ರಾಜ್ಯಪಾಲರ ಕ್ರಮ ಖಂಡಿಸಿ ಪ್ರತಿಭಟನೆ
Team Udayavani, May 19, 2018, 5:59 PM IST
ಚಿತ್ರದುರ್ಗ: ಸಂವಿಧಾನ ಬದ್ಧವಾಗಿ ಸರಳ ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ಕ್ರಮ ಖಂಡಿಸಿ, ಸಂವಿಧಾನ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಎಂದು
ಆಗ್ರಹಿಸಿ ಸಾಮಾಜಿಕ ಸಂಘರ್ಷ ಸಮಿತಿ, ಕರ್ನಾಟಕ ವಿದ್ಯಾರ್ಥಿ ಒಕ್ಕೂಟ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ನಿವೃತ್ತ ನೌಕರರ ಒಕ್ಕೂಟದ ಪದಾಧಿಕಾರಿಗಳು, ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಜೆಪಿ ಕಮಲಕರ್ತರಂತೆ ವರ್ತಿಸುತ್ತಿದ್ದಾರೆ. ಇಂತಹ ರಾಜ್ಯಪಾಲರಿಂದ ಕರ್ನಾಟಕ ರಾಜ್ಯದ ಒಳಿತು ಬಯಸುವುದು ದೊಡ್ಡ ತಪ್ಪಾಗಲಿದೆ. 117 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪತ್ರ ಸಲ್ಲಿಸಿದರೂ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಅವಕಾಶ ನೀಡುವ ಬದಲು ಪ್ರಧಾನಿ ಮೋದಿ ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ.
ಸರಳ ಬಹುಮತ ಇಲ್ಲದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವುದು ಅಕ್ಷಮ್ಯ, ಸಂವಿಧಾನ ಬಾಹಿರ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಡೀ ಬಿಜೆಪಿ ನಡೆ ನೋಡಿದರೆ ಕುದುರೆ ವ್ಯಾಪಾರಕ್ಕೆ ಬಿಜೆಪಿ ನಾಯಕರು ಸಿದ್ಧರಿದ್ದಾರೆ ಇದು ಪ್ರಧಾನಿ ಮೋದಿ ಅವರ ಹೇಳಿಕೆಯಿಂದ ತಿಳಿಯಲಿದೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೋ ಅಥವಾ ಸರ್ವಾಧಿಕಾರಿ ಆಡಳಿತ ವ್ಯವಸ್ಥೆಯಲ್ಲಿದ್ದೇವೋ ತಿಳಿಯುತ್ತಿಲ್ಲ ಎಂದು ದೂರಿದರು.
ಗೋವಾದಲ್ಲಿ 2 ಸ್ಥಾನ ಗೆದ್ದ ಬಿಜೆಪಿ ಆಡಳಿತ ಮಾಡಬಹುದು, ಮೇಘಾಲಯ, ಬಿಹಾರ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಕಡಿಮೆ ಸೀಟು ಪಡೆದು ಬಿಜೆಪಿ ಮತ್ತು ಮೈತ್ರಿ ಕೂಟ ಆಡಳಿತ ಮಾಡಬಹುದು. ಆದರೆ, ಕರ್ನಾಟಕ ರಾಜ್ಯದಲ್ಲಿ ಕಡಿಮೆ ಸೀಟು ಪಡೆದವರು ಸರ್ಕಾರ ರಚಿಸುವುದು ಪ್ರಜಾಪ್ರಭುತ್ವದ ಕಗ್ಗೊಲೆಯೇ ಎಂದು ಪ್ರಶ್ನಿಸಿ, ಬಿಜೆಪಿ ಧೋರಣೆ ವಿರುದ್ಧ ಹೆಚ್ಚಿನ ಸೀಟು ಪಡೆದ ಆ ರಾಜ್ಯಗಳ ಪಕ್ಷಗಳಿಗೆ ಯಾಕೆ ಸರ್ಕಾರ ರಚಿಸಲು ಅವಕಾಶ ನೀಡಲಿಲ್ಲ. ಸಂವಿಧಾನವನ್ನು ತಮಗೆ ತಿಳಿದಂತೆ ಅರ್ಥೈಸಿಕೊಳ್ಳುವ ಬಿಜೆಪಿ ನಾಯಕರಿಗೆ ನಾಚಿಕೆ ಆಗಬೇಕು ಎಂದು ಧಿಕ್ಕಾರ ಕೂಗಿದರು.
ಈ ಹಿಂದೆ ವಿಧಾನಸಭಾಧ್ಯಕ್ಷರಾಗಿ ಬೋಪಯ್ಯ ಸದನದ ಗೌರವ ಹಾಳು ಮಾಡಿದವರು. ನಾಳೆ ಇಂತಹ ವ್ಯಕ್ತಿಗಳಿಂದ
ಹೇಗೆ ನ್ಯಾಯ ಸಿಗಲು ಸಾಧ್ಯ ಎಂದು ಆತಂಕ ವ್ಯಕ್ತಪಡಿಸಿದರು. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯಡಿಯೂರಪ್ಪ ಅವರಿಗೆ ಬಹುಮತ ಸಾಬೀತಿಗೆ 15 ದಿನಗಳ ಕಾಲಾವಕಾಶ ನೀಡಿರುವುದರ ಹಿಂದೆ ಬಿಜೆಪಿಗರಿಗೆ ಕುದುರೆ
ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡುವ ತಂತ್ರಗಾರಿಕೆ ಇದೆ. ಸುಪ್ರೀಂಕೋರ್ಟ್ ಇದನ್ನು ತೆಡೆದು ಮೇ 19ರಂದೇ ಬಹುಮತ ಸಾಬೀತು ಮಾಡುವಂತೆ ಆದೇಶ ಮಾಡಿರುವುದು ಸ್ವಲ್ಪ ಸಮಾಧಾನ ತರುವ ವಿಚಾರವಾಗಿದೆ.
ಆದರೆ, ಬಿಜೆಪಿ ಸಂವಿಧಾನ ವಿರೋಧ ಕೃತ್ಯ ಎಸಗಲ್ಲ ಎನ್ನವುದು ಏನು ಖಚಿತ ಎಂದು ಪ್ರಶ್ನಿಸಿ ರಾಜಕೀಯ ತೀರ್ಮಾನಗಳನ್ನು ಕೈಗೊಳ್ಳುವುದು ರಾಜ್ಯಪಾಲರ ಸ್ಥಾನದ ಘನತೆಗೆ ಅವಮಾನ ಮಾಡಿದಂತೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.