ಶಿಕ್ಷಕರಿಗೆ ವೇತನ ಪಾವತಿಸಲು ಮನವಿ
Team Udayavani, Jul 21, 2020, 10:47 AM IST
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ನಡೆಯುತ್ತಿರುವ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಹೊರಗುತ್ತಿಗೆ ಪ್ರಾಚಾರ್ಯರು, ಶಿಕ್ಷಕರಿಗೆ ವೇತನ ಪಾವತಿಸಲು ರಾಜ್ಯ ಕ್ರೈಸ್ ಶಾಲೆಗಳ ಹೊರ ಸಂಪನ್ಮೂಲ ಪ್ರಾಂಶುಪಾಲರ ಹಾಗೂ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಧ್ಯಕ್ಷ ಗುಂಡಯ್ಯ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 10-15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರು ಹಾಗೂ ನ್ಯಾಯಾಲಯದ ಆದೇಶದ ಮೇರೆಗೆ ಮುಂದುವರಿದ 532 ಪ್ರಾಂಶುಪಾಲರು, ಶಿಕ್ಷಕರಿಗೆ ಅಕ್ಟೋಬರ್, ಏಪ್ರಿಲ್ ಹಾಗೂ ಮೇ ತಿಂಗಳ ವೇತನ ಪಾವತಿಸಿಲ್ಲ. ಕೋವಿಡ್ -19 ಕಾರಣಕ್ಕೆ ಈಗ ಶಾಲೆಗಳು ಮುಚ್ಚಿದ್ದು, ಈಗ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಡೆಸುತ್ತಿರುವ ಆನ್ ಲೈನ್ ಹಾಗೂ ವಾಟ್ಸ್‌ಆ್ಯಪ್ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ. ಆದರೂ ಈವರೆಗಿನ ವೇತನ ಪಾವತಿಸಿಲ್ಲ. ಜೂನ್ ತಿಂಗಳಿಂದ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದ್ದು, ಇದಕ್ಕೆ ಕಾಯಂ ಶಿಕ್ಷಕರು ಮಾತ್ರ ಹಾಜರಾಗುವಂತೆ ಸೂಚಿಸಲಾಗಿದೆ. ನ್ಯಾಯಾಲಯ ಆದೇಶ ಮಾಡಿದ್ದರೂ ನಮ್ಮನ್ನು ಸೇವೆಗೆ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.
ಸದ್ಯ ಕೆಲಸ ಮಾಡುವ ಶೇ.80 ಜನರಿಗೆ ವಯೋಮಿತಿ ಮೀರುತ್ತಿದ್ದು, ಬೇರೆ ಯಾವ ಕೆಲಸವನ್ನು ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ನಮ್ಮಿಂದ ಸೇವೆ ಪಡೆಯುವವರು ಅದಕ್ಕೆ ತಕ್ಕಂತೆ ವೇತನ ನೀಡಬೇಕು. ಅದರೆ ಅದನ್ನು ಮಾಡುತ್ತಿಲ್ಲ, ವಸತಿ ಸೌಲಭ್ಯ, ವೇತನ ಪರಿಷ್ಕರಣೆ ಮಾಡುವಲ್ಲಿ ವಿಫಲವಾಗಿದ್ದಾರೆ. ಇವರು ನೀಡುವ ಕಡಿಮೆ ವೇತನದಿಂದ ಬದುಕು ಸಾಗಿಸುವುದು ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಂಡರು. ಹನುಮಂತಪ್ಪ, ಯರ್ರಿಸ್ವಾಮಿ, ರೂಪ, ಪುಷ್ಪಾವತಿ, ಸಬೀನ, ಸುಹಾಸ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.