ರೈಲ್ವೆ ಕ್ರಾಸಿಂಗ್ ಕಾಮಗಾರಿ ಶೀಘ್ರ ಪೂರ್ಣ
Team Udayavani, Mar 17, 2020, 4:24 PM IST
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಗೆ ನೀರು ಹರಿಯಲು ಪ್ರಮುಖ ಅಡ್ಡಿಯಾಗಿದ್ದ ಅಜ್ಜಂಪುರ ಬಳಿಯ ರೈಲ್ವೆ ಕ್ರಾಸಿಂಗ್ ಕಾಮಗಾರಿಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.
ಸಂಸದ ಎ. ನಾರಾಯಣಸ್ವಾಮಿ ನೇತೃತ್ವದಲ್ಲಿ ಸೋಮವಾರ ಮೈಸೂರಿನ ನೈರುತ್ಯ ರೈಲ್ವೆ ಮುಖ್ಯ ಕಚೇರಿಯಲ್ಲಿ ವಿಭಾಗಿಯ ವ್ಯವಸ್ಥಾಪಕರಾದ ಅಪರ್ಣಾ ಗಾರ್ಗ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಕಾಮಗಾರಿ ವಿಳಂಬವಾಗುತ್ತಿದ್ದ ಕಾರಣಕ್ಕೆ ಸತತ ನಾಲ್ಕು ಸಭೆಗಳನ್ನು ನಡೆಸಿದ ಪರಿಣಾಮ ಇಂದು ಕಾಮಗಾರಿಗೆ ಇದ್ದ ಅಡ್ಡಿ ತಾರ್ಕಿಕವಾಗಿ ಅಂತ್ಯ ಕಂಡಂತಾಗಿದೆ ಎಂದು ಸಂಸದ ನಾರಾಯಣಸ್ವಾಮಿ ತಿಳಿಸಿದ್ದಾರೆ.
ಕಾಮಗಾರಿಯ ವಿಳಂಬ ಕಾರಣಕ್ಕೆ ಗುತ್ತಿಗೆದಾರರ ಟೆಂಡರ್ ಅವಧಿ ಮುಕ್ತಾಯವಾಗಿತ್ತು. ಈಗ ಅದನ್ನು ಮತ್ತೆ ಸರಿಪಡಿಸಿ ಕಾಮಗಾರಿ ಆರಂಭಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಜೂನ್ ಅಂತ್ಯದ ವೇಳೆಗೆ ರೈಲು ಹಳಿಯ ಕೆಳ ಭಾಗದಲ್ಲಿ ನೀರು ಹರಿಯುವಂತೆ ಸೇತುವೆ ನಿರ್ಮಾಣ ಮಾಡಿಕೊಡುವುದಾಗಿ ಗುತ್ತಿಗೆದಾರರು ಒಪ್ಪಿದ್ದಾರೆ. ಗೊಂದಲದ ಗೂಡಾಗಿದ್ದ ಅಜ್ಜಂಪುರ ಬಳಿಯ ಕಾಮಗಾರಿ ಈ ವಾರದಲ್ಲೇ ಆರಂಭವಾಗುವುದರಿಂದ ನಿಟ್ಟುಸಿರು ಬಿಡುವಂತಾಗಿದೆ. ಕಾಮಗಾರಿ ಪದೇ ಪದೇ ವಿಳಂಬವಾದರೆ ನೀರನ್ನು ಹೇಗೆ ಬಿಡಲು ಸಾಧ್ಯ. ಇದೇ ಕಾರಣಕ್ಕೆ ಅಧಿಕಾರಿಗಳು, ಗುತ್ತಿಗೆದಾರರ ಬೆನ್ನು ಬಿದ್ದು ಕೆಲಸ ಮಾಡಿಸುತ್ತಿದ್ದೇನೆ ಎಂದು ಸಂಸದರು ಹೇಳಿದರು.
ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಭದ್ರಾ ಮೇಲ್ದಂಡೆ ಅಧಿಕಾರಿಗಳ ಸಭೆಯಲ್ಲಿ ನೈರುತ್ಯ ರೈಲ್ವೆ ಹಿರಿಯ ಅಭಿಯಂತರ ಕೆ. ರವಿಚಂದ್ರನ್, ವಿಭಾಗೀಯ ಅಭಿಯಂತರ ವೆಂಕಟರಾವ್, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಶಿವಕುಮಾರ್ ಹಾಗೂ ಗುತ್ತಿಗೆದಾರ ಕೋಟೇಶ್ವರ ರಾವ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.