ಪರಿಹಾರ ಹಣ ಬಿಡುಗಡೆಗೆ ಆಗ್ರಹ
Team Udayavani, Mar 21, 2018, 7:51 PM IST
ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ ಅಗಲಿಕರಣ ಸಂಬಂಧ ಗೂಡಂಗಡಿಗಳನ್ನು ಕಳೆದುಕೊಂಡವರಿಗೆ ಪರಿಹಾರದ ಹಣ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ಗ್ಯಾರೇಜ್ ಹಾಗೂ ಡಬ್ಟಾ ಅಂಗಡಿಗಳ ಮಾಲೀಕರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಧರಣಿ ನಡೆಸಿದರು.
ತಾಲೂಕಿನ ಪಿಳ್ಳೆಕೆರನಹಳ್ಳಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-13ರ ಅಗಲೀಕರಣ ಸಂದರ್ಭದಲ್ಲಿ ಹೆದ್ದಾರಿಯ ಎರಡು
ಬದಿಗಳಲ್ಲಿದ್ದ ಗ್ಯಾರೇಜ್, ಡಬ್ಬದ ಹೋಟೆಲ್ ಗಳನ್ನು ತೆರವುಗೊಳಿಸಲಾಗಿದೆ. ಇದಾಗಿ ಎರಡು ವರ್ಷಗಳಾಗಿದ್ದರೂ ಯಾವುದೇ ಪರಿಹಾರ ನೀಡಿಲ್ಲ. ಗ್ಯಾರೇಜ್ ಮತ್ತು ಡಬ್ಟಾ ಅಂಡಿಗಳನ್ನು ತೆರವುಗೊಳಿಸಿದರೆ ಪ್ರತ್ಯೇಕ ಜಾಗ ನೀಡುವಂತೆ ಗ್ಯಾರೇಜ್ ಹಾಗೂ ಡಬ್ಟಾ ಹೋಟೆಲ್‌ಗಳ ಬಡ ಕೂಲಿ ಕೆಲಸಗಾರರು ಅನೇಕ ಬಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ
ಮನವಿ ಮಾಡಿದ್ದರು. ಹೆದ್ದಾರಿ ತೆರವಿನಿಂದ ಗ್ಯಾರೇಜ್, ಗೂಡಂಗಡಿ ಹಾಗೂ ಡಬ್ಬದಂಗಡಿಗಳನ್ನು ಕಳೆದುಕೊಂಡವರಿಗೆ ಪರಿಹಾರ ನೀಡಲು ಕೇಂದ್ರದಿಂದ ಹಣ ಮಂಜೂರಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯನ್ನು ಭೇಟಿಯಾದಾಗ ಹಣ ಬಂದಿದ್ದು ಜಿಲ್ಲಾಧಿಕಾರಿ ಖಾತೆಗೆ ಜಮಾ ಮಾಡಲಾಗಿದೆ. ಹಾಗಾಗಿ ನಿಮ್ಮ ಪರಿಹಾರವನ್ನು ಜಿಲ್ಲಾಧಿಕಾರಿ ಬಳಿ ಪಡೆದುಕೊಳ್ಳಿ ಎಂದು ತಿಳಿಸಿ
ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎನ್.ಎಚ್-13 ಗ್ಯಾರೇಜ್-ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷಎಚ್.ಆರ್. ಮಹಮ್ಮದ್ ಮಾತನಾಡಿ, 2017, ಆಗಸ್ಟ್‌ನಲ್ಲೇ ಪರಿಹಾರದ ಮೊತ್ತ ಬಿಡುಗಡೆಯಾಗಿದೆ. ಜಿಲ್ಲಾ ಧಿಕಾರಿ ಬಳಿ ಹಣ ಇರುವುದರಿಂದ ಕೂಡಲೆ
ಪರಿಹಾರ ನೀಡುವಂತೆ ನಾಲ್ಕೈದು ಬಾರಿ ಒತ್ತಾಯಿಸಿದರೂ ಜಿಲ್ಲಾ ಧಿಕಾರಿಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಪ್ರತಿ ಮಂಗಳವಾರ ನಡೆಯುವ ಜನಸ್ಪಂದನ ಸಭೆಯಲ್ಲಿಯೂ ಮನವಿ ಮಾಡಿದ್ದೇವೆ. ಜಿಲ್ಲಾ ಧಿಕಾರಿಗಳು ಬಡ, ಕೂಲಿ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕೂಡಲೇ ಪರಿಹಾರದ ಮೊತ್ತ ನೀಡಬೇಕು ಎಂದು ಒತ್ತಾಯಿಸಿದರು. ಅಖೀಲ ಕರ್ನಾಟಕ ಜನಸೇವಾ ಸಂಘದ ಅಧ್ಯಕ್ಷ ಅಮ್ಜದ್ ಖಾನ್, ಉಪಾಧ್ಯಕ್ಷ ಉಮ್ಮರ್, ಅನ್ವರ್ ಭಾಷಾ, ಜಾಕೀರ್, ತನ್ವೀರ್ ಬಾಬು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.