ಅಂತರ್ಜಾತಿ ವಿವಾಹದಿಂದ ಸಮ ಸಮಾಜದ ಜಾಗೃತಿ: ಶಿಮುಶ


Team Udayavani, Jun 6, 2018, 3:37 PM IST

chitr-2.jpg

ಚಿತ್ರದುರ್ಗ: ಬಸವಣ್ಣನವರು 900 ವರ್ಷಗಳ ಹಿಂದೆ ಅಂತರ್ಜಾತಿ ವಿವಾಹ ನೆರವೇರಿಸುವ ಮೂಲಕ ಸಾಮಾಜಿಕ
ಪರಿವರ್ತನೆಗೆ ಮುಂದಾಗಿದ್ದರು ಎಂದು ಡಾ| ಶಿವಮೂರ್ತಿಮುರುಘಾ ಶರಣರು ಹೇಳಿದರು. 

ಇಲ್ಲಿನ ಬಸವಕೇಂದ್ರ ಶ್ರೀ ಮುರುಘಾಮಠದಲ್ಲಿ ಎಸ್‌. ಜೆ.ಎಂ. ಶಾಂತಿ ಮತ್ತು ಪ್ರಗತಿ ಫೌಂಡೇಶನ್‌ ಮತ್ತು ಕರ್ನಾಟಕ
ಅರಣ್ಯ ಇಲಾಖೆ ಚಿತ್ರದುರ್ಗ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂತರ್ಜಾತಿ ವಿವಾಹ, ಸಮಾನತೆಯ ಸಮ ಸಮಾಜದ ಜಾಗೃತಿ ಮೂಡಿಸಿದರು. ಇಂದು ಶ್ರೀಮಠದಲ್ಲೂ ಜಾತಿ
ಧರ್ಮ ಮೀರಿ ಎಲ್ಲರೂ ಒಂದೇ ಎಂಬ ಭಾವನೆಯಿಂದ ವೈಚಾರಿಕತೆಯ ಅಡಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವುದು ಅತೀವ ಸಂತಸದ ವಿಷಯವಾಗಿದೆ.ಪ್ರಕೃತಿ ವಿಕೋಪದಿಂದ ಹಲವಾರು ಸಮಸ್ಯೆಗಳನ್ನು ನಾವಿಂದು ಎದುರಿಸುತ್ತಿದ್ದೇವೆ ಎಂದರು.

ಶಿಲ್ಲಾಂಗ್‌ನಂತಹ ಪ್ರದೇಶದಲ್ಲಿ ಕುಡಿಯಲು ನೀರು ಸಹ ಸಿಗುತ್ತಿಲ್ಲ. ಜಲದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕಾಗಿದೆ. ನೀರನ್ನು ಹಿಂಗಿಸಲು ಇಂಗು ಗುಂಡಿಗಳನ್ನು ನಿಮ್ಮ ನಿಮ್ಮ ಪರಿಸರದಲ್ಲಿ ನಿರ್ಮಿಸಿ  ಅಂತರ್ಜಲ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಾಗಿದೆ. ಬಿದ್ದ ನೀರು ಗುಂಡಿ ಇರುವ ಕಡೆಗೆ ಸಹಜವಾಗಿ ಹರಿದು ಹೋಗುವಂತೆ ಜನರೂ ಕೂಡ ಸಮಾಜಮುಖೀಯಾಗಿರುವ ಮಠಗಳ ಕಡೆ ಹರಿದು ಬರುತ್ತಾರೆ. ಜನರು ಪರಿಸರದ ಜೊತೆಗೆ ಹೊಂದಿಕೊಂಡಿರಬೇಕು. ಹಾಗೆಯೇ ನಿಮ್ಮ ಬದುಕಿನಲ್ಲಿ ಕೌಟುಂಬಿಕ ಸಾಮರಸ್ಯ ಮುಖ್ಯವಾಗಿರಬೇಕು. ಹೊಂದಾಣಿಕೆ ಇಲ್ಲದಿದ್ದರೆ ಕುಟುಂಬಗಳು ನ್ಯಾಯಾಲಯದ ಮೆಟ್ಟಿಲೇರುತ್ತವೆ ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್‌. ರಾಜಪ್ಪ ಮಾತನಾಡಿ, ನಾಗರಿಕರಿಗೆ ಪರಿಸರದ ಬಗೆಗಿನ ಕಾಳಜಿ ಮುಖ್ಯವಾಗಿರಬೇಕು. ಸರಳ ಸಾಮೂಹಿಕ ವಿವಾಹದ ಜೊತೆಗೆ ಶ್ರೀಗಳವರಲ್ಲಿ ಪರಿಸರದ ಬಗೆಗೂ ಅಪಾರವಾದ ಕಾಳಜಿ ಇರುವುದನ್ನು ನಾವು ಕಾಣಬಹುದು. ಮದುವೆಗಳಿಗಾಗಿ ಮಾಡುವ ದುಂದುವೆಚ್ಚಗಳನ್ನು ಕಡಿಮೆ ಮಾಡಿಕೊಳ್ಳಲು ಇಂಥ ವಿವಾಹ ಕಾರ್ಯಕ್ರಮಗಳನ್ನು ನಾವೆಲ್ಲ ಅನುಸರಿಸಬೇಕು ಎಂದರು.

ತಮಿಳುನಾಡು ಕುಂಭಕೋಣಂನ ವೆಂಕಟೇಶ್‌  ಮಾತನಾಡಿ, ಶ್ರೀ ಮುರುಘಾಮಠದಲ್ಲಿ ಸರಳ ಸಾಮೂಹಿಕ ವಿವಾಹ ಇನ್ನಿತರೆ ಸಾಮಾಜಿಕ ಕಾರ್ಯಗಳು, ಪರಿಸರ ಕಾಳಜಿ ಮತ್ತು ಇಲ್ಲಿನ ಪರಿಸರ ನೋಡಿ ತಮಿಳುನಾಡಿನಿಂದ ಬಂದ
ನಮಗೆ ಅಚ್ಚರಿ ಮೂಡಿಸಿದೆ ಎಂದರು.

ಇದೇ ಸಂದರ್ಭದಲ್ಲಿ 28 ನವ ವಧುವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ವಿಶ್ವ ಪರಿಸರ ದಿನಾಚರಣೆ ನಿಮಿತ್ತ
ನವ ವಿವಾಹಿತರು ಸಸಿಗಳನ್ನು ನೆಟ್ಟರು. ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕೆ.ಆರ್‌. ಮಂಜುನಾಥ್‌, ಮದುರೈನ ನಿವೃತ್ತ ಅಸಿಸ್ಟೆಂಟ್‌ ಕಮಿಷನರ್‌ ಆಫ್‌ ಪೊಲೀಸ್‌ ಎ. ಗಣೇಶ್‌, ಮಧುರೈನ ನ್ಯಾಯವಾದಿ ಜಯಪ್ರಕಾಶ್‌, ಕುಂಭಕೋಣಂನ ಪೆರಿಯಮಠದ ಕಾರ್ಯದರ್ಶಿ ಆರ್‌ .ಟಿ. ಸೆಂದಿಲ್‌ನಾದನ್‌, ದಾಸೋಹಿ ಸುಜಾತಾ ಮತ್ತು ಎಂ. ರವಿಕುಮಾರ್‌, ಪೈಲ್ವಾನ್‌ ತಿಪ್ಪೇಸ್ವಾಮಿ, ಎಸ್‌.ಜೆ.ಎಂ. ವಿದ್ಯಾಪೀಠದ ಕಾರ್ಯ ನಿರ್ವಹಣಾ ನಿರ್ದೇಶಕ ಡಾ| ಜಿ.ಎನ್‌. ಮಲ್ಲಿಕಾರ್ಜುನಪ್ಪ, ಕಾರ್ಯ ನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ ಇತರರು ಇದ್ದರು.

ಟಾಪ್ ನ್ಯೂಸ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.