ಗ್ರಾಮಾಂತರ ಭಾಗದಲ್ಲಿ ಪಕ್ಷ ಬಲಪಡಿಸಿ: ಸುಧಾಕರ್
Team Udayavani, Jun 30, 2020, 11:32 AM IST
ಹಿರಿಯೂರು: ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದ್ದ ಮಾಜಿ ಸಚಿವ ಡಿ. ಸುಧಾಕರ್ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವ ಸಿದ್ಧತೆ ವೀಕ್ಷಿಸಿದರು.
ಹಿರಿಯೂರು: ಕೆಪಿಸಿಸಿ ನೂತನ ಅಧ್ಯಕ್ಷರು ಪಕ್ಷ ಸಂಘಟನೆ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಗ್ರಾಮಾಂತರ ಭಾಗದಲ್ಲಿ ಪಕ್ಷವನ್ನು ಬಲಪಡಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ
ಕಾರ್ಯಕರ್ತರು ಸಜ್ಜಾಗಬೇಕು ಎಂದು ಮಾಜಿ ಸಚಿವ ಡಿ. ಸುಧಾಕರ್ ಕರೆ ನೀಡಿದರು. ತಾಲೂಕಿನ ಐಮಂಗಲ ಹಾಗೂ ಧರ್ಮಪುರ ಹೋಬಳಿಯ ಖಂಡೇನಹಳ್ಳಿ, ಧರ್ಮಪುರ, ಹರಿಯಬ್ಬೆ, ರಂಗೇನಹಳ್ಳಿ, ಗನ್ನಾಯಕನಹಳ್ಳಿ, ಹರ್ತಿಕೋಟೆ, ಯರಬಳ್ಳಿ, ಎಂ.ಡಿ. ಕೋಟೆ ಗ್ರಾಮಗಳಿಗೆ ಭೇಟಿ ನೀಡಿದ್ದ ಅವರು, ಜುಲೈ 2 ರಂದು ನಡೆಯಲಿರುವ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭ ವೀಕ್ಷಿಸಲು ಎಲ್‌ಸಿಡಿ ಪರದೆ ಅಳವಡಿಕೆ ಕಾರ್ಯ ವೀಕ್ಷಿಸಿ ಅವರು ಮಾತನಾಡಿದರು. ತಾಲೂಕಿನ ಸುಮಾರು ಐವತ್ತು ಕಡೆ ಎಲ್ ಇಡಿ ಪರದೆ ಅಳವಡಿಸಿ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದರು.
ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಸದಸ್ಯೆ ಗೀತಾ ನಾಗಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಈರಲಿಂಗೇಗೌಡ, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಕಲ್ಲಟ್ಟಿ ತಿಪ್ಪೇಸ್ವಾಮಿ, ಕೆಪಿಸಿಸಿ ಸದಸ್ಯರಾದ ಕಂದಿಕೆರೆ ಸುರೇಶ್‌ಬಾಬು, ಬಿ.ಎಚ್. ಮಂಜುನಾಥ್, ನಗರಸಭಾ ಸದಸ್ಯರಾದ ಗುಂಡೇಶ್ ಕುಮಾರ್, ಎಸ್.ಆರ್. ತಿಪ್ಪೇಸ್ವಾಮಿ, ಹಂಪಣ್ಣ, ಮಧು ಹಳ್ಳಿಕೆರೆ, ಕೃಷ್ಣಮೂರ್ತಿ, ಗ್ರಾಪಂ ಅಧ್ಯಕ್ಷೆ ಯಶೋದಮ್ಮ, ಚಿಕ್ಕಣ್ಣ, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಪೃಥ್ವಿ ಕೋಗಾರ್, ರಾಮಚಂದ್ರಪ್ಪ, ಶ್ರೀಧರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ಹೊಸ ಸೇರ್ಪಡೆ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.