ಸಕಾಲ ಅರ್ಜಿ ಶೀಘ್ರ ವಿಲೇಗೊಳಿಸಿ
Team Udayavani, Dec 3, 2020, 6:00 PM IST
ಚಿತ್ರದುರ್ಗ: ಕಾಲಮಿತಿಯಲ್ಲಿ ನಾಗರಿಕರಿಗೆ ಸೇವೆಗಳನ್ನು ಒದಗಿಸಲು ಸಕಾಲ ಸೇವೆಗಳ ಅಧಿನಿಯಮ ಜಾರಿಯಾಗಿದ್ದು, ಸಕಾಲ ಅರ್ಜಿಗಳನ್ನು ತಡಮಾಡದೆ ವಿಲೇವಾರಿಮಾಡಬೇಕು ಎಂದು ಸಕಾಲ ಮಿಷನ್ ಆಡಳಿತಾಧಿಕಾರಿ ಸೀಮಾ ನಾಯಕ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ, ನಗರಾಭಿವೃದ್ಧಿ ಇಲಾಖೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರವ್ಯವಹಾರಗಳ ಇಲಾಖೆ, ನಗರಸಭೆ, ತಹಶೀಲ್ದಾರ್‌ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಕಚೇರಿಗೆ ಬುಧವಾರ ಭೇಟಿ ನೀಡಿ ಸಕಾಲ ಸೇವೆಗಳ ಕುರಿತು ತಪಾಸಣೆ ನಡೆಸಿದರು.
ನಾಗರೀಕ ಸೇವಾ ವಿಲೇವಾರಿಯಲ್ಲಿ ಗುಣಾತ್ಮಕಸುಧಾರಣೆ ತಂದು ನಾಗರಿಕರಿಗೆ ಸೇವೆಗಳನ್ನು ತಲುಪಿಸುವ ಸಲುವಾಗಿ ಮೊದಲನೇ ಹಂತದಲ್ಲಿನ. 30 ರಿಂದ ಡಿಸೆಂಬರ್ 05 ರವರೆಗೆ ಸಕಾಲ ಸಪ್ತಾಹ ಹಮ್ಮಿಕೊಂಡಿದ್ದು, ಸಾರ್ವಜನಿಕರಿಗೆಯೋಜನೆ ಕುರಿತು ಅರಿವು ಮೂಡಿಸಲಾಗುವುದು ಎಂದರು.
ಚಿತ್ರದುರ್ಗ, ಹೊಳಲ್ಕೆರೆ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ತಪಾಸಣೆ ನಡೆಸಿದ ಅವರು, ಚಿತ್ರದುರ್ಗ ಕಚೇರಿಯಲ್ಲಿ ಬೆಳೆ ದೃಢೀಕರಣಪ್ರಮಾಣ ಪತ್ರ, ಮನಸ್ವಿನಿ ಯೋಜನೆಯ ಅರ್ಜಿಗಳು ಬಾಕಿ ಉಳಿದಿವೆ. ಹೊಳಲ್ಕೆರೆ
ತಾಲೂಕಿನಲ್ಲಿ ಅರ್ಜಿಗಳು ಬಾಕಿ ಉಳಿದಿವೆ. ಬಾಕಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಿರಸ್ಕೃತ ಅರ್ಜಿಗಳ ಪ್ರಮಾಣ ಕಡಿಮೆ ಮಾಡಿ: ವಿವಿಧ ಸೇವೆಗಳನ್ನು ಪಡೆಯಲು ನಾಗರಿಕರು ಸಲ್ಲಿಸುವ ಅರ್ಜಿಗಳ ತಿರಸ್ಕೃತ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆ ಮಾಡಬೇಕು. ಸಕಾರಣವಿಲ್ಲದೇ ಅರ್ಜಿಗಳನ್ನು ತಿರಸ್ಕೃತ ಮಾಡಬಾರದು. ಅರ್ಜಿ ತಿರಸ್ಕೃತ ಮಾಡುವಾಗ ಸರಿಯಾದ ಕಾರಣನೀಡಬೇಕು ಎಂದು ತಾಕೀತು ಮಾಡಿದರು.
ಸಾರಿಗೆ ಇಲಾಖೆಯಲ್ಲಿ ಸ್ಮಾರ್ಟ್‌ಕಾರ್ಡ್ ಪೆಂಡಿಂಗ್: ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗೆ ಭೇಟಿ ನೀಡಿದ ಸಕಾಲ ಮಿಷನ್ ಆಡಳಿತಾಧಿಕಾರಿ ಸಾರಿಗೆ ಇಲಾಖೆಯಲ್ಲಿ ಸಕಾಲ ಯೋಜನೆಯಡಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ತಪಾಸಣೆ ನಡೆಸಿದರು. ಸಾರಿಗೆ ಇಲಾಖೆಯಲ್ಲಿ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿ ವಿಳಂಬವಾಗುತ್ತಿದೆ.ಸ್ಮಾರ್ಟ್ ಕಾರ್ಡ್ ವಿತರಣೆಗೆ ಕ್ರಮವಹಿಸಿನಾಗರಿಕರಿಗೆ ತ್ವರಿತಗತಿಯಲ್ಲಿ ಸೇವೆ ಒದಗಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್.ಹೆಗಡೆ ಅವರಿಗೆ ಸೂಚಿಸಿದರು.
ಸಕಾಲ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದಂತೆ ಸಭೆ ನಡೆಸಿ, ಜಿಲ್ಲೆಯಲ್ಲಿ ಸಕಾಲದ ಸಮರ್ಪಕ ಅನುಷ್ಠಾನದ ಬಗ್ಗೆ ಪರಿಶೀಲಿಸಿ ಕ್ರಮವಹಿಸಬೇಕು ಎಂದು ಸಕಾಲ ಮಿಷನ್ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಾರಿಗೆ ಅಧಿಕಾರಿ ಹೆಗಡೆ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ, ಪೌರಾಯುಕ್ತ ಹನುಮಂತರಾಜು, ಸಮರ್ಥ್, ಆದರ್ಶ, ರಂಗನಾಥ್, ಶ್ರೀಕಾಂತ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.