ವಿಜೃಂಭಣೆಯ ಚಿಲುಮೆ ರುದ್ರಸ್ವಾಮಿ ರಥೋತ್ಸವ
Team Udayavani, Feb 5, 2020, 5:39 PM IST
ಪರಶುರಾಂಪುರ: ಸಮೀಪದ ನಾಗಗೊಂಡನಹಳ್ಳಿ ಗ್ರಾಮದ ಬಳಿಯ ವೇದಾವತಿ ನದಿ ದಡದಲ್ಲಿನ ಶ್ರೀ ಚಿಲುಮೆ ರುದ್ರಸ್ವಾಮಿ ಮಠದಲ್ಲಿ ಮಂಗಳವಾರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಸಾನ್ನಿಧ್ಯ ವಹಿಸಿದ್ದರು. ಗದ್ದುಗೆ ಮಠದ ಚರಮೂರ್ತಿಗಳಾದ ಶ್ರೀ ಬಸವಕಿರಣ ಸ್ವಾಮೀಜಿ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ರಥೋತ್ಸವಕ್ಕೆ ಚಾಲನೆ ನೀಡಿದರು.
ನಾಗಗೊಂಡನಹಳ್ಳಿಯ ಹನ್ನೆರಡು ಕೈವಾಡಸ್ಥರು, ರೈತ ಮುಖಂಡ ಕೆ.ಪಿ. ಭೂತಯ್ಯ, ತಾಪಂ ಮಾಜಿ ಅಧ್ಯಕ್ಷ ಜಿ. ವೀರೇಶ್, ಶ್ರೀ ಗುರು ಚಿಲುಮೆ ರುದ್ರಸ್ವಾಮಿ ಗದ್ದುಗೆ ಮಠ ಸಮಿತಿ ಉಪಾಧ್ಯಕ್ಷ ಎಚ್. ಓಬಳೇಶಪ್ಪ, ಕಾರ್ಯದರ್ಶಿ ಜೆ.ಎಚ್. ಬೊಮ್ಮಯ್ಯ, ಸಹ ಕಾರ್ಯದರ್ಶಿ ಜಿ.ಟಿ. ರವಿಕುಮಾರ್, ಎಂ. ಉಮಾಮಹೇಶ್ವರಯ್ಯ, ರವಿಚಂದ್ರ, ಬಸವರಾಜು, ಪಾಲನೇತ್ರಪ್ಪ, ನರಸಿಂಹಪ್ಪ ಮೊದಲಾದವರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ರಥವನ್ನು ವಿವಿಧ ಹೂವುಗಳು, ಬಾಳೆಗೊನೆ, ಎಳನೀರಿನ ಗೊಂಚಲಿನಿಂದ ಅಲಂಕರಿಸಲಾಗಿತ್ತು. ರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ರಥಕ್ಕೆ ಹಣ್ಣು-ಕಾಯಿ ಸಮರ್ಪಿಸಿ ಭಕ್ತರು ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ರಥೋತ್ಸವಕ್ಕೂ ಮುನ್ನ ಮುಕ್ತಿ ಬಾವುಟ ಹರಾಜು ನಡೆಯಿತು. ಮೂರನೇ ಬಾರಿಯೂ ಜಾಜೂರು ಗ್ರಾಪಂ ಅಧ್ಯಕ್ಷೆ ಭೀಮಕ್ಕ 21 ಸಾವಿರ ರೂ.ಗಳಿಗೆ ಮುಕ್ತಿ ಬಾವುಟವನ್ನು ತಮ್ಮದಾಗಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.