ತಂಬಾಕು ನಿಷೇಧ ನಾಮಫಲಕ ಕಡ್ಡಾಯ
Team Udayavani, Dec 1, 2020, 4:53 PM IST
ಚಿತ್ರದುರ್ಗ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ತಂಬಾಕು ನಿಷೇಧ ಕುರಿತು ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ತಂಬಾಕು ನಿಷೇಧದ ಕುರಿತು ನಾಮಫಲಕ ಹಾಕಬೇಕು. ಪ್ರೇಕ್ಷಣೀಯ ಸ್ಥಳಗಳಾದ ಐತಿಹಾಸಿಕ ಕೋಟೆ, ಜೋಗಿಮಟ್ಟಿ, ಹೆಚ್ಚು ಜನಸಂದಣಿ ಇರುವ ತರಕಾರಿ ಮಾರುಕಟ್ಟೆ, ಬಸ್ ನಿಲ್ದಾಣ, ಎಪಿಎಂಸಿ ಯಾರ್ಡ್ ಗಳಲ್ಲಿ ತಂಬಾಕು ನಿಷೇಧದ ಕುರಿತು ಗೋಡೆಬರಹ ಹಾಕಬೇಕು. ತಂಬಾಕಿನಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕೆಂದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜಂಟಿ ಖಾತೆಯಲ್ಲಿ ಸಂಗ್ರಹಿಸಿದ ಒಟ್ಟು 2,83,849 ರೂ. ಮೊತ್ತದಲ್ಲಿ ಸೆಕ್ಷನ್-4ರ ನಾಮಫಲಕಗಳನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆಸ್ಪತ್ರೆಗಳಲ್ಲಿ ಗೋಡೆ ಬರಹ ಮತ್ತು ಜಾಗೃತಿ ಮೂಡಿಸಲು ಸಭೆ ಅನುಮೋದನೆ ನೀಡಿತು.
ರಾಜ್ಯ ತಂಬಾಕು ನಿಯಂತ್ರಣಕೋಶದ ವಿಭಾಗೀಯ ಸಂಯೋಜಕ ಮಹಂತೇಶ್ ಮಾತನಾಡಿ, ಕೋಟ್ಪಾ 2003ರ ಕಾಯ್ದೆಯಲ್ಲಿ ಒಟ್ಟು 33 ಸೆಕ್ಷನ್‌ಗಳಿವೆ. ಇದರಲ್ಲಿ ಸೆಕ್ಷನ್ 4, ಸೆಕ್ಷನ್ 5, ಸೆಕ್ಷನ್ 6, ಸೆಕ್ಷನ್ 6ಬಿ, ಸೆಕ್ಷನ್ 7 ಹೆಚ್ಚು ಬಳಕೆಯಲ್ಲಿವೆ. ಸೆಕ್ಷನ್-6ಬಿ ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಗಜದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿûಾರ್ಹ ಅಪರಾಧವಾಗಿದೆ. ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ತಮ್ಮ ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಜಿಲ್ಲೆಯಲ್ಲಿರುವ ಶಿಕ್ಷಣ ಸಂಸ್ಥೆಗಳ ಮಾಹಿತಿಯನ್ನು ಪಡೆದು ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳನ್ನು ತಂಬಾಕು ಮುಕ್ತ ಶೆ„ಕ್ಷಣಿಕ ಸಂಸ್ಥೆಯನ್ನಾಗಿ ಘೋಷಿಸಲಾಗುವುದು. ಇದಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ತುಳಸಿರಂಗನಾಥ್ ಮಾತನಾಡಿದರು. ಸಭೆಯಲ್ಲಿ ಎಎಸ್‌ಪಿ ಎಂ.ಬಿ. ನಂದಗಾವಿ, ಜಿಲ್ಲಾ ಸಲಹೆಗಾರ ಪ್ರಭುದೇವ್, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಭಾಗವಹಿಸಿದ್ದರು.
ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ : ಕೋಟ್ಪಾ-2003ರ ಕಾಯ್ದೆಯ ಅಡಿಯಲ್ಲಿ ಸೆಕ್ಷನ್-5ರ ಅಡಿಯಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ಮತ್ತು ಸೆಕ್ಷನ್-7 ಅಡಿಯಲ್ಲಿ ನಿರ್ದಿಷ್ಟ ಪಡಿಸಿದ ಎಚ್ಚರಿಕೆಯ ಸಂದೇಶ (85%) ಇಲ್ಲದಿರುವ ಉತ್ಪನ್ನಗಳು ಹಾಗೂ ಬಿಡಿ-ಬಿಡಿಯಾಗಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳ ಮೇಲೆ ಎಫ್‌ಐಆರ್ ದಾಖಲಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.