ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಶಿವಶರಣ
Team Udayavani, Feb 2, 2019, 9:24 AM IST
ಹಿರಿಯೂರು: ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಶಿವಶರಣರು ಸಮಾಜ ಸುಧಾರಣೆಗೆ ಶ್ರಮಿಸಿದರು. ಕೆಳವರ್ಗದ ಜನರಲ್ಲಿ ಜಾಗೃತಿ ಮೂಡಿಸಿ ಎಲ್ಲರೂ ಸಮಾನರು ಎಂಬ ಭಾವನೆ ಮೂಡಿಸಿದ್ದಾರೆ. ಅವರಲ್ಲಿ ಬಸವಣ್ಣನವರ ಅನುಯಾಯಿ ಮಡಿವಾಳ ಮಾಚಿದೇವರು ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆದು ಕೆಳವರ್ಗದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅಂತಹ ಮಹನೀಯರ ಆದರ್ಶ ಜೀವನದಲ್ಲಿ ಅಳವಡಿಸಿ ಕೊಂಡರೆ ಉತ್ತಮ ಜೀವನ ನಡೆಸಲು ಸಾಧ್ಯ ಎಂದರು.
ತಾಪಂ ಅಧ್ಯಕ್ಷರಾದ ಎಸ್. ಚಂದ್ರಪ್ಪ, ತಹಶೀಲ್ದಾರ್ ಜೆ.ಸಿ. ವೆಂಕಟೇಶಯ್ಯ, ರಾಜ್ಯ ಬಿಜೆಪಿ ಮುಖಂಡ ಡಿ.ಟಿ. ಶ್ರೀನಿವಾಸ್, ನಗರಸಭೆ ಅಧ್ಯಕ್ಷೆ ಮಂಜುಳಾ, ತಾಪಂ ಸದಸ್ಯರಾದ ಓಂಕಾರಪ್ಪ, ಯಶವಂತ್, ನಗರಸಭೆ ಸದಸ್ಯರಾದ ಎಚ್. ನಟರಾಜ್, ಚಂದ್ರಶೇಖರ್, ಜಿ. ಪ್ರೇಮ್‌ಕುಮಾರ್, ಎಸ್.ಪಿ.ಟಿ. ದಾದಪೀರ್, ಪೌರಾಯಕ್ತ ಮಹಾಂತೇಶ್, ಗ್ರೇಡ್ -2 ತಹಶೀಲ್ದಾರ್ ಚಂದ್ರಕುಮಾರ್, ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಸಿದ್ದೇಶ್, ಡಾ| ಡಿ. ಧರಣೇಂದ್ರಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.