ಸ್ವಚ್ಛತಾ ಕಾರ್ಯಕ್ಕೆ ಸಹಕರಿಸಲು ಮನವಿ
Team Udayavani, Jan 17, 2021, 2:56 PM IST
ಹಿರಿಯೂರು: ನಾಗರಿಕರು ನಗರ ಸ್ವತ್ಛತೆಗೆ ನಗರಸಭೆ ಸಿಬ್ಬಂದಿಗೆ ಸಹಕಾರನೀಡುವಂತೆ ನಗರಸಭೆ ಅಧ್ಯಕ್ಷೆ ಶಂಶುನ್ನೀಸಾ ಮನವಿ ಮಾಡಿದರು.
ಶನಿವಾರ ನಗರದ ಟಿ.ಬಿ. ವೃತ್ತದ ವಾರ್ಡ ನಂ 2ರ 100 ಅಡಿ ರಸ್ತೆಯ ಬಳಿ ಸ್ವತ್ಛ ಭಾರತ ಕಾರ್ಯಕ್ರಮದಡಿಯಲ್ಲಿ “ನಮ್ಮ ಚಿತ್ತ ಸ್ವತ್ಛತೆಯತ್ತ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತ್ಯಾಜ್ಯ ವಸ್ತುಗಳನ್ನು ನಿಗದಿತ ಸ್ಥಳಗಳಿಗೆ ತಲುಪಿಸುವ ಮೂಲಕ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಅಕ್ಕ ಪಕ್ಕದ ಚರಂಡಿಗಳಲ್ಲಿ ಘನ ತ್ಯಾಜ್ಯ ಹಾಕದೆ ನಗರಸಭೆ ನಿಗದಿಪಡಿಸಿದ ಸ್ಥಳಗಳಲ್ಲಿ ಹಾಕುವ ಮೂಲಕ ನಗರಸಭೆ ಸಿಬ್ಬಂದಿಗೆ ಸಹಕಾರ ನೀಡಬೇಕೆಂದರು.
ಇದನ್ನೂ ಓದಿ:ಮಳೆಹಾನಿ: ಸೂಕ್ತ ಪರಿಹಾರಕ್ಕೆ ಒತ್ತಾಯ
ನಗರಸಭೆ ಉಪಾಧ್ಯಕ್ಷ ಬಿ.ಎನ್. ಪ್ರಕಾಶ್ ಮಾತನಾಡಿ , ನಗರ ಸೌಂದರ್ಯಕ್ಕೆ ನಗರಸಭೆ ಒತ್ತು ನೀಡಲಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವೆಂದರು. ಪೌರಾಯುಕ್ತೆ ಟಿ. ಲೀಲಾವತಿ, ನಗರಸಭೆ ಸದಸ್ಯರಾದ ಜಿ.ಎಸ್. ತಿಪ್ಪೇಸ್ವಾಮಿ, ಪ್ರಭಾರಿ ಪರಿಸರ ಅಭಿಯಂತರ ಅಂಜನಪ್ಪ , ಆರೋಗ್ಯ ನಿರೀಕ್ಷಕರಾದ ಸುನೀಲ್‌ಕುಮಾರ್, ಅಶೋಕ್‌ಕುಮಾರ್, ಲೆಕ್ಕಾ ಧಿಕಾರಿ ಮೆಹಬೂಬ್ ಅಲಿ, ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.