ಜಿನಮಂದಿರ ಸುವರ್ಣ ಮಹೋತ್ಸವ ಆರಂಭ
Team Udayavani, Jan 28, 2020, 2:05 PM IST
ಚಳ್ಳಕೆರೆ: ನಗರದ ಭಗವಾನ್ ಶ್ರೀ ಬಾಹುಬಲಿ ದಿಗಂಬರ ಜೈನ ಟ್ರಸ್ಟ್, ಪಾರ್ಶ್ವನಾಥ ಜಿನಮಂದಿರ ಸಮಾಜದ ಸಂಯುಕ್ತಾಶ್ರಯದಲ್ಲಿ ಜಿನಮಂದಿರದ ಸುವರ್ಣ ಮಹೋತ್ಸವ, ಏಕಶಿಲಾ ಭಗವಾನ್ ಬಾಹುಬಲಿ ಸ್ವಾಮಿಯ ಪ್ರತಿಷ್ಠಾಪನೆ ಕಾರ್ಯಕ್ರಮಗಳಿಗೆ ಸೋಮವಾರ ಬೃಹತ್ ಮೆರವಣಿಗೆಯೊಂದಿಗೆ ಚಾಲನೆ ನೀಡಲಾಯಿತು.
ನಗರದ ಬೆಂಗಳೂರು ರಸ್ತೆಯಲ್ಲಿರುವ ಮಾಜಿ ಸಚಿವ ಡಿ. ಸುಧಾಕರ್ ನಿವಾಸದಿಂದ ಜೈನ ಸಮುದಾಯದವರು ಮಂಗಳ ಸ್ನಾನದ ನಂತರ ಮುಕುಟ ಧಾರಣೆ ಮಾಡಿಕೊಂಡರು. ಇಂದ್ರ, ಇಂದ್ರಾಣಿ, ಅಷ್ಟ ಕುಮಾರಿಯರ ಸಹಿತ ಮಂಗಳವಾದ್ಯದೊಂದಿಗೆ ಮೆರವಣಿಗೆ ಪ್ರಾರಂಭವಾಯಿತು. ನೆಹರೂ ವೃತ್ತ, ಬೆಂಗಳೂರು ರಸ್ತೆ, ಮಹಾದೇವಿ ರಸ್ತೆ ಮೂಲಕ ಮೆರವಣಿಗೆ ಜೈನ ಮಂದಿರವನ್ನು ತಲುಪಿತು. ಅಲಂಕೃತ ಆನೆಯನ್ನು ಮೆರವಣಿಗೆಯಲ್ಲಿ ಕರೆತಂದಿದ್ದು ವಿಶೇಷ. ದಕ್ಷಿಣಕನ್ನಡ ಜಿಲ್ಲೆಯ ಚಂಡೆ ಕುಣಿತ ನೆರೆದವರನ್ನು ಆಕರ್ಷಿಸಿತು.
ಮೆರವಣಿಗೆ ಜಿನಮಂದಿರ ತಲುಪಿದ ನಂತರ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಮಾಜಿ ಸಚಿವ ಡಿ. ಸುಧಾಕರ್, ಅವರ ಪತ್ನಿ ಹರ್ಷಿಣಿ, ಬಾಹುಬಲಿ ದಿಗಂಬರ ಜೈನ ಟ್ರಸ್ಟ್ ಅಧ್ಯಕ್ಷ ಡಿ. ಭರತ್ ರಾಜ್- ಜ್ವಾಲ, ಪುರಸಭೆ ಮಾಜಿ ಅಧ್ಯಕ್ಷ ಎನ್.ಜೆ. ವೆಂಕಟೇಶ್-ಗೀತಾ, ಜೈನ ಸಮಾಜದ ಹಿರಿಯ ಮುಖಂಡ ಡಿ. ಅಂಬಣ್ಣ-ಪದ್ಮ, , ಮಹಾವೀರ ಸೂಜಿ, ಸುಭಾಷ್‌ಚಂದ್ರ, ಗೌರಿಪುರ ಪಾರ್ಶ್ವನಾಥ, ಪದ್ಮರಾಜ್ ಹಾಗೂ ಡಿ. ಪ್ರಭಾಕರ ದಂಪತಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.