ಡಿಕೆಶಿ, ಸಿದ್ದರಾಮಯ್ಯನವರು ಭಂಡಾಸುರ- ಮಂಡಾಸುರರು: ಶ್ರೀರಾಮುಲು
Team Udayavani, Nov 30, 2021, 4:34 PM IST
ಚಿತ್ರದುರ್ಗ: ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಭಂಡಾಸುರ, ಮಂಡಾಸುರರು ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 400 ಲೋಕಸಭೆ ಸದಸ್ಯರಿದ್ದ ಕಾಂಗ್ರೆಸ್ ಈಗ 50ಕ್ಕೆ ತಲುಪಿದೆ. ಬಿಜೆಪಿ ಮುಳುಗುತ್ತಿರುವ ಹಡಗು ಎಂದು ಭಂಡಾಸುರ ಡಿಕೆಶಿ ಹೇಳಿದ್ದಾರೆ. ಪ್ರಧಾನಿ ಮೋದಿ ಬಗ್ಗೆ ಹೀಯಾಳಿಸಿ ದೊಡ್ಡವಾರಾಗಬಹುದೆಂದು ಭಾವಿಸಿದ್ದಾರೆ. ಬಂಡಾಸುರ, ಮಂಡಾಸುರರು ದೊಡ್ಡ ದೊಡ್ಡ ಮಾತು ಆಡುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ತಕ್ಕ ಪಾಠ ಕಲಿಸುತ್ತಾರೆ ಎಂದರು.
ಬಿಟ್ ಕಾಯಿನ್ ಬಗ್ಗೆ ಬಂಡಾಸುರ, ಮಂಡಾಸುರರ ಬಳಿ ದಾಖಲೆ ಇಲ್ಲ. ಬುಟ್ಟಿಯಲ್ಲಿ ಹಾವಿದೆ ಎಂದು ಬಿಟ್ ಕಾಯಿನ್ ಬಗ್ಗೆ ಮಾತಾಡುತ್ತಿದ್ದಾರೆ ಎಂದರು.
ಇದನ್ನೂ ಓದಿ:ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು
ಮುರುಗೇಶ್ ನಿರಾಣಿ ಸಿಎಂ ಆಗುತ್ತಾರೆಂಬ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಮಾತನಾಡಿದ ಸಚಿವರು, ಈ ಬಗ್ಗೆ ನಾನು ಮಾತನಾಡುವುದಿಲ್ಲ. ಹೈಕಮಾಂಡ್ ತೀರ್ಮಾನಿಸುತ್ತದೆ. ಬಿಜೆಪಿ ಪಕ್ಷದಲ್ಲಿ ಯಾವುದೇ ಕಚ್ಚಾಟ ಇಲ್ಲ, ಒಗ್ಗಟ್ಟಿದೆ. ಕಾಂಗ್ರೆಸ್ ಪಕ್ಷದಲ್ಲಿ ಕಚ್ಚಾಟ ಇದೆ ಎಂದ ಹೇಳಿದರು.
ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಹರಡುವ ಭೀತಿ ವಿಚಾರಕ್ಕೆ ಮಾತನಾಡಿದ ಅವರು, ಇನ್ನು ಮುಂದೆ ಜೀವನದಲ್ಲಿ ಅನೇಕ ಖಾಯಿಲೆ ಬರಬಹುದು. ಒಮಿಕ್ರಾನ್ ಅಥವಾ ಬೇರೆ ಯಾವುದೇ ಖಾಯಿಲೆ ಬರಬಹುದು. ಮ್ಯಾನ್ ಮೇಡೆಡ್ ಅಥವಾ ನ್ಯಾಚುರಲ್ ವೈರಸ್ ಇರಬಹುದು. ಈ ಬಗ್ಗೆ ನಾನು ಚರ್ಚೆ ಮಾಡಲು ಹೋಗುವುದಿಲ್ಲ. ಸರ್ಕಾರದ ನಿಯಮಗಳನ್ನು ಜನರು ಜಾಗೃತಿಯಿಂದ ಪಾಲಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.