![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 11, 2023, 5:36 AM IST
ಸಿರಿಗೆರೆ: ನಮ್ಮ ದೇಶದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಯಶಸ್ವಿಯಾಗಿ ಜಾರಿಗೊಂಡಿಲ್ಲ. ಪಕ್ಷಾಂತರಕ್ಕೆ ಕಡಿವಾಣ ಹಾಕುವ ಕೆಲಸ ತುರ್ತಾಗಿ ಆಗಬೇಕಾಗಿದೆ ಎಂದು ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸದ್ಧರ್ಮ ನ್ಯಾಯಪೀಠದ ಪ್ರಾಂಗಣದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಶ್ರೀಗಳು, ಚುನಾವಣೆ ಸಂದರ್ಭ ಒಂದು ಪಕ್ಷದಿಂದ ಮತ್ತೂಂದು ಪಕ್ಷಕ್ಕೆ ಟಿಕೆಟ್‌ಗಾಗಿ ಹಾರುವ ಕೆಲಸಕ್ಕೂ ಕಡಿವಾಣ ಬೀಳಬೇಕು. ರಾಜಕೀಯ ಪಕ್ಷಗಳು ಕನಿಷ್ಠ ಐದು ವರ್ಷಗಳ ಕಾಲ ಸಕ್ರಿಯ ಕಾರ್ಯಕರ್ತನಾಗಿದ್ದ ವ್ಯಕ್ತಿಗೆ ಮಾತ್ರ ಟಿಕೆಟ್ ಕೊಡಬೇಕು. ಆಗ ಪ್ರಜಾಪ್ರಭುತ್ವಕ್ಕೆ ಇನ್ನಷ್ಟು ಗಟ್ಟಿತನ ಬರುತ್ತದೆ. ಇಂತಹ ಸಂಕಲ್ಪಗಳು ನಮ್ಮ ರಾಜ್ಯದಿಂದಲೇ ಆರಂಭವಾಗಲಿ ಎಂದು ಆಶಿಸಿದರು.
ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದೆ ಇದ್ದರೆ ಹೆಚ್ಚಿನ ಸಂಖ್ಯೆಯ ಶಾಸಕರು ಗೆದ್ದು ಬಂದಿರುವ ಪಕ್ಷ ಸರಕಾರ ರಚಿಸಬೇಕು. ಉಳಿದವರು ಬೆಂಬಲವಾಗಿ ನಿಲ್ಲ ಬೇಕು. ಪûಾಂತರ ಅಥವಾ ಇನ್ನಿತರ ಕಾರಣಗಳಿಂದ ತೆರವಾಗುವ ಸ್ಥಾನಕ್ಕೆ ಮರು ಚುನಾವಣೆ ನಡೆಸದೆ ಎರಡನೇ ಸ್ಥಾನ ಗಳಿಸಿದ ವ್ಯಕ್ತಿಯನ್ನು ಆಯ್ಕೆಯಾದಂತೆ ಘೋಷಿಸುವ ಪದ್ಧತಿ ಜಾರಿಗೊಳ್ಳಬೇಕು. ಇದರಿಂದ ಚುನಾವಣೆ ವೆಚ್ಚ, ರೆಸಾರ್ಟ್ ರಾಜಕೀಯ ಎರಡೂ ಕೊನೆಗೊಳ್ಳುತ್ತವೆ ಎಂದು ಅಭಿಪ್ರಾಯಪಟ್ಟರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.