ರಸ್ತೆ ಅಭಿವೃದ್ದಿಗೆ ಆದ್ಯತೆ: ತಿಪ್ಪಾ ರೆಡ್ಡಿ
Team Udayavani, Mar 29, 2022, 3:58 PM IST
ಚಿತ್ರದುರ್ಗ: ನಗರೋತ್ಥಾನ ಯೋಜನೆಯಡಿ ಚಿತ್ರದುರ್ಗಕ್ಕೆ 40 ಕೋಟಿ ರೂ. ಅನುದಾನ ಲಭ್ಯವಾಗಿದ್ದು, ಇದರಲ್ಲಿ 22 ಕೋಟಿ ರೂ.ಗಳನ್ನು ರಸ್ತೆ ಅಭಿವೃದ್ಧಿಗೆ ವಿನಿಯೋಗಿಸುತ್ತಿದ್ದೇವೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ನಗರದ ಶೃಂಗೇರಿ ಮಠದ ಬಳಿ ಅಮೃತ ಯೋಜನೆಯಡಿ ನಿರ್ಮಿಸುತ್ತಿರುವ ಸಿಸಿ ರಸ್ತೆ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ನಗರೋತ್ಥಾನ ಯೋಜನೆಯ 40 ಕೋಟಿ ರೂ.ಗಳಲ್ಲಿ ಉಳಿದ 11 ಕೋಟಿ ರೂ.ಗಳನ್ನು ಪಾರ್ಕ್ ಅಭಿವೃದ್ಧಿಗೆ, 2 ಕೋಟಿ ರೂ. ದ್ವಿಪಥ ರಸ್ತೆಯ ಮಧ್ಯೆ ಹೂವಿನ ಗಡಿಗಳನ್ನು ನೆಡಲು ಹಾಗೂ ಬಡವರಿಗೆ ಮನೆ ನಿರ್ಮಾಣಕ್ಕಾಗಿ 5 ಕೋಟಿ ರೂ.ಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರ ಅಮೃತ ಯೋಜನೆಯಲ್ಲಿ 144 ಕೋಟಿ ರೂ. ಅನುದಾನ ನೀಡಿದ್ದು, ಅದರಲ್ಲಿ 112 ಕೋಟಿ ರೂ.ಗಳನ್ನು ವಿವಿ ಸಾಗರ ಮತ್ತು ಶಾಂತಿ ಸಾಗರದಿಂದ ಎರಡನೇ ಹಂತದ ಕುಡಿಯುವ ನೀರಿನ ಯೋಜನೆಗೆ ನೀಡಲಾಗಿದೆ ಎಂದರು.
ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಕಾರಣಕ್ಕೆ, ಕಾಮಗಾರಿ ವಿಳಂಬವಾಗಿತ್ತು. ಇದರಿಂದ ಜನರಿಗೆ ಕಿರಿಕಿರಿಯಾಗಿದೆ. ಈಗ ನ್ಯಾಯಾಲಯದಲ್ಲಿ ನಮ್ಮ ಪರವಾಗಿ ತೀರ್ಮಾನವಾಗಿದ್ದು, ಕೆಲ ದಿನಗಳಲ್ಲೇ ಫುಟ್‌ಪಾತ್, ಚರಂಡಿ ಮತ್ತಿತರೆ ಕಾಮಗಾರಿಗಳು ಮುಗಿದು ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ತಿಳಿಸಿದರು.
ಈ ವೇಳೆ ನಗರಸಭೆ ಸದಸ್ಯರಾದ ಶ್ರೀನಿವಾಸ್, ಪರಮೇಶ್, ಭಾಸ್ಕರ್, ವೆಂಕಟೇಶ್, ಶ್ವೇತಾ ವೀರೇಶ್, ನಾಗಮ್ಮ, ಹರೀಶ್, ಮಂಜುನಾಥ್, ಕೃಷ್ಣ, ತಿಮ್ಮಣ್ಣ, ರಾಜು, ಮುಖಂಡರಾದ ದಿನೇಶ್, ಸಿ.ಟಿ. ಕೃಷ್ಣಮೂರ್ತಿ, ದೇವರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.