ಸುಧಾಕರ್‌ಗೆ ಟೀಕಿಸುವ ನೈತಿಕತೆಯಿಲ್ಲ
10 ವರ್ಷ ಶಾಸಕ, ಸಚಿವರಾಗಿ ಮಾಡಿದ ಅಭಿವೃದ್ಧಿ ಕಾರ್ಯ ಕ್ಷೇತ್ರದ ಜನತೆಗೆ ಗೊತ್ತಿದೆ: ಶಾಸಕಿ ಪೂರ್ಣಿಮಾ
Team Udayavani, May 9, 2022, 4:38 PM IST
ಹಿರಿಯೂರು: ವಾಜಪೇಯಿ ವಸತಿ ಯೋಜನೆ ಹಾಗೂ ಅಂಬೇಡ್ಕರ್ ವಸತಿ ಯೋಜನೆಗಳ ಅಡಿ ನಗರದಲ್ಲಿ ಸ್ಲಂ ಬೋರ್ಡ್ ವತಿಯಿಂದ ಮನೆಗಳನ್ನು ನಿರ್ಮಿಸಲಾಗುವುದು ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ನಗರದ ಶಾಸಕರ ಕಾರ್ಯಾಲಯದಲ್ಲಿ ವಸತಿ ಯೋಜನೆ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಮೇ 10ರಂದು ಮಂಗಳವಾರ ವಸತಿ ಸಚಿವ ವಿ. ಸೋಮಣ್ಣ ನಗರಕ್ಕೆ ಆಗಮಿಸಲಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಜಿ+2 ಮಾದರಿಯ 624 ಹಾಗೂ 1248 ಮನೆಗಳ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಅಲೆಮಾರಿ ಸಮುದಾಯಕ್ಕೆ ಈಗಾಗಲೇ ಮಂಜೂರಾದ 4448 ಮನೆಗಳ ಜೊತೆಗೆ ಹೆಚ್ಚುವರಿಯಾಗಿ 845 ಮನೆಗಳಿಗೆ ಇದೇ ಸಂದರ್ಭದಲ್ಲಿ ಹಕ್ಕುಪತ್ರ ವಿತರಿಸಲಾಗುವುದು. ಬಸವ ವಸತಿ ಹಾಗೂ ಅಂಬೇಡ್ಕರ್ ವಸತಿ ಯೋಜನೆಗಳ ಅಡಿಯಲ್ಲಿ ಗ್ರಾಮಾಂತರಕ್ಕೆ 1200 ಮನೆಗಳಿಗೆ ಮಂಜೂರಾತಿ ನೀಡಲಾಗಿದ್ದು, ಹೆಚ್ಚುವರಿಯಾಗಿ 1000 ಮನೆ ನಿರ್ಮಾಣಕ್ಕೆ ಮನವಿ ಮಾಡಲಾಗುವುದು ಎಂದರು.
ಜವಾಬ್ದಾರಿಯುತ ಶಾಸಕಿಯಾಗಿ ಮತದಾರರ ಋಣ ತೀರಿಸುತ್ತಿದ್ದೇನೆ. 8 ಕೋಟಿ ರೂ. ವೆಚ್ಚದ ಸಾರಿಗೆ ಡಿಪೋ ಮಂಜೂರಾಗಿದೆ. 25 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಲಿದೆ. ಮಿನಿ ವಿಧಾನಸೌಧಕ್ಕೆ 15 ಕೋಟಿ, ಧರ್ಮಪುರ ಕೆರೆಗೆ ನೀರು ಹರಿಸಲು 90 ಕೋಟಿ ರೂ., ನಗರದ ಜನತೆಯ ಅನುಕೂಲಕ್ಕೆ ಯುಜಿಡಿಗೆ 206 ಕೋಟಿ ರೂ. ಗಳನ್ನು ಅತಿ ಶೀಘ್ರದಲ್ಲಿ ಸರ್ಕಾರದಿಂದ ಮಂಜೂರು ಮಾಡಿಸಲಾಗುವುದು ಎಂದು ತಿಳಿಸಿದರು.
ತಾಲೂಕಿನಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಟೀಕೆ ಮಾಡಲು ಮಾಜಿ ಸಚಿವ ಡಿ. ಸುಧಾಕರ್ ಅವರಿಗೆ ಯಾವುದೇ ನೈತಿಕತೆ ಇಲ್ಲ. ಅವರು 10 ವರ್ಷಗಳ ಕಾಲ ಶಾಸಕರಾಗಿ, ಸಚಿವರಾಗಿ ಯಾವ ಬದ್ಧತೆಯಿಂದ ಕೆಲಸ ಮಾಡಿದ್ದಾರೆ, ಜನಪರವಾಗಿ ಅಭಿವೃದ್ಧಿ ಕೆಲಸ ಮಾಡಿದ್ದರೆ ಜನರು ಅವರನ್ನು ಆಯ್ಕೆ ಮಾಡುತ್ತಿದ್ದರು. ಜನರ ಮುಂದೆ ಸುಳ್ಳು ಹೇಳಿ ನಾಟಕ ಮಾಡಿದರೆ ಅದು ಜನಸಾಮಾನ್ಯರಿಗೆ ಅರ್ಥವಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ಮುಖಂಡ ಡಿ.ಟಿ. ಶ್ರೀನಿವಾಸ್ ಮಾತನಾಡಿ, ನನ್ನ ರಾಜಕೀಯ ಸ್ಥಾನಮಾನ ಏನೇ ಇರಲಿ ಅಥವಾ ಇಲ್ಲದಿರಲಿ, ಶಾಸಕಿಯ ಪತಿಯಾಗಿ ಅಷ್ಟೇ ಅಲ್ಲದೆ ಸಾಮಾಜಿಕ ಕಳಕಳಿ ಹೊಂದಿದ ವ್ಯಕ್ತಿಯಾಗಿದ್ದೇನೆ. ಕ್ಷೇತ್ರದಲ್ಲಿನ ಮೂಲ ಸೌಕರ್ಯಗಳ ಬಗ್ಗೆ ಶಾಸಕರು ಹಾಗೂ ಸರ್ಕಾರಕ್ಕೆ ನಮ್ಮದೇ ಆದ ರೀತಿಯಲ್ಲಿ ಮನವರಿಕೆ ಮಾಡಿದ್ದೇನೆ. ಕ್ಷೇತ್ರದ ಜನರ ಬೇಡಿಕೆಗಳಿಗೆ ಸ್ಪಂದಿಸಲು ಅಧಿಕಾರ ಇರಬೇಕು ಎಂದೇನಿಲ್ಲ. ಜವಾಬ್ದಾರಿ ಹಾಗೂ ಕಳಕಳಿ ಪ್ರದರ್ಶಿಸಿ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಜನರ ದುಃಖ ದುಮ್ಮಾನಗಳಿಗೆ ಧ್ವನಿಯಾಗಿ ಕೆಲಸ ಮಾಡಿದ್ದೇನೆ ಎಂದರು.
ನಗರಸಭೆ ಸದಸ್ಯ ಎಂ.ಡಿ. ಸಣ್ಣಪ್ಪ ಮಾತನಾಡಿ, ಜನಗಳಿಗೆ ನೀರು, ಆಶ್ರಯ ರಹಿತರಿಗೆ ಸೂರು ಕಲ್ಪಿಸುವ ದೃಷ್ಟಿಯಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಮೀರಿಸುವ ಶಾಸಕರನ್ನು ಇದುವರೆಗೂ ಹಿರಿಯೂರು ಕ್ಷೇತ್ರ ಕಂಡಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು, ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗದವರಿಗೂ ಶಾಸಕರ ಸ್ಪಂದನೆ ಮಾದರಿ ಎಂದು ಬಣ್ಣಿಸಿದರು.
ಕೃಷಿಕ ಸಮಾಜದ ಅಧ್ಯಕ್ಷ ಎಚ್.ಆರ್. ತಿಮ್ಮಯ್ಯ ಮಾತನಾಡಿ, ವಾಣಿವಿಲಾಸ ಸಾಗರಕ್ಕೆ 100 ಟಿಎಂಸಿ ನೀರು ಹಾಗೂ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಶಾಸಕರು ಮುಂದಾಗಬೇಕು. ಇದುವರೆಗೆ ರೈತರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿರುವ ಶಾಸಕರು ಇನ್ನು ಮುಂದೆಯೂ ನಮ್ಮ ಬೇಡಿಕೆಗಳನ್ನು ಕಾರ್ಯರೂಪಕ್ಕೆ ತರಲು ಗಮನ ನೀಡಬೇಕೆಂದರು.
ನಗರಸಭೆ ಸದಸ್ಯ ಕೇಶವಮೂರ್ತಿ, ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್ ಮಾತನಾಡಿದರು. ನಗರಸಭೆ ಸದಸ್ಯರಾದ ಮಹೇಶ್ ಪಲ್ಲವ, ಗಣೇಶ್ ಕದ್ರು, ಮಾಜಿ ಸದಸ್ಯ ಬಿ.ಕೆ. ಕರಿಯಪ್ಪ, ಚಿರಂಜೀವಿ, ಕೆ.ಪಿ. ಶ್ರೀನಿವಾಸ್, ನಿತ್ಯಾನಂದ ಯಾದವ್, ಓಂಕಾರ್, ಶೋಭಾ, ಸರವಣ, ಘಾಟ್ ರವಿ, ಕೃಷ್ಣಮೂರ್ತಿ, ರಾಜಣ್ಣ ಮತ್ತಿತರರು ಇದ್ದರು.
ಶಾಸಕಿಯಾಗಿ ಅಲ್ಪ ಅವಧಿಯಲ್ಲಿ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಸುಧಾಕರ್ ಅವರು ಇಡೀ ರಾಜಕೀಯ ಜೀವನದಲ್ಲೇ ಮಾಡಿಲ್ಲ. ಕ್ಷೇತ್ರದ ಜನ ನನ್ನ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸವನ್ನು ನೋಡಿ ಅಸೂಯೆಯಿಂದ ಮಾಜಿ ಸಚಿವರು ಸುಳ್ಳು ಆರೋಪ ಮಾಡುತ್ತಾ ಕ್ಷೇತ್ರ ಪ್ರವಾಸ ಮಾಡುತ್ತಿದ್ದಾರೆ. ಮತದಾರರ ಮುಂದೆ ಅವರ ನಾಟಕ ನಡೆಯದು. -ಪೂರ್ಣಿಮಾ ಶ್ರೀನಿವಾಸ್, ಶಾಸಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.