ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Team Udayavani, Oct 11, 2020, 7:55 PM IST
ಚಿತ್ರದುರ್ಗ: ಮುರುಘಾ ಮಠದ ಮುಂಭಾಗದಲ್ಲಿರುವ ಕೆರೆ ಭರ್ತಿಯಾಗಿ ಮಠದ ಕುರುಬರಹಟ್ಟಿ ಗ್ರಾಮದೊಳಗೆ ನೀರು ನುಗ್ಗುವ ಅಪಾಯವಿದೆ. ಆದರೂ ಅಧಿಕಾರಿಗಳು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ಧರಣಿ ನಡೆಸಿದ ಪ್ರತಿಭಟನಾಕಾರರು, ಈ ಹಿಂದೆ 2010ರಲ್ಲಿ ಮಳೆಯಾದಾಗ ಈ ಭಾಗದಲ್ಲಿ ಸಾಕಷ್ಟು ಹಾನಿಯಾಗಿತ್ತು. ಈ ವರ್ಷವೂಸಾಕಷ್ಟು ಮಳೆಯಾಗುತ್ತಿದ್ದು, ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ನರಸಿಂಹರಾಜು ಮಾತನಾಡಿ, 2010 ರಲ್ಲಿ ಭಾರಿ ಮಳೆಯಾದ ಸಂದರ್ಭದಲ್ಲಿ ಮುರುಘಾಮಠದ ಮುಂಭಾಗದಈ ಕೆರೆ ತುಂಬಿ ಎಂ.ಕೆ. ಹಟ್ಟಿ ಗ್ರಾಮದೊಳಗೆ ನೀರುನುಗ್ಗಿ 40-50 ಮನೆಗಳು ಜಲಾವೃತಗೊಂಡು ಜನರು ಸಾಕಷ್ಟು ಸಂಕಷ್ಟಗಳನ್ನು ಅನುಭವಿಸಿದರು.
ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಎಂ.ಕೆ. ಹಟ್ಟಿಗೆ ಆಗಮಿಸಿ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಅಧಿ ಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಹೋಗಿದ್ದರು. ಆದರೆ ಈವರೆಗೆ ಜಿಲ್ಲಾಡಳಿತವಾಗಲಿ, ನಗರಸಭೆಯಾಗಲಿ, ಹೆದ್ದಾರಿ ಪ್ರಾಧಿಕಾರವಾಗಲಿ ನೀರು ಗ್ರಾಮದೊಳಗೆ ನುಗ್ಗುವುದನ್ನು ತಡೆಯಲು ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರಿದರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ
ಬಿ.ಟಿ. ಜಗದೀಶ್, ಮಂಜುನಾಥ್, ಅಜ್ಜಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ದಾದಾಪೀರ್ ಸೇರಿದಂತೆ ಮಠದಕುರುಬಹಟ್ಟಿಯ ಗ್ರಾಮಸ್ಥರು ಹಾಗೂ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.