ಬೆಳೆ ವಿಮೆ ಪಾವತಿಗೆ ಆಗ್ರಹಿಸಿ ಧರಣಿ
Team Udayavani, Aug 25, 2020, 6:53 PM IST
ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಮಹತ್ವಾಕಾಂಕ್ಷಿ ಫಸಲ್‌ಭಿಮಾ ಯೋಜನೆಯಡಿ ಜಿಲ್ಲೆಯ ಭರಮಸಾಗರ ಹೋಬಳಿಯ ರೈತರು ಮೆಕ್ಕೆಜೋಳಕ್ಕೆ ವಿಮೆ ಪಾವತಿಸಿದ್ದಾರೆ. ಇದುವರೆಗೂ ವಿಮೆ ಹಣ ಬಂದಿಲ್ಲ ಎಂದು ಆರೋಪಿಸಿ ಸೋಮವಾರ ರೈತರು ಪ್ರತಿಭಟಿಸಿದರು.
ಮೆಕ್ಕೆಜೋಳಕ್ಕೆ 2019-20ನೇ ಸಾಲಿನಲ್ಲಿ 1637 ರೈತರು ಸುಮಾರು 16 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಪ್ರೀಮಿಯಂ ಪಾವತಿಸಿದ್ದಾರೆ. ಕಳೆದ ವರ್ಷ ಅತಿವೃಷ್ಟಿಯಾಗಿ ಬೆಳೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳು ಹಾಗೂ ವಿಮಾ ಕಂಪನಿಗಳಿಗೆ ತಿಳಿಸಿದ್ದರೂ ವಿಮೆ ಪಾವತಿ ಮಾಡಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
2019-20 ಬರಗಾಲವೆಂದು ಘೋಷಣೆ ಮಾಡಲಾಗಿದೆ. ಕೃಷಿ ಇಲಾಖೆ ಅಧಿಕಾರಿಗಳು ಸಂಬಂಧಪಟ್ಟ ಬೆಳೆ ವಿಮೆ ಕಂಪನಿಗಳಿಂದ ಯಾವುದೇ ರೀತಿಯ ಬೆಳೆ ವಿಮೆ ಕೊಡಿಸಲು ಕ್ರಮ ಕೈಗೊಂಡಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಭರಮಸಾಗರ ಹೋಬಳಿಗೆ ಸಂಬಂಧಿಸಿದ ಬೆಳೆ ನಷ್ಟದ ಪರಿಹಾರವನ್ನು ಕೊಡಿಸಲು ಕಂಪನಿಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್‌ಬಾಬು, ತಾಲೂಕು ಅಧ್ಯಕ್ಷ ಧನಂಜಯ, ಕೋಗುಂಡೆ ರವಿ, ಶಿವಕುಮಾರ್, ತಿಪ್ಪೇಸ್ವಾಮಿ, ಕಾಂತರಾಜು, ಓಬಣ್ಣ, ನಾಗರಾಜ, ಬಸವರಾಜ, ಶಿವಣ್ಣ, ರಾಮಣ್ಣ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.