಖಾಯಾಂ ಮಾಡಿಕೊಳ್ಳಬೇಕು. ಮುಷ್ಕರದ ಸಂದರ್ಭದಲ್ಲಿತಡೆಹಿಡಿದಿರುವ ವೇತನ ಪಾವತಿಸ ಬೇಕು. ನೌಕರರಿಗೆ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಪರಸ್ಪರ, ಸಾಮಾನ್ಯ ಹಾಗೂ ಖಾಲಿ ಇರುವ ಸ್ಥಳಗಳಿಗೆ ವರ್ಗಾವಣೆ ಮಾಡಲು ಅವಕಾಶ ಕಲ್ಪಿಸಬೇಕು. ಕಾಯಂ ಹುದ್ದೆಗೆ ನೇಮಕವಾದ ನಂತರ ಅಲ್ಲಿದ್ದವರನ್ನು ಬೇರೆಡೆ ವರ್ಗಾವಣೆ ಮಾಡುವುದನ್ನು ನಿಲ್ಲಿಸಬೇಕು. ಕಾಯಂ ನೌಕರರಿಗೆ ನೀಡುವಂತೆ ಹೊರಗುತ್ತಿಗೆ ನೌಕರರಿಗೂ ಸಾವು, ಅಂಗವೈಕಲ್ಯ ಮತ್ತಿತರ ಸಂದರ್ಭಗಳಲ್ಲಿ ಸೂಕ್ತ ಪರಿಹಾರ ಒದಗಿಸಬೇಕು. ಸಣ್ಣಪುಟ್ಟ ಕಾರಣಗಳಿಗೆಕೆಲಸದಿಂದ ತೆಗೆಯುವ ಅನಾಗರಿಕ ಪದ್ಧತಿಯನ್ನು ಕೈ ಬಿಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು. ಎಲ್ಲಾ ಬೇಡಿಕೆಗಳು ಈಡೇರುವವರೆಗೆ ಯಾವುದೇ ಒತ್ತಡ ಬಂದರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಬದಲಾಗಿ ಪ್ರತಿ ದಿನ ಒಂದು ತಾಸು ಮುಷ್ಕರ ನಡೆಸುತ್ತೇವೆ ಎಂದು ತಿಳಿಸಿದರು.
ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾ| ರುದ್ರೇಶ್, ಉಪಾಧ್ಯಕ್ಷ ಡಾ| ಮಹೇಂದ್ರಕುಮಾರ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.