ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಿ
Team Udayavani, Jan 14, 2021, 3:57 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಜ. 16 ರಂದು ಮೊದಲ ಹಂತದ ಕೋವಿಡ್ ಲಸಿಕೆ ವಿತರಣೆಯಾಗಲಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಹಾಗೂ ಫ್ರಂಟ್ ಲೈನ್ ವರ್ಕರ್ಗೆ ಲಸಿಕೆ ನೀಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲಸಿಕೆ ವಿತರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್-19 ಲಸಿಕೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಲಸಿಕಾ ಕೇಂದ್ರಗಳಲ್ಲಿ ಜನಸಂದಣಿ ಉಂಟಾಗದಂತೆ ಲಸಿಕಾ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆಗೆ ವ್ಯವಸ್ಥಿತ ಯೋಜನೆ ರೂಪಿಸಿಕೊಳ್ಳಬೇಕು ಎಂದರು.
ಲಸಿಕೆ ಸಂಗ್ರಹಿಸಿಡಲು ಜಿಲ್ಲೆಯಲ್ಲಿ ಪ್ರಾದೇಶಿಕ ದಾಸ್ತಾನು ಕೇಂದ್ರವನ್ನು ತೆರೆಯಲಾಗಿದ್ದು, ಈ ಕೇಂದ್ರದಿಂದ ಬಳ್ಳಾರಿ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಿಗೆ ಲಸಿಕೆ ಪೂರೈಕೆಯಾಗಲಿದೆ. ಲಸಿಕೆ ಪೂರೈಕೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾಗಬಾರದು. ವ್ಯವಸ್ಥಿತವಾಗಿ ಲಸಿಕೆ ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇದನ್ನೂ ಓದಿ:ಕೋವಿಡ್ ಗೆ ರಾಮಬಾಣ: ಮಂಡ್ಯ ಜಿಲ್ಲೆಗೆ ಬಂದಿಳಿದ ಕೋವಿಶೀಲ್ಡ್ ಲಸಿಕೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಪಾಲಾಕ್ಷ ಮಾತನಾಡಿ, ಲಸಿಕೆ ನೀಡಲು 197 ಸ್ಟೇಷನ್ ಗಳನ್ನು ಮಾಡಲಾಗಿದ್ದು, ಇದಕ್ಕಾಗಿ 187 ಲಸಿಕಾಕಾರಿಗಳು ಇದ್ದಾರೆ. ಜಿಲ್ಲೆಯ 106 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಲಸಿಕೆ ಪಡೆದವರಿಗೆ ವೇಟಿಂಗ್ ಹಾಲ್, ಲಸಿಕಾ ಕೊಠಡಿ, ನಿಗಾವಣೆ ಕೊಠಡಿ ಸೇರಿದಂತೆ ಲಸಿಕೆಗಾಗಿ ಮೂರು ಕೊಠಡಿಗಳು ಬೇಕಾಗುತ್ತವೆ. ಈ ನಿಟ್ಟಿನಲ್ಲಿ ಕಿರಿಯ ಆರೋಗ್ಯ ಸಹಾಯಕಿಯರಿಗೆ, ಆಶಾ ಕಾರ್ಯಕರ್ತೆಯರಿಗೆ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು. ಕೋವಿಡ್ ಲಸಿಕೆ ದಾಸ್ತಾನಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಾದೇಶಿಕ ಕೇಂದ್ರ ಪ್ರಾರಂಭಿಸಲಾಗಿದೆ. ಇಲ್ಲಿನ ದಾಸ್ತಾನು ಕೇಂದ್ರದಲ್ಲಿ ಸುಮಾರು 30 ಲಕ್ಷ ಡೋಸ್ ಸಂಗ್ರಹಿಸಿಡಲು ಅವಕಾಶವಿದೆ ಎಂದು ತಿಳಿಸಿದರು.
ಸಭೆಯಲ್ಲಿ ಆರ್‌ಸಿಎಚ್ ಅ ಧಿಕಾರಿ ಡಾ| ಕುಮಾರಸ್ವಾಮಿ, ಜಿಪಂ ಸಿಇಒ ಡಾ| ಕೆ.ನಂದಿನಿದೇವಿ, ರಾಜ್ಯ ಸರ್ವೇಕ್ಷಣಾ ಧಿಕಾರಿ ಡಾ| ಶ್ರೀಧರ್, ಜಿಲ್ಲಾ ಸರ್ವೇಕ್ಷಣಾ ಧಿಕಾರಿ ಡಾ| ತುಳಸಿರಂಗನಾಥ್, ಡಿಡಿಪಿಐ ರವಿಶಂಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾ ನಾಯ್ಕ, ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧೀಕ್ಷಕ ಡಾ| ಪಾಲಾಕ್ಷಯ್ಯ ಮತ್ತಿತರರ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.