ಕೃಷಿ ಪಂಪ್‌ಸೆಟ್‌ಗೆ ಹಗಲಲ್ಲೇ ವಿದ್ಯುತ್
Team Udayavani, Jan 17, 2018, 9:51 AM IST
ಚಿತ್ರದುರ್ಗ: ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಆರು ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡುವ ಉದ್ದೇಶವಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು. ಹೊಸದುರ್ಗದ ಬೆಸ್ಕಾಂ ಕಚೇರಿ ಆವರಣದಲ್ಲಿ ಮಂಗಳವಾರ
220/66/11 ಕೆವಿ ವಿದ್ಯುತ್ ಸ್ವೀಕರಣಾ ಹಾಗೂ ಉಪಕೇಂದ್ರಗಳ ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಪಂಪ್‌ಸೆಟ್‌ಗಳಿಗೆ ಈಗ ಹಗಲು ಮತ್ತು ರಾತ್ರಿ ವಿದ್ಯುತ್ ನೀಡಲಾಗುತ್ತಿದೆ. ರಾತ್ರಿ ತ್ರಿಫೇಸ್ ವಿದ್ಯುತ್ ನೀಡುವುದರಿಂದ ಗುಡ್ಡಗಾಡು ಪ್ರದೇಶ, ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಭಯ ಇರುತ್ತದೆ. ಆದ್ದರಿಂದ ರಾತ್ರಿ ಬದಲು ಹಗಲಲ್ಲೇ ನಿರಂತರವಾಗಿ 6 ಗಂಟೆ ವಿದ್ಯುತ್ ನೀಡಬೇಕೆಂದು ಬೇಡಿಕೆ ಇದೆ ಎಂದರು. ಪ್ರತಿ ತಾಲೂಕಿನಲ್ಲಿ 60 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗಿದ್ದು, ಇದು ಸಾಕಾರವಾದಲ್ಲಿ ಹಗಲು ವೇಳೆ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡಬಹುದು ಎಂದು ತಿಳಿಸಿದರು.
ರಾಜ್ಯದಲ್ಲಿ ಒಟ್ಟು 25 ಲಕ್ಷ ಕೃಷಿ ಪಂಪ್‌ಸೆಟ್‌ಗಳಿದ್ದು ಇದರಲ್ಲಿ 5 ಲಕ್ಷ ಕೃಷಿ ಪಂಪ್‌ಸೆಟ್‌ಗಳಿಗೆ ಅಕ್ರಮ ಸಕ್ರಮ ಯೋಜನೆ ಅಡಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.