ಅಂತೂ-ಇಂತೂ ಶುರುವಾಯ್ತು ಖಾಸಗಿ ಬಸ್ ಸಂಚಾರ
Team Udayavani, Aug 4, 2020, 2:29 PM IST
ಚಿತ್ರದುರ್ಗ: ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ನಿಧಾನವಾಗಿ ಆರಂಭಗೊಂಡಿದೆ. ಸೋಮವಾರ ಸುಮಾರು 11 ಬಸ್‌ಗಳು ಸಂಚರಿಸಿದ್ದು, ಆ. 5 ರಿಂದ ಇನ್ನೂ 40 ರಿಂದ 50 ಬಸ್‌ಗಳು ರಸ್ತೆಗಿಳಿಯುವ ಸಾಧ್ಯತೆ ಇದೆ. ಮಾರ್ಚ್ 24 ರಂದು ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದ ದಿನದಿಂದ ಸಂಪೂರ್ಣವಾಗಿ ಸೇವೆ ನಿಲ್ಲಿಸಿದ್ದ ಖಾಸಗಿ ಬಸ್ ಮಾಲೀಕರು, ಲಾಕ್ ಡೌನ್ ತೆರವಾದ ನಂತರ ನಿಯಮಾನುಸಾರ 30 ಜನರನ್ನು ಮಾತ್ರ ಹತ್ತಿಸಿಕೊಂಡು ಸಂಚರಿಸಿದರೆ ನಷ್ಟವಾಗುತ್ತದೆ ಎಂಬ ಕಾರಣಕ್ಕೆ ನಿಲ್ಲಿಸಿದ್ದರು.
ತ್ತೈಮಾಸಿಕ ತೆರಿಗೆಯಲ್ಲಿ ವಿನಾಯಿತಿ ನೀಡಬೇಕು. ಇಲ್ಲದಿದ್ದರೆ ಬಸ್ ಚಾಲಕ, ನಿರ್ವಾಹಕರಿಗೆ ಸಂಬಳ ಕೊಟ್ಟು, ಇಂಧನ ತುಂಬಿಸಲು ಹಣ ಸಾಕಾಗುವುದಿಲ್ಲ. ಈಗ ಬಹುತೇಕರು ಸ್ವಂತ ವಾಹನಗಳಿಗೆ ಹೊಂದಿಕೊಳ್ಳುತ್ತಿದ್ದಾರೆ. ಎಲ್ಲಾ ಆಯಾಮದಲ್ಲೂ ಖಾಸಗಿ ಬಸ್‌ಗಳ ಮಾಲೀಕರಿಗೆ ನಷ್ಟವಾಗುತ್ತದೆ ಎಂದು ಸರ್ಕಾರದ ಗಮನ ಸೆಳೆದಿದ್ದರು. ಆದರೆ ಸರ್ಕಾರ ಯಾವುದನ್ನೂ ಗಂಭೀರವಾಗಿ ತೆಗೆದುಕೊಳ್ಳದ ಕಾರಣ ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದರು. ಆದರೆ ಇನ್ನೆಷ್ಟು ದಿನ ಕಾಯುವುದು, ಬಸ್‌ಗಾಗಿ ಹಾಕಿದ ಬಂಡವಾಳವೂ ನಷ್ಟವಾಗುತ್ತದೆ ಎಂಬ ಕಾರಣಕ್ಕೆ ಕೆಲವು ಮಾಲೀಕರು ಧೈರ್ಯ ಮಾಡಿ ಸೋಮವಾರ ಬಸ್‌ಗಳನ್ನು ರಸ್ತೆಗಿಳಿಸಿದ್ದಾರೆ. ನಗರದ ಖಾಸಗಿ ಬಸ್ ನಿಲ್ದಾಣವನ್ನು ಸಂಪೂರ್ಣ ಶುಚಿಗೊಳಿಸಿ ಬಸ್‌ಗಳಿಗೆ ಸ್ಯಾನಿಟೈಸ್ ಮಾಡಲಾಯಿತು. ಪ್ರಯಾಣಿಕರಿಗೆ ಸ್ಯಾನಿಟೈಸರ್ ಹಾಕಿ ಮಾಸ್ಕ್ ಕಡ್ಡಾಯಗಿಳಿಸಲಾಗಿತ್ತು. ಪ್ರತಿ ಬಸ್‌ನಲ್ಲಿ 30 ಜನ ಪ್ರಯಾಣಿಸುವಂತೆ ನೋಡಿಕೊಳ್ಳಲಾಯಿತು.
ಚಳ್ಳಕೆರೆಯಲ್ಲೂ ರಸ್ತೆಗಿಳಿದ ಖಾಸಗಿ ಬಸ್‌ಗಳು
ಚಳ್ಳಕೆರೆ: ಕೊರೊನಾ ಲಾಕ್‌ಡೌನ್‌ನಿಂದ ಕಳೆದ ನಾಲ್ಕು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರ ಸೋಮವಾರದಿಂದ ಪುನರಾರಂಭಗೊಂಡಿತು. ಆದರೆ ಖಾಸಗಿ ಬಸ್ ಗಳನ್ನು ಹತ್ತಲು ಪ್ರಯಾಣಿಕರು ಹಿಂದೇಟು ಹಾಕುತ್ತಿರುವುದು ಕಂಡು ಬಂತು. ಖಾಸಗಿ ಬಸ್ ಮಾಲೀಕರು ಸರ್ಕಾರದ ನಿರ್ದೇಶನದಂತೆ ಲಾಕ್‌ಡೌನ್ ಅವಧಿಯಲ್ಲಿ ರಸ್ತೆಗೆ ಇಳಿಸಿರಲಿಲ್ಲ. ಲಾಕ್‌ಡೌನ್ ತೆರವುಗೊಳಿಸಿದ ನಂತರ ಚಾಲಕರು, ನಿರ್ವಾಹಕರು, ಏಜೆಂಟರು
ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ತಮ್ಮ ಸೇವೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದಾರೆ. ಇಂದು ಬೆರಳಣಿಕೆ ಬಸ್‌ಗಳು ಸಂಚರಿಸಿದವು.
ಬಹುತೇಕ ಬಸ್‌ಗಳು ಖಾಲಿಯಾಗಿ ಓಡಾಡುತ್ತಿರುವುದು ಬಸ್ ಮಾಲೀಕರ ಚಿಂತೆಗೆ ಕಾರಣವಾಗಿದೆ.
ನಮ್ಮ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿಲ್ಲ. ಗ್ರಾಮೀಣ ಭಾಗದ ಜನತೆ ಖಾಸಗಿ ಬಸ್ ಗಳನ್ನೇ ಅವಲಂಬಿಸಿರುವುದರಿಂದ ಅನಿವಾರ್ಯವಾಗಿ ಧೈರ್ಯ ಮಾಡಿ ಬಸ್‌ಗಳನ್ನು ಓಡಿಸುತ್ತಿದ್ದೇವೆ. ಆ. 5 ರಿಂದ ಮತ್ತಷ್ಟು ಬಸ್‌ಗಳು ಸಂಚರಿಸಲಿವೆ.
ಬಿ.ಎ. ಲಿಂಗಾರೆಡ್ಡಿ, ಖಾಸಗಿ ಬಸ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.