ಕೋವಿಡ್ ವೈರಸ್ ಹರಡದಂತೆ ಜಾಗ್ರತೆ ವಹಿಸಿ
Team Udayavani, May 8, 2020, 1:10 PM IST
ಸಾಂದರ್ಭಿಕ ಚಿತ್ರ
ಸಿರಿಗೆರೆ: ಕೋವಿಡ್ ವೈರಸ್ ಹರಡದಂತೆ ಎಲ್ಲರೂ ಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಹೇಳಿದರು. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್ ಹೆಲ್ತ್ ಕೇರ್ ಸೆಂಟರ್‌ಗೆ ಭೇಟಿ ನೀಡಿ ಅವರು ಮಾತನಾಡಿದರು. ಆರೋಗ್ಯ ತಪಾಸಣೆಗೆ ಬಂದ ಜನರಲ್ಲಿ ಕೋವಿಡ್-19 ವೈರಸ್ ಬಗ್ಗೆ ಅರಿವು ಮೂಡಿಸಿ ಉಚಿತ ತಪಾಸಣೆ ಮಾಡಬೇಕು. ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ತಪಾಸಣೆಗೆ ಬಂದವರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು ತಿಳಿಸಬೇಕೆಂದರು.
ಡಿಎಚ್‌ಒ ಡಾ| ಪಾಲಾಕ್ಷ ಮಾತನಾಡಿ, ಲಘು ಕೋವಿಡ್ ಪ್ರಕರಣಗಳಿದ್ದಲ್ಲಿ ಅಥವಾ ಪಾಸಿಟಿವ್ ಕಂಡು ಬಂದಲ್ಲಿ ಸಮುದಾಯ ಆರೋಗ್ಯ ಕೇಂದ್ರಲ್ಲಿ ತಪಾಸಣೆಗೆ ಅನುಕೂಲ ಮಾಡಿಕೊಡಲಾಗುವುದು. ಜಿಲ್ಲೆಯ 11 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮೂರು ವಿಧವಾದ ಕೇಂದ್ರಗಳಾಗಿ ವಿಭಾಗಿಸಲಾಗಿದೆ. ಡೆಡಿಕೇಟೆಡ್ ಕೋವಿಡ್ ಹೆಲ್ತ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮತ್ತು ಕೋವಿಡ್ ಕೇರ್ ಸೆಂಟರ್ ಎಂದು ವಿಂಗಡಿಸಲಾಗಿದೆ. ಗ್ರಾಮಸ್ಥರು ಜಿಲ್ಲಾಸ್ಪತ್ರೆಗೆ ಬರುವ ಮೊದಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿ. ಸೂಕ್ಷ್ಮ ಪ್ರಕರಣಗಳಿದ್ದಲ್ಲಿ ವೈದ್ಯಾಧಿಕಾರಿಗಳು ತಿಳಿಸಿದ ನಂತರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿಕೊಳ್ಳುತ್ತೇವೆ ಎಂದರು. ಉಪವಿಭಾಗಾಧಿಕಾರಿ ಪ್ರಸನ್ನಕುಮಾರ್, ಡಾ| ಕುಮಾರ್, ವೈದ್ಯಾಧಿಕಾರಿಗಳಾದ ರೂಪಾ, ಹೇಮಂತ್, ಶಿಲ್ಪಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.