ಖಾಸಗೀಕರಣ ಪ್ರಸ್ತಾಪ ಹಿಂಪಡೆಯಲು ಆಗ್ರಹ

Team Udayavani, Oct 6, 2020, 6:06 PM IST

CD-TDY-1

ಚಿತ್ರದುರ್ಗ: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವವಿದ್ಯುತ್‌ ಕಂಪನಿಗಳ ಖಾಸಗೀಕರಣವನ್ನು ವಿರೋಧಿಸಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘ, ಕರ್ನಾಟಕ ವಿದ್ಯುತ್‌ ಮಂಡಳಿ ಇಂಜಿನಿಯರ್‌ಗಳ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಕೆಪಿಟಿಸಿಎಲ್‌ ಕಚೇರಿ ಆವರಣದಲ್ಲಿ ಸೇರಿದ ನೌಕರರು, ವಿದ್ಯುತ್‌ ಕ್ಷೇತ್ರವನ್ನುಯಾವ ಕಾರಣಕ್ಕೂ ಖಾಸಗೀಕರಣ  ಮಾಡಬಾರದು. ಒಂದು ವೇಳೆ ಖಾಸಗಿಯವರಿಗೆ ವಹಿಸಿದಲ್ಲಿ ಇದು ಕಾರ್ಮಿಕ ವಿರೋಧಿ ನೀತಿಯಾಗುತ್ತದೆ. ಇದರಿಂದ ರೈತರು, ಸಾರ್ವಜನಿಕರು ಹಾಗೂ ಜನಸಾಮಾನ್ಯರಿಗೆ ಹೊರೆಯಾಗುತ್ತದೆ ಎಂದು ಎಚ್ಚರಿಸಿದರು.

ಸೋಮವಾರದಿಂದ ಉತ್ತರ ಪ್ರದೇಶದಲ್ಲಿ ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರಾರಂಭಿಸಲಿರುವ  ಮುಷ್ಕರಕ್ಕೆ ನೈತಿಕ ಬೆಂಬಲ ನೀಡುವುದಾಗಿ ನೌಕರರು ತಿಳಿಸಿದರು. ಸಂಘದ ಸಿಇಸಿ ಸದಸ್ಯ ಹಾಗೂ

ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಕೆ.ಪಿ. ಬಸವರಾಜು ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್‌ ಖಾಸಗೀಕರಣಕ್ಕೆ ಅವಕಾಶ ನೀಡಬಾರದು. ಈಗಾಗಲೇ ಕೆಇಬಿ ನೌಕರರು ಉತ್ತಮವಾಗಿ ಕೆಲಸ ಮಾಡುತ್ತಿದ್ದು,ನಾಡಿನ ಜನಸಾಮಾನ್ಯರು, ರೈತರಿಗೆ ಸಾಕಷ್ಟು ಸೇವೆ ಸಲ್ಲಿಸುತ್ತಿದ್ದಾರೆ. ಒಂದು ವೇಳೆ ಖಾಸಗೀಕರಣಗೊಂಡಲ್ಲಿ ರೈತರಿಗೆ ಅನ್ಯಾಯವಾಗುತ್ತದೆ. ಜನಸಾಮಾನ್ಯರಿಗೆ ವಿದ್ಯುತ್‌ ದುಬಾರಿಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ರವಿಕುಮಾರ್‌, ಪ್ರಧಾನ ಕಾರ್ಯದರ್ಶಿ ಕೆ.ಎಂ. ತಿಪ್ಪೇಸ್ವಾಮಿ, ಕಾರ್ಯದರ್ಶಿ ಚಿದಾನಂದಪ್ಪ, ಲೆಕ್ಕಾಧಿಕಾರಿ ತಿಪ್ಪೇಶ್‌, ಎಇಇಗಳಾದ ರಮೇಶ್‌, ತಿಮ್ಮಣ್ಣ, ಬಾಲಕೃಷ್ಣ, ನಾಗೇಶ್‌, ವೀರೇಶ್‌, ಪ್ರಸನ್ನಕುಮಾರ್‌, ಮಹಮ್ಮದ್‌ ಮನ್ಸೂರ್‌ ಖಾನ್‌, ಶಿಲ್ಪಾ, ಗೀತಾಂಜಲಿ, ಶಾರದಮ್ಮ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.