ಅಂಡರ್‌ಪಾಸ್ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ
Team Udayavani, Feb 14, 2021, 4:07 PM IST
ಕೊಂಡ್ಲಹಳ್ಳಿ: ಬಿ.ಜಿ. ಕೆರೆ ಗ್ರಾಮದ ಹಳೆ ಊರಿನಿಂದ ಬಸವೇಶ್ವರ ಬಡಾವಣೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್‌ಪಾಸ್ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.
ಸಿಪಿಐ ತಾಲೂಕು ಕಾರ್ಯದರ್ಶಿ ಜಾಫರ್ ಷರೀಪ್ ಮಾತನಾಡಿ, ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ, ಹಾಸ್ಟೆಲ್, ಜಗಜೀವನ್‌ರಾಮ್ ಭವನ, ವಾಲ್ಮೀಕಿ ಭವನ, ಶುದ್ಧ ನೀರಿನ ಘಟಕಗಳಿವೆ. ಇದೇ ಮಾರ್ಗದಲ್ಲಿ ಊರಿನ 500-600 ರೈತರ ಜಮೀನುಗಳಿವೆ. ಆದರೆ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ. ಗ್ರಾಮದಂಚಿನಲ್ಲಿ ಮೀಸಲು ಮಲ್ಲೂರಳ್ಳಿ ಅರಣ್ಯ ಕಾವಲು ಪ್ರದೇಶ ಇದೆ. ಹೆದ್ದಾರಿ ಪ್ರಾಧಿಕಾರದ ಅ ಧಿಕಾರಿಗಳು ರಸ್ತೆ ನಿರ್ಮಿಸದೆ ಅನ್ಯಾಯ ಮಾಡಿದ್ದಾರೆ.
ಅಂಡರ್ ಪಾಸ್ ನಿರ್ಮಿಸಿಕೊಡುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದರಿಂದ ರಸ್ತೆ ಇಲ್ಲದಂತಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರು 2 ರಿಂದ 3 ಕಿಮೀ ಸುತ್ತುಹಾಕಿ ಸಂಚಾರ ಮಾಡಬೇಕಿದೆ ಎಂದು ದೂರಿದರು. ಸ್ಥಳಕ್ಕೆ ಭೇಟಿ ನೀಡಿದ ಪ್ರಭಾರಿ ತಹಶೀಲ್ದಾರ್ ಆನಂದಮೂರ್ತಿ ಮಾತನಾಡಿ, ನಿಮ್ಮ ಬೇಡಿಕೆ ನ್ಯಾಯಯುತವಾಗಿದೆ. ಹೆದ್ದಾರಿ ಪ್ರಾ ಧಿಕಾರ ಅ ಧಿಕಾರಿಗೆ ಸೋಮವಾರ ಸ್ಥಳಕ್ಕೆ ಬರಲು ಸೂಚಿಸಲಾಗಿದೆ. ಅವರೊಂದಿಗೆ ಈ ಬಗ್ಗೆ ಚರ್ಚಿಸೋಣ ಎಂದರು.
ಇದನ್ನೂ ಓದಿ:ತೋಟಕ್ಕೆ ಕಾಡುಕೋಣ ದಾಳಿ
ಆಗ ಧರಣಿಯನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಯಿತು. ಸಿಪಿಐ ಜೆ. ಉಮೇಶ್ ನಾಯಕ್, ಪಿಎಸ್‌ಐ ಎಂ. ಬಸವರಾಜ್ ಹಾಗೂ ಸಿಬ್ಬಂದಿ ಸೂಕ್ತ ಬಂದೋಬಸ್ತ್ ಮಾಡಿದ್ದರು.ಮುಖಂಡರಾದ ಗೊಂಚಿಗಾರ್ ಮಲ್ಲಿಕಾರ್ಜುನ್, ಗಾದ್ರಯ್ಯ, ಓಬಣ್ಣ, ಎಂ.ಪಿ. ನಾಗರಾಜ್, ಯರ್ರಿಸ್ವಾಮಿ, ಬೋರಯ್ಯ, ರಾಘವೇಂದ್ರ, ತಿಪ್ಪೇಶ್, ಕಾಮಯ್ಯ, ಮರಲ್ ಬಸಣ್ಣ, ಭೀಮಣ್ಣ, ಮಹೇಶ್, ನಾಗನಗೌಡ, ಜಯಮ್ಮ, ಗಂಗಮ್ಮ,ತಿಪ್ಪೇಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.