ಪ್ರಧಾನಿಯಿಂದ ಕುಶಲಕರ್ಮಿಗಳಿಗೆ ಉತ್ತೇಜನ: ಗಂಗಾಧರ
Team Udayavani, Dec 17, 2018, 5:34 PM IST
ಚಿತ್ರದುರ್ಗ: ನರೇಂದ್ರ ಮೋದಿ ಪ್ರಧಾನಮಂತ್ರಿಯಾದ ಮೇಲೆ ಕರಕುಶಲಕರ್ಮಿಗಳನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಿದ್ದಾರೆ ಎಂದು ಹಿಂದೂಪುರದ ಗೋಲ್ಡ್‌ಸ್ಮಿತ್ ಅಕಾಡೆಮಿಯ ಗಂಗಾಧರ ಆಚಾರ್ ಹೇಳಿದರು.
ನಗರದ ಬುರುಜನಹಟ್ಟಿ ರಸ್ತೆಯ ವಿಶ್ವಕರ್ಮ ಕಲ್ಯಾಣಮಂಟಪದಲ್ಲಿ ಮಧುರೈನ ಗೋಲ್ಡ್‌ಸ್ಮಿತ್ ಅಕಾಡೆಮಿ ಪ್ರೈವೇಟ್ ಲಿಮಿಟೆಡ್, ಜೆಮ್ ಆ್ಯಂಡ್ ಜ್ಯುವೆಲ್ಲರಿ ಸ್ಕಿಲ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ಚಿತ್ರದುರ್ಗ ವಿಶ್ವಕರ್ಮ ಸಮಾಜದ ಆಶ್ರಯದಲ್ಲಿ ಭಾನುವಾರ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ತರಬೇತಿ ಹಾಗೂ ಪರೀಕ್ಷಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಎನ್‌ಡಿಎ ಸರ್ಕಾರದ ನೇತೃತ್ವ ವಹಿಸಿರುವ ಮೋದಿ, ಗೋಲ್ಡ್‌ಸ್ಮಿತ್, ಬ್ಲಾಕ್‌ಸ್ಮಿತ್, ಕಾಪ್ಲೆಂಟರ್, ಫೋಟೊಗ್ರಾಫರ್
ಸೇರಿದಂತೆ ಮತ್ತಿತರ ಕುಶಲಕರ್ಮಿಗಳನ್ನು ಗುರುತಿಸಿ ತರಬೇತಿ ಕೊಡಿಸಿ ಪ್ರಮಾಣಪತ್ರ ನೀಡುವ ಕೆಲಸ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ತರಬೇತಿ ಪಡೆದು ಅಧಿಕೃತ ಪ್ರಮಾಣಪತ್ರ ಹೊಂದಿದ ಗೋಲ್ಡ್‌ಸ್ಮಿತ್‌ಗಳಿಗೆ ಬ್ಯಾಂಕ್‌ಗಳಲ್ಲಿ, ಕಾರ್ಪೊರೆಟ್ ಜ್ಯುವೆಲ್ಲರಿ ಕಂಪನಿಗಳಲ್ಲಿ ಕೆಲಸ ನಿರ್ವಹಿಸಲು ಸಹಕಾರಿಯಾಗಲಿದೆ. ಅಲ್ಲದೆ ಸಾಲ ಸೌಲಭ್ಯ ಕೂಡ ದೊರೆಯಲಿದೆ ಎಂದರು.
ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಎನ್. ಸತ್ಯನಾರಾಯಣ ಮಾತನಾಡಿ, ಚಿನ್ನ, ಬೆಳ್ಳಿ ಕುಶಲಕರ್ಮಿಗಳನ್ನು ಯಾವ ಸರ್ಕಾರವೂ ಗುರುತಿಸಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ನಮ್ಮನ್ನು ಗುರುತಿಸಿ ಸಾಕಷ್ಟು ಅನುಕೂಲ ಮಾಡಿಕೊಡುತ್ತಿದ್ದಾರೆ. ಜಿಲ್ಲೆಯ ಆರು ತಾಲೂಕುಗಳಿಂದ 250ಕ್ಕೂ ಹೆಚ್ಚಿನ ಚಿನ್ನಾಭರಣ ವರ್ತಕರು ಕಳೆದ ಮೂರು ದಿನಗಳಿಂದ ನಡೆದ ತರಬೇತಿಯಲ್ಲಿ ಪಾಲ್ಗೊಂಡಿದ್ದರು ಎಂದರು. ತಮಿಳುನಾಡಿನ ಗೋಲ್ಡ್‌ಸ್ಮಿತ್ ಅಕಾಡೆಮಿಯ ಮಣಿವಾಸನ್ ಮತ್ತು ನವನೀತ್, ಕೋಲ್ಕತ್ತಾದ ಶಶಾಂಕ್, ಮಂಗಳೂರಿನ ದಾಮೋದರ್, ಚಿತ್ರದುರ್ಗ ವಿಶ್ವಕರ್ಮ ಸಮಾಜದ ಅಧ್ಯಕ್ಷ ಎ. ಶಂಕರಾಚಾರ್, ಯುವ ಸಮಾಜದ ಕಾರ್ಯಾಧ್ಯಕ್ಷ ಎಂ. ಶಂಕರಮೂರ್ತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.