ಜನರ ಆರೋಗ್ಯ ರಕ್ಷಣೆಗೆ ಗಮನ ಕೊಡಿ: ಡಾ| ನೀರಜ್‌

Team Udayavani, Aug 30, 2018, 11:08 AM IST

cta-2.jpg

ಚಿತ್ರದುರ್ಗ: ಮಾರಕ ಕಾಯಿಲೆಗಳನ್ನು ನಿಯಂತ್ರಿಸಲು ಸರ್ಕಾರ ಹಲವಾರು ಕಾರ್ಯಕ್ರಮ ಅನುಷ್ಠಾನಗೊಳಿಸಿದೆ. ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹೊಣೆಗಾರಿಕೆಯಿಂದ ಕೆಲಸ ಮಾಡುವ ಮೂಲಕ ಇವುಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಬಿ.ವಿ.ನೀರಜ್‌ ಕರೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಮದ ನಗರದಲ್ಲಿ ಬುಧವಾರ ಆಯೋಜಿಸಿದ್ದ ಲಸಿಕೆಗಳಿಂದ ತಡೆಗಟ್ಟಬಹುದಾದ ರೋಗಗಳ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಈ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಪೋಲಿಯೊ, ಬಿಸಿಜಿ, ಪೆಂಟಾ, ದಡಾರ, ಜಪಾನಿಸ್‌ ಎನ್‌ಸೆಫಾಲಿಟಿಸ್‌, ಧನುರ್ವಾಯು ಮತ್ತಿತರ ಮಾರಕ ರೋಗಗಳ ವಿರುದ್ಧ ಲಸಿಕೆ ನೀಡುವುದರ ಮೂಲಕ ಮಕ್ಕಳ ಆರೋಗ್ಯ ರಕ್ಷಣೆ ಮಾಡಲಾಗುತ್ತಿದೆ. ಅಲ್ಲದೆ ಮುಂದೆ ಮಕ್ಕಳಿಗೆ ಮಾರಕ ರೋಗಗಳು ತಗುಲದಂತೆ ಎಚ್ಚರ ವಹಿಸಲಾಗುತ್ತಿದೆ ಎಂದರು. 

ಜಿಲ್ಲಾಸ್ಪತ್ರೆ, ನಗರ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿ ಹಾಗೂ ಇತರೆ ಕ್ಷೇತ್ರ ಮಟ್ಟದ ಸಿಬ್ಬಂದಿಗಳ ಜ್ಞಾನ ವರ್ಧನೆಗೆ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಇದರ ಪ್ರಯೋಜನ ಪಡೆದುಕೊಂಡು ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ತಿಳಿಸಿದರು. 

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಪಿ.ಸಿ. ಕುಮಾರಸ್ವಾಮಿ, ಮಾರಕ ರೋಗಗಳಿಗೆ ಹಾಕಲಾಗುತ್ತಿರುವ ಲಸಿಕೆಗಳ ಸಂಗ್ರಹಣೆ, ನಿರ್ವಹಣೆ, ಶೀತಲೀಕರಣ ಬಗ್ಗೆ ಮತ್ತು ಲಸಿಕೆಗಳ ಉತ್ಪಾದನಾ ಸ್ಥಳದಿಂದ ಲಸಿಕೆ ನೀಡುವ ಸ್ಥಳದವರೆಗೂ ನಿರ್ವಹಿಸಬೇಕಾದ ಕ್ರಮಗಳ ಮಾಹಿತಿ ನೀಡಿದರು. ಬಳ್ಳಾರಿಯ ಎಸ್‌ಎಂಒ ಡಾ| ಶ್ರೀಧರ್‌, ಮಾರಕ ರೋಗಗಳಿಗೆ ಯಾವ ಸಂದರ್ಭದಲ್ಲಿ ಯಾವ ಲಸಿಕೆ ಹಾಕಬೇಕು, ಯಾವ ರೋಗಕ್ಕೆ ಯಾವ ತರಹದ ಲಸಿಕೆಗಳನ್ನು ನೀಡಬೇಕು ಎನ್ನುವ ವಿಧಾನ ಮತ್ತು ಮಾಹಿತಿಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳುವಂತೆ ಸಲಹೆ ನೀಡಿದರು. ಹೊಸದುರ್ಗ ತಾಲೂಕು ವೈದ್ಯಾಧಿಕಾರಿ ಡಾ| ಕವಿತಾ, ಆಯಾ ಆಸ್ಪತ್ರೆಗಳ ವ್ಯಾಪ್ತಿಯ ಕ್ಷೇತ್ರ ಮಟ್ಟದಲ್ಲಿ ಲಸಿಕೆಯ ಬೇಡಿಕೆ ಪಟ್ಟಿ ತಯಾರಿಸುವುದು, ಕ್ರಿಯಾಯೋಜನೆ ಸಿದ್ಧಪಡಿಸುವುದರ ಬಗ್ಗೆ ತಿಳಿಸಿಕೊಟ್ಟರು.

ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಮುದಾಯಶಾಸ್ತ್ರ ವಿಭಾಗದ ಡಾ| ನಾಗೇಂದ್ರ ಗೌಡ, ಮಕ್ಕಳ ತಜ್ಞ ಡಾ| ಬಸಂತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ಬಿ. ಜಯಮ್ಮ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎನ್‌.ಎಸ್‌. ಮಂಜುನಾಥ ಮತ್ತಿತರರು ಇದ್ದರು. ಜಿಲ್ಲೆಯ ಎಲ್ಲಾ ತಾಲೂಕು ವೈದ್ಯಾಧಿಕಾರಿ, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಮೇಲ್ವಿಚಾರಕರು, ಆರೋಗ್ಯ ಸಿಬ್ಬಂದಿ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಆರೋಗ್ಯ ಇಲಾಖೆಯಿಂದ ಪೋಲಿಯೊ, ಬಿಸಿಜಿ, ಪೆಂಟಾ, ದಡಾರ, ಜಪಾನಿಸ್‌ ಎನ್‌ಸೆಫಾಲಿಟಿಸ್‌, ಧನುರ್ವಾಯು ಮತ್ತಿತರ ಮಾರಕ ರೋಗಗಳ ವಿರುದ್ಧ ಲಸಿಕೆ ನೀಡುವುದರ ಮೂಲಕ ಮಕ್ಕಳಿಗೆ ಆರೋಗ್ಯ ರಕ್ಷಣೆ ಮಾಡಲಾಗುತ್ತಿದೆ. ಅಲ್ಲದೆ ಮುಂದೆ ಮಕ್ಕಳಿಗೆ ಮಾರಕ ರೋಗಗಳು ತಗುಲದಂತೆ ಎಚ್ಚರ ವಹಿಸಲಾಗುತ್ತಿದೆ.
 ಡಾ| ಬಿ.ವಿ. ನೀರಜ್‌, ಡಿಎಚ್‌ಒ.

ಟಾಪ್ ನ್ಯೂಸ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.