ಅಂಗನವಾಡಿಯಲ್ಲೇ ಎಲ್‌ಕೆಜಿ ಆರಂಭಿಸಿ
Team Udayavani, Sep 22, 2020, 7:57 PM IST
ಚಿತ್ರದುರ್ಗ: ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ನಡೆಸುವ ಬದಲು ಅಂಗನವಾಡಿಗಳಲ್ಲೇ ಆರಂಭಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ಪ್ರತಿಭಟಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಲಾಯಿತು.
ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ನಡೆಸುವ ಮೂಲಕ ಐಸಿಡಿಎಸ್ ಯೋಜನೆಯನ್ನು ಉಳಿಸಬೇಕು. ಅಂಗನವಾಡಿಗಳಲ್ಲಿ ಎಲ್‌ಕೆಜಿ ಆರಂಭಿಸಿ ಎಂದು ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಆದರೆ ರಾಜ್ಯ ಸರ್ಕಾರ ಪರಿಶೀಲಿಸುವುದಾಗಿ ಹೇಳುತ್ತಿರುವುದರಲ್ಲಿ ಅರ್ಥವಿಲ್ಲ ಎಂದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿ, ಪಠ್ಯಪುಸ್ತಕಗಳನ್ನು ಒದಗಿಸಿ, ಸಮವಸ್ತ್ರ ವಿತರಿಸಿ, ಪ್ರಾಥಮಿಕ ಶಾಲೆಗೆ ದಾಖಲಾಗಲು ಅಂಗನವಾಡಿ ಕೇಂದ್ರಗಳಿಂದಲೇ ವರ್ಗಾವಣೆ ಪತ್ರ ನೀಡುವಂತೆ ಆದೇಶಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮರಣ ಹೊಂದಿದಾಗ ಅವರ ಮಗಳಿಗೆ ಅನುಕಂಪ ಆಧಾರದ ಮೇಲೆ ಹುದ್ದೆ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕೋವಿಡ್ ವಾರಿಯರ್ಸ್ ಗಳೆಂದು ಪರಿಗಣಿಸಿ ಮೃತಪಟ್ಟ ಸಂದರ್ಭದಲ್ಲಿ 30 ಲಕ್ಷ ರೂ.ವಿಮೆ ಹಾಗೂ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದರು.
ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು, ಜಮುನಾಬಾಯಿ, ಭಾಗ್ಯಮ್ಮ, ವಿನೋದಮ್ಮ, ಸಾವಿತ್ರಮ್ಮ, ರತ್ನಮ್ಮ, ರಾಧಮ್ಮ, ಟಿ.ಆರ್.ಉಮಾಪತಿ, ಸತ್ಯಕೀರ್ತಿ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.