ಬಿಜೆಪಿ ಸರ್ಕಾರದಿಂದ ಜನರಿಗೆ ಭ್ರಮನಿರಸನ
ಜೆಡಿಎಸ್-ಬಿಜೆಪಿ ಮುಖಂಡರು ಬೇಷರತ್ ಆಗಿ ಕಾಂಗ್ರೆಸ್‌ಗೆ ಸೇರ್ಪಡೆ: ಶಾಸಕ ಟಿ. ರಘುಮೂರ್ತಿ
Team Udayavani, May 3, 2022, 3:56 PM IST
ಚಳ್ಳಕೆರೆ: ರಾಜ್ಯದಲ್ಲಿ ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ಎಲ್ಲಾ ರಂಗದಲ್ಲೂ ಆಡಳಿತ ಪಕ್ಷ ಬಿಜೆಪಿ ವಿಫಲವಾಗಿದೆ. ಹಾಗಾಗಿ ಬಿಜೆಪಿಯ ಹಲವಾರು ಕಾರ್ಯಕರ್ತರು, ಮುಖಂಡರು ಬೇಷರತ್ತಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರೂ ಸಹ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರ ಕಾರ್ಯವೈಖರಿ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಶಾಸಕ ಟಿ. ರಘುಮೂರ್ತಿ ತಿಳಿಸಿದರು.
ಪರಶುರಾಂಪುರದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಸ್ವಾಗತಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ರಾಷ್ಟ್ರ ಹಾಗೂ ರಾಜ್ಯದಲ್ಲಿ ಬಡವರು, ದೀನ ದಲಿತರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗಗಳ ಪರವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್ ಪಕ್ಷದ ಆಡಳಿತ ಇದ್ದಾಗ ಬೆಲೆ ಏರಿಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿತ್ತು. ಆದರೆ ಇತ್ತೀಚೆಗೆ ಪ್ರತಿನಿತ್ಯ ಬೆಲೆ ಏರಿಕೆಯೇ ಪ್ರಧಾನ ವಿಷಯವಾಗಿಬಿಟ್ಟಿದೆ ಎಂದು ದೂರಿದರು.
ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯ ಶ್ರೀನಿವಾಸ್ ಮಾತನಾಡಿ, ಕಳೆದ 9 ವರ್ಷಗಳಿಂದ ಶಾಸಕ ಟಿ. ರಘುಮೂರ್ತಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಎಲ್ಲಾ ವರ್ಗದ ಜನರ ಹಿತಕ್ಕೆ ದುಡಿದಿದ್ದಾರೆ. ಮುಂಬರುವ ಚುನಾವಣೆಯಲ್ಲೂ ಅವರ ಗೆಲುವಿನ ಅಗತ್ಯವಿದೆ ಎಂದರು.
ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯರಾದ ಹನುಮಕ್ಕ, ರಂಗಮ್ಮ, ಹನುಮಂತರಾಯ, ನಾಗರಾಜು, ಬಿಜೆಪಿ ಮುಖಂಡರಾದ ರುದ್ರೇಶ್, ಪ್ರಕಾಶ್, ಸಿದ್ದೇಶ್, ಚಿಕ್ಕಣ್ಣ, ಪ್ರಹ್ಲಾದ್, ಈರಣ್ಣ, ಅಂಜನಮೂರ್ತಿ, ಹನುಮಂತಪ್ಪ, ವೀರೇಶ್, ಶರಣಪ್ಪ, ಬಿ. ರಾಮಾಂಜನೇಯ ಮೊದಲಾದವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪರಶುರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ವೆಂಕಟೇಶ್, ಕಾಂಗ್ರೆಸ್ ಮುಖಂಡರಾದ ಚನ್ನಕೇಶವ, ಚೌಳೂರು ಪ್ರಕಾಶ್, ನಿಜಲಿಂಗಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ. ಶಿವಕುಮಾರಸ್ವಾಮಿ, ಪರಶುರಾಂಪುರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಾಬು, ದೊಡ್ಡರಂಗಪ್ಪ, ನಗರಸಭಾ ಸದಸ್ಯ ಬಿ.ಟಿ. ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.
ಕಾಂಗ್ರೆಸ್ ಪಕ್ಷದ ಆಡಳಿತ ಇದ್ದಾಗ ಬೆಲೆ ಏರಿಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿತ್ತು. ಆದರೆ ಇತ್ತೀಚೆಗೆ ಪ್ರತಿನಿತ್ಯ ಬೆಲೆ ಏರಿಕೆಯೇ ಪ್ರಧಾನ ವಿಷಯವಾಗಿರುವುದು ದುರಂತ. -ಟಿ. ರಘುಮೂರ್ತಿ, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.