ಜನಪರ ಆಡಳಿತಕ್ಕೆ ಒತ್ತು ನೀಡಲು ಡಿಸಿಗೆ ಮನವಿ


Team Udayavani, Jul 31, 2017, 12:38 PM IST

31-CHIT-2.jpg

ಚಿತ್ರದುರ್ಗ: ಬರಗಾಲಕ್ಕೆ ತುತ್ತಾಗಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವು ನೀರಿನ ಸಮಸ್ಯೆ ಕಾಡುತ್ತಿದೆ. ನಗರದಲ್ಲಿ ಯಾವ ರಸ್ತೆಯೂ ಸಂಚಾರಕ್ಕೆ ಯೋಗ್ಯವಾಗಿಲ್ಲ. ರಾಜಕಾರಣಿಗಳು ಅವರವರ ಹಂತದಲ್ಲಿ ಎಷ್ಟು ಸಾಧ್ಯವೋ ಅಷ್ಟು ಮಾತ್ರ ಮಾಡಬಹುದು. ಉಳಿದಂತೆ ಜಿಲ್ಲಾಡಳಿತಕ್ಕೆ ಹೆಚ್ಚಿನ ಅಧಿಕಾರವಿರುವುದರಿಂದ ಅಧೀನ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಸೂಚಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌ ಅವರು ನೂತನ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯ ಜೋತ್ಸ್ನಾ ಅವರಲ್ಲಿ ಮನವಿ ಮಾಡಿದರು.

ಜಿಲ್ಲಾಧಿಕಾರಿಯವರಿಗೆ ಹೂಗುತ್ಛ ನೀಡಿ ಅಭಿನಂದಿಸಿ ಮಾತನಾಡಿದ ನವೀನ್‌, ಮಳೆ ಬೆಳೆ ಇಲ್ಲದೆ ಸತತ ಐದಾರು ವರ್ಷಗಳಿಂದಲೂ ರೈತರು ಕಂಗಾಲಾಗಿದ್ದಾರೆ. ಕುಡಿಯುವ ನೀರಿಗೂ ಅಭಾವವಿದೆ. ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಮೇವು, ನೀರು ಒದಗಿಸುವುದು ದೊಡ್ಡ ಸವಾಲಾಗಿದೆ.
ಇವೆಲ್ಲವನ್ನು ಗಂಭೀರವಾಗಿ ಪರಿಗಣಿಸಿ ಒಂದೊಂದೇ ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್‌, ಜೈಪಾಲ್‌, ಕೋಶಾಧ್ಯಕ್ಷ ಎಚ್‌.ಬಿ.ನರೇಂದ್ರ, ಅಭಿಲಾಷ್‌ ಇದ್ದರು.

ಕಾರ್ಮಿಕರ ಮನವಿ: ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ ಹಾಗೂ ಪದಾಧಿಕಾರಿಗಳು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಮರಳಿಗೆ ತೀವ್ರ ಅಭಾವವಿರುವುದರಿಂದ ಕಟ್ಟಡ ಕಾರ್ಮಿಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಕುಟುಂಬಗಳು ಬೀದಿಪಾಲಾಗುವ ಹಂತಕ್ಕೆ ತಲುಪಿವೆ. ಅಕ್ರಮವಾಗಿ ಮರಳು ಹೊರಗೆ ಕಳ್ಳಸಾಗಾಣೆಯಾಗುವುದನ್ನು ನಿಯಂತ್ರಿಸಿ ಜಿಲ್ಲೆಯ ಕಟ್ಟಡ ಕಾರ್ಮಿಕರಿಗೆ ಮರಳು ಸಿಗುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಎಚ್‌. ಹಾಲೇಶಪ್ಪ, ಕಾರ್ಯದರ್ಶಿ ಲಕ್ಷ್ಮಿದೇವಿ, ಜಾವಿದ್‌ ಭಾಷಾ, ಚಂದ್ರಮ್ಮ, ಪ್ರಧಾನ ಕಾರ್ಯದರ್ಶಿ ಜೆ.ಎಂ. ರಾಜ, ಖಜಾಂಚಿ ಟಿ. ಅಶೋಕ್‌ ಇದ್ದರು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.