ವಸತಿ ರಹಿತರಿಗೆ ನಿವೇಶನ ಸೌಲಭ್ಯ ಕಲ್ಪಿಸಿ
Team Udayavani, Mar 3, 2020, 2:41 PM IST
ಮೊಳಕಾಲ್ಮೂರು: ತಾಲೂಕಿನ ಬಿ.ಜಿ. ಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ರಹಿತ ಬಡ ಕುಟುಂಬಗಳಿಗೆ ಕೂಡಲೇ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಭಾರತ್ ಕಮ್ಯೂನಿಸ್ಟ್ ಪಕ್ಷದ ಕಾರ್ಯಕರ್ತರು ಬಿ.ಜಿ. ಕೆರೆ ಗ್ರಾಪಂ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ ತಾಲೂಕು ಕಾರ್ಯದರ್ಶಿ ಜಾಫರ್ ಷರೀಫ್, ಬಿ.ಜಿ. ಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವಾರು ಗ್ರಾಮಗಳಲ್ಲಿ ಸುಮಾರು 527 ಬಡಕುಟುಂಬಗಳು ವಸತಿ ರಹಿತ ಫಲಾನುಭವಿಗಳಿದ್ದಾರೆ. ಹಾಗೆಯೇ ಈ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ 154 ಫಲಾನುಭವಿಗಳಿಗೆ ನಿವೇಶನ ರಹಿತರಿದ್ದಾರೆಂದು ಗ್ರಾಮ ಪಂಚಾಯತ್‌ದವರು ವರದಿ ನೀಡಿದ್ದಾರೆ. ಆದರೆ ಇದುವರೆಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ಮತ್ತು ವಸತಿ ರಹಿತರು ಅರ್ಜಿ ಸಲ್ಲಿಸಲು ಆಯಾ ಗ್ರಾಮಗಳಲ್ಲಿ ಯಾವುದೇ ತಮಟೆ ಹೊಡೆಯುವುದಾಗಲೀ, ಕರಪತ್ರಗಳನ್ನು ವಿತರಿಸುವುದಾಗಲೀ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿಲ್ಲ. ಗ್ರಾಪಂ ವ್ಯಾಪ್ತಿಯ ಬಡ ಕುಟುಂಬಗಳ ಜನಸಾಮಾನ್ಯರಲ್ಲಿ ವಸತಿಗಾಗಿ ಯಾವುದೇ ಅರ್ಜಿ ಸಲ್ಲಿಸದೆ ತಮಗೆ ಇಷ್ಟ ಬಂದವರನ್ನು ಗಣಕಯಂತ್ರಕ್ಕೆ ಸೇರಿಸಿ ಮಾಹಿತಿಯನ್ನು ಸರ್ಕಾರಕ್ಕೆ ರವಾನಿಸಲಾಗಿದೆ. ವಸತಿ ಸೌಲಭ್ಯದ ಗಣಕಯಂತ್ರವನ್ನು ಲಾಕ್ ಮಾಡಿಸಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸುವುದಾಗಿ ಹೇಳಿದರು.
2014 ರಲ್ಲಿ ನಿವೇಶನ ಮತ್ತು ವಸತಿ ರಹಿತರ ಅರ್ಜಿಗಳನ್ನು ಸಲ್ಲಿಸಲು “ಸೂರಿಗಾಗಿ ಸಮರ’ ಹೋರಾಟದಡಿಯಲ್ಲಿ 157 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಅರ್ಜಿ ಸಲ್ಲಿಸಿದ ಫಲಾನುಭವಿಗಳನ್ನು ನಿರ್ಲಕ್ಷಿಸಲಾಗಿದ್ದು, ಯಾವುದೇ ಫಲಾನುಭವಿಗಳನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಅರ್ಹರನ್ನು ವಸತಿ ಮತ್ತು ನಿವೇಶನ ರಹಿತರ ಪಟ್ಟಿಯಲ್ಲಿ ಸೇರಿಸಿ ವಸತಿ ಸೌಲಭ್ಯವನ್ನು ಕಲ್ಪಿಸಬೇಕಾಗಿದೆ. ಸರ್ಕಾರಿ ಜಮೀನುಗಳನ್ನು ಪತ್ತೆ ಹಚ್ಚಿ ಕೂಡಲೇ ವಸತಿ ರಹಿತರಿಗೆ ಖಾಲಿ ನಿವೇಶನಗಳನ್ನು ಹಂಚಿಕೆ ಮಾಡಿ ಸೂರು ಕಲ್ಪಿಸಬೇಕಾಗಿದೆ. ನರೇಗಾ ಯೋಜನೆಯಲ್ಲಿ ಕೂಲಿಕಾರರಿಗೆ ಕೂಲಿ ಕೆಲಸ ನೀಡಬೇಕು. ನರೇಗಾ ಯೋಜನೆಯಲ್ಲಿ ಯಂತ್ರಗಳನ್ನು ಬಳಸದೆ ಜನರಿಗೆ ಕೆಲಸ ನೀಡಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಇ-ಸ್ವತ್ತು ಫಲಾನುಭವಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡದೆ ನಿಗ ಪಡಿಸಿದ ದರದಂತೆ ಪಡೆದು ದರವನ್ನು ನಾಮಫಲಕದಲ್ಲಿ ನಮೂದಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಎಂ.ಬಸವರಾಜ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಪಾಲಯ್ಯ, ಬೋರಣ್ಣ, ಭೀಮಣ್ಣ, ಅಂಜಿನಿ, ಬಸಣ್ಣ, ಮೂರ್ತಿ, ಸುದೀಪ್, ಹರೀಶ್, ಗೋಪಿ, ದಿಲೀಪ್, ನಾಗರಾಜ್, ಪವನ್, ತಿಮ್ಮಣ್ಣ, ಬಸಣ್ಣ, ಮಹದೇವಿ, ಪಾಲಮ್ಮ, ಲಕ್ಷ್ಮೀದೇವಿ, ಜಯಮ್ಮ ಮತ್ತಿತರರು ಭಾಗವಹಿಸಿದ್ದರು.
ವಸತಿ ಮತ್ತು ನಿವೇಶನ ರಹಿತ ಫಲಾನುಭವಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ “ಸೂರಿಗಾಗಿ ಕೋಟಿ ಹೆಜ್ಜೆ’ ಎಂಬ ಕಾಲ್ನಡಿಗೆ ಜಾಥಾವನ್ನು ಕೈಗೊಳ್ಳಲಾಗಿತ್ತು. ಇದರ ಫಲವಾಗಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳು ಆಯಾ ಗ್ರಾಮ ಪಂಚಾಯತ್‌ಗಳಲ್ಲಿ ಅರ್ಜಿ ಸಲ್ಲಿಸಲಿದ್ದಾರೆ. ಮುಂದಿನ ದಿನಗಳಲ್ಲಿ ನಿವೇಶನದ ಹಕ್ಕಿಗಾಗಿ ಹೋರಾಟ ನಡೆಸಲಾಗುವುದು. –ಜಾಫರ್ ಷರೀಫ್, ಸಿಪಿಐ ತಾಲೂಕು ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.