ಪರಿಸರದ ಮೇಲಾಗುತ್ತಿರುವ ದಾಳಿ ನಿಲ್ಲಲಿ
Team Udayavani, Jun 6, 2018, 3:10 PM IST
ಚಿತ್ರದುರ್ಗ: ಪ್ರಕೃತಿಯಲ್ಲಿ ಮನುಷ್ಯನಿಗೆ ಬದುಕುವ ಹಕ್ಕು ಇರುವಂತೆ ಇತರೆ ಎಲ್ಲಾ ಪ್ರಾಣಿ, ಪಕ್ಷಿಗಳಿಗೂ ಬದುಕುವ ಹಕ್ಕಿದೆ. ಆ ಹಕ್ಕು ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠ ಹೇಳಿದರು.
ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಚಿತ್ರದುರ್ಗ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರದ ಮೇಲೆ ನಿರಂತರ ದಾಳಿ ಮಾಡುತ್ತಿರುವ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಅರಣ್ಯ, ಪ್ರಾಣಿ, ಪಕ್ಷಿ, ಭೂಮಿ ಸೇರಿದಂತೆ ಇತರೆ ಪ್ರಕೃತಿ ನಾಶ ಮಾಡಿ ತಾನು ಬದುಕಿ ಪ್ರಾಣಿ ಸಾಯಿಸಿ ಬದುಕುತ್ತಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಕೃತಿಯಲ್ಲಿನ 83 ಸಾವಿರ ಜನ್ಮ ರಾಶಿಗಳಲ್ಲಿ ಮನುಷ್ಯ ಜಾತಿ ಒಂದಾಗಿದೆ. ಆದರೆ ಎಲ್ಲಾ ಜೀವಿಗಳಿಗಿಂತಲೂ ಮನುಷ್ಯರ ಸಂಖ್ಯೆ ಹೆಚ್ಚಾಗಿದೆ. ಪ್ರಕೃತಿಯ ದುರ್ಬಳಕೆಯಿಂದ ಮನುಷ್ಯರ ಕುಲ ಬೆಳೆಯುತ್ತಿದೆ. ಆದರೆ ಪ್ರಾಣಿ, ಪಕ್ಷಿಗಳ ಸಂಕುಲ ನಾಶವಾಗುತ್ತಿರುವುದು ತೀವ್ರ ಕಳವಳಕಾರಿ ಬೆಳವಣಿಗೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಕೃತಿಯಲ್ಲಿ ಎಲ್ಲಾ ಪ್ರಾಣಿ, ಪಕ್ಷಿಗಳಿಗೂ ಬದುಕುವ ಹಕ್ಕಿದ್ದು ಇದನ್ನು ನಾಶ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗಿದೆ. ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಉಪಯೋಗ ಮಾಡಿ ಬಿಸಾಡುವುದರಿಂದ ಪರಿಸರ ಮಾಲಿನ್ಯವಾಗುತ್ತಿದೆ. ಪ್ರಾಣಿ, ಪಕ್ಷಿಗಳಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಹಾಗೂ ಪ್ಲಾಸ್ಟಿಕ್ ಬಳಕೆ ಕೈಬಿಡಬೇಕು
ಎಂದರು.
ಅಭಿವೃದ್ಧಿಯ ನೆಪದಲ್ಲಿ ಈ ಹಿಂದೆ ಕುದುರೆಮುಖದಲ್ಲಿ ಅದಿರು ಗಣಿಗಾರಿಕೆ ನಡೆಸಲಾಗುತ್ತಿತ್ತು. ಪರಿಸರದಲ್ಲಿನ ಪ್ರಾಣಿ,
ಪಕ್ಷಿಗಳ ನಾಶದ ಕಾರಣದಿಂದ ಇದನ್ನು 2005ರಲ್ಲಿ ನಿಲ್ಲಿಸಲಾಯಿತು. ಗಣಿಗಾರಿಕೆ ಸೇರಿದಂತೆ ಇತರೆ ಪ್ರಕೃತಿಯ ನಾಶದಿಂದ ಬರುವ ಲಾಭ ಮುಖ್ಯವಾಗುವುದಿಲ್ಲ. ಆದರೆ ಪರಿಸರದ ಸಂರಕ್ಷಣೆಯಾಗಿ ಪ್ರಕೃತಿಯ ಸಂಪತ್ತು
ಉಳಿಯುವಂತಾಗಬೇಕು. ಆದ್ದರಿಂದಲೇ ಶೇ 10 ರಷ್ಟು ಅರಣ್ಯ ಭೂಮಿ ಕಡ್ಡಾಯವಾಗಿ ಇರಬೇಕೆಂದು ಕಾನೂನು ಇದೆ. ಅರಣ್ಯ ಭೂಮಿಯನ್ನು ಯಾರಿಗೂ ಹಂಚಿಕೆ ಮಾಡಲು ಅವಕಾಶ ಇರುವುದಿಲ್ಲ ಎಂದರು.
ಅರಣ್ಯವನ್ನು ಬೆಳೆಸುವುದರಿಂದ ಉಸಿರಾಟಕ್ಕೆ ಎಲ್ಲರಿಗೂ ಅನುಕೂಲವಾಗುತ್ತದೆ. ನಾವು ಉಸಿರಾಡುವ ಇಂಗಾಲಡೈ ಆಕ್ಸೆಡ್ ತೆಗೆದುಕೊಂಡು ಆಮ್ಲಜನಕ ನೀಡುತ್ತದೆ. ಅದರಲ್ಲಿಯೂ ತುಳಸಿ ಗಿಡವು ದಿನದ 24 ಗಂಟೆ ಆಮ್ಲಜನಕ ನೀಡುತ್ತದೆ. ಆದ್ದರಿಂದಲೇ ಮನೆಯ ಮುಂಭಾಗದಲ್ಲಿ ತುಳಿಸಿ ಗಿಡ ಬೆಳೆಸಲಾಗುತ್ತದೆ ಎಂದು ತಿಳಿಸಿದರು.
1972ರಲ್ಲಿ ನಡೆದ ವಿಶ್ವಸಂಸ್ಥೆಯ ನಿರ್ಣಯದನ್ವಯ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತಿದೆ. ಇದನ್ನು 1973ರಿಂದ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗುತ್ತಿದೆ. ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ತೊಲಗಿಸೋಣ ಎಂಬ ಘೋಷಣೆಯಡಿ ಆಚರಣೆ ಮಾಡಲಾಗುತ್ತಿದೆ.
ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ನಿಂದಾಗುವ ದುಷ್ಪರಿಣಾಮಗಳ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಿಗೆ ಸಮಾರಂಭ ಏರ್ಪಡಿಸಿ ಬಹುಮಾನ ನೀಡಲಾಗುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪಿ.ಎನ್.ರವೀಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಬಸವರಾಜ ಎಸ್.ಚಿಗರೆಡ್ಡಿ, ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಟಿ. ವೀರಣ್ಣ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹಿರಿಯ ನ್ಯಾಯಾಧೀಶರಾದ ಎಸ್.ಆರ್. ದಿಂಡಲಕೊಪ್ಪ, ಜಿಲ್ಲಾ ರಕ್ಷಣಾಧಿಕಾರಿ ಶ್ರೀನಾಥ್ ಎಂ. ಜೋಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಬಿ. ವಿಶ್ವನಾಥ್, ಕಾರ್ಯದರ್ಶಿ ಶಿವುಯಾದವ್ ಹಾಗೂ ಇನ್ನಿತರೆ ಅಧಿಕಾರಿಗಳು ಇದ್ದರು. ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಕೆ.ಬಿ. ಮಂಜುನಾಥ್ ಸ್ವಾಗತಿಸಿದರು. ಸಾಮಾಜಿಕ ಅರಣ್ಯ ವಿಭಾಗದ ಉಪ ಸಂರಕ್ಷಣಾಧಿಕಾರಿ ಮಳವಳ್ಳಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.