ಗ್ರಾಮಗಳಲ್ಲಿ ಬೀದಿನಾಟಕ ಪ್ರದರ್ಶನ
Team Udayavani, Dec 17, 2019, 3:00 PM IST
ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಹೊಳಲ್ಕೆರೆ ತಾಲೂಕು ಎನ್.ಜಿ. ಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಆರ್. ಗೊಲ್ಲರಹಳ್ಳಿ, ಕಡ್ಲಪ್ಪನಟ್ಟಿ, ಉಪ್ಪಾರಹಟ್ಟಿ ಹೊಸಹಟ್ಟಿ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತ ಬೀದಿನಾಟಕವನ್ನು ಪ್ರದರ್ಶಿಸಲಾಯಿತು.
ಹಿರಿಯೂರಿನ ಪಾಲನಾ ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕೆ.ಎಚ್. ಮೋಹನ್ ಮತ್ತು ಸಂಗಡಿಗರು ಬೀದಿನಾಟಕ ಪ್ರದರ್ಶಿಸಿದರು. ಮಾರುತಿ ಸಾಂಸ್ಕೃತಿಕ ಕಲಾ ಸಂಘ ಆಯಿತೋಳಿನ ಜಿ.ಎನ್. ವಿರೂಪಾಕ್ಷಪ್ಪ ಮತ್ತು ಸಂಗಡಿಗರು ಪ್ರಚಾರ ಗೀತೆ ಕಾರ್ಯಕ್ರಮ ನಡೆಸಿಕೊಟ್ಟರು. ಬೀದಿನಾಟಕದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಸರ್ಕಾರ ನೀಡುವ ಸಹಾಯಧನ, ನೇಕಾರರ ಸಾಲ ಮನ್ನಾ, ಮೀನುಗಾರರ ಸಾಲ ಮನ್ನಾ ಯೋಜನೆ, ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ ಹಾಗೂ ಆಯುಷ್ಮಾನ್ ಕಾರ್ಡ್ ಹೊಂದಿರುವವರಿಗೆ ಇರುವ ಸೌಲಭ್ಯಗಳ ಮಾಹಿತಿಯನ್ನು ಬೀದಿ ನಾಟಕದ ಮೂಲಕ ಪ್ರಚುರ ಪಡಿಸಲಾಯಿತು.
ಸಿನಿ ಚಾಲಕ ತಿಪ್ಪಯ್ಯ, ವಾಹನ ಚಾಲಕ ಚಂದ್ರಶೇಖರ್ ಎಸ್. ಗುಡದಪ್ಪ, ಧರಣೇಶಪ್ಪ, ಆರ್. ರಾಮಪ್ಪ, ಟಿ. ಚಂದ್ರಪ್ಪ, ಬಿ. ಮಂಜಪ್ಪ, ಎಚ್. ಬೈರಪ್ಪ, ಸವಿತಾ, ಜಯಮ್ಮ, ರತ್ನಮ್ಮ, ಪರಪ್ಪ, ಜಯಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.