ನಿವೇಶನ ಖಾತೆ ನೀಡದ್ದಕ್ಕೆ ಆತ್ಮಹತ್ಯೆ ಯತ್ನ

Team Udayavani, Jun 4, 2019, 8:20 AM IST

cd-tdy-1..

ಚಳ್ಳಕೆರೆ: ಮೈಮೇಲೆ ಸೀಮೆಎಣ್ಣೆ ಸುರುವಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಎನ್‌. ಮಂಜುನಾಥ ಹಾಗೂ ಅವರ ಕುಟುಂಬ.

ಚಳ್ಳಕೆರೆ: ತಂದೆ ಹೆಸರಿನಲ್ಲಿರುವ ನಿವೇಶನದ ಖಾತೆ ಮಾಡಿಸಿಕೊಡುತ್ತಿಲ್ಲ ಮತ್ತು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಮೈಮೇಲೆ ಸೀಮೆಎಣ್ಣೆ ಸುರುವಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ನೆಹರೂ ವೃತ್ತದಲ್ಲಿ ಸೋಮವಾರ ನಡೆದಿದೆ.

ದೊಡ್ಡೇರಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬೊಮ್ಮಸಮುದ್ರ ಗ್ರಾಮದ ಎನ್‌. ಮಂಜುನಾಥ (45), ಪತ್ನಿ ಶಿಲ್ಪ (30), ಮಕ್ಕಳಾದ ಹೇಮಂತ (11), ಭೂಲಕ್ಷ್ಮೀ (9) ಮತ್ತು ಚೇತನ (5) ಆತ್ಮಹತ್ಯೆಗೆ ಯತ್ನಿಸಿದವರು. ಆತ್ಮಹತ್ಯೆಗೆ ಮುಂದಾಗಲು ಪಿಡಿಒ ಕಾರಣ ಎಂದು ಮಂಜುನಾಥ ಆರೋಪಿಸಿದ್ದಾರೆ.

ಏನಿದು ಘಟನೆ?: ಮಂಜುನಾಥನ ತಂದೆ ನಿಂಗಪ್ಪ ಹೆಸರಿನಲ್ಲಿರುವ ಜಾಗವನ್ನುಅಳತೆ ಮಾಡಲು ಪಿಡಿಒ ಅವರು ಪೊಲೀಸರೊಂದಿಗೆ ತೆರಳಿದ್ದರು. ಈ ಕಾರ್ಯಕ್ಕೆ ಬೊಮ್ಮಸಮುದ್ರ ಗ್ರಾಮದವರೇ ಆದ ಜಗದೀಶ್‌, ರಾಘವೇಂದ್ರ, ಶೇಖರ್‌ ಮತ್ತಿತರರು ಆಕ್ಷೇಪ ವ್ಯಕ್ತಪಡಿಸಿದರು. ಸದರಿ ಜಾಗವನ್ನು ಯಾವುದೇ ಕಾರಣಕ್ಕೂ ನಿಂಗಪ್ಪನ ಮಗ ಮಂಜುನಾಥನಿಗೆ ನೀಡಬಾರದು. ಈ ಜಾಗದಲ್ಲಿರುವ ತಿಪ್ಪೆಗುಂಡಿಯನ್ನು ತೆರವುಗೊಳಿಸ ಬಾರದು ಎಂದು ತಾಕೀತು ಮಾಡಿದರು. ಅಲ್ಲದೆ ಮಂಜುನಾಥ ಹಾಗೂ ಆತನ ಕುಟುಂಬದವರ ಮೇಲೆ ಹಲ್ಲೆ ನಡೆಸಲು ಮುಂದಾದರು. ಮಧ್ಯ ಪ್ರವೇಶಿಸಿದ ಪೊಲೀಸರು, ಠಾಣೆಗೆ ಬಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿದರು.

ಇದರಿಂದ ಬೇಸತ್ತ ಮಂಜುನಾಥ, ಕುಟುಂಬ ಸಮೇತ ಚಳ್ಳಕೆರೆ ನಗರದ ನೆಹರೂ ವೃತ್ತಕ್ಕೆ ಆಗಮಿಸಿ ಆತ್ಮಹತ್ಯೆಗೆ ಮುಂದಾದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದುಗ್ಗಾವರ ಗ್ರಾಮ ಪಂಚಾಯತ್‌ 18-5-1983 ರಂದು ನನ್ನ ತಂದೆ ನಿಂಗಪ್ಪಗೆ ನಿವೇಶನ ನೀಡಿದೆ. ಕಾರಣಾಂತರಗಳಿಂದ ನಮಗೆ ನೀಡಿದ ನಿವೇಶನದ ಸಂಖ್ಯೆ 297ರಲ್ಲಿ ವಾಸ ಮಾಡಲು ಸಾಧ್ಯವಾಗಿರಲಿಲ್ಲ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನನ್ನ ತಂದೆ ಹೆಸರಿಗೆ ಇರುವ ನಿವೇಶನದ ಖಾತೆ ವಿವರವನ್ನು ಪಡೆದುಕೊಂಡಿದ್ದೆ. ಹಕ್ಕುಪತ್ರ ನೀಡುವಂತೆ ಮತ್ತು ನಿವೇಶನ ಅಳತೆ ಮಾಡಿಕೊಡುವಂತೆ ಗ್ರಾಪಂಗೆ ಅರ್ಜಿ ನೀಡಿದ್ದೆ. ನಿವೇಶನ ಪಡೆಯಲು ಅಡ್ಡಿ ಪಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನನ್ನ ಪತ್ನಿ ಎಚ್. ಶಿಲ್ಪ ಕಳೆದ ಮೇ 31 ರಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಳು. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದೇ ಅಲ್ಲದೆ ಜೀವ ಬೆದರಿಕೆಯನ್ನೂ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮನನೊಂದು ಕುಟುಂಬ ಸಮೇತ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿಸಿದರು.

ಆತ್ಮಹತ್ಯೆಗೆ ಯತ್ನಿಸಿದ ವಿಷಯ ತಿಳಿದ ಬೊಮ್ಮಸಮುದ್ರ ಗ್ರಾಮಸ್ಥರು ಚಳ್ಳಕೆರೆಗ ಆಗಮಿಸಿ ನೊಂದ ಕುಟುಂಬವನ್ನು ಸಂತೈಸಿದರು. ಪಿಎಸ್‌ಐ ಕೆ. ಸತೀಶ್‌ ನಾಯ್ಕ ಹಾಗೂ ಸಿಬ್ಬಂದಿ ಆತ್ಮಹತ್ಯೆ ಯತ್ನವನ್ನು ವಿಫಲಗೊಳಿಸಿದರು. ನಿವೇಶನ ಸ್ವಾಧೀನಕ್ಕೆ ಅಡ್ಡಿಪಡಿಸಿದ ನಾಲ್ವರು ಹಾಗೂ ದೊಡ್ಡೇರಿ ಗ್ರಾಪಂ ಪಿಡಿಒ ವಿಚಾರಣೆ ನಡೆಸುವುದಾಗಿ ಪಿಎಸ್‌ಐ ತಿಳಿಸಿದ್ದಾರೆ.

ಪಿಡಿಒ ಸ್ಪಷ್ಟನೆ: ಘಟನೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದೊಡ್ಡೇರಿ ಗ್ರಾಪಂ ಪಿಡಿಒ ಪ್ರತಿಭಾ, 1983ರಲ್ಲಿ ಮಂಜುನಾಥ ತಂದೆ ಹೆಸರಿಗೆ ನಿವೇಶನ ನೀಡಲಾಗಿತ್ತು. ಆದರೆ ಇದುವರೆಗೆ ಅವರ ಕುಟುಂಬದವರು ಅಲ್ಲಿ ವಾಸಿಸುತ್ತಿಲ್ಲ. ಅಲ್ಲದೆ ಖಾತೆಯನ್ನೂ ಮಾಡಿಸಿಕೊಂಡಿಲ್ಲ. ಹಾಗಾಗಿ ದಾಖಲೆಗಳ ಪ್ರಕಾರ ಸದರಿ ಜಾಗ ಗ್ರಾಮ ಠಾಣಾ ವ್ಯಾಪ್ತಿಗೆ ಸೇರಿದೆ. ಗ್ರಾಪಂ ಸದಸ್ಯರು ಕೂಡ ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡಲಿಲ್ಲ. ಆದ್ದರಿಂದ ಕಾನೂನುಕ್ರಮ ಕೈಗೊಳ್ಳಲಾಗಿದೆ. ಮಂಜುನಾಥ ಆರೋಪದಲ್ಲಿ ಸತ್ಯಾಂಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪಿಡಿಒ ಮಾತನ್ನು ಅಲ್ಲಗಳೆದಿರುವ ಮಂಜುನಾಥ, ಕಳೆದ ಆರು ತಿಂಗಳ ಹಿಂದೆಯೇ ಅರ್ಜಿ ಸಲ್ಲಿಸಿ ಖಾತೆ ನೀಡುವಂತೆ ಮನವಿ ಮಾಡಿದ್ದೆ. ಗ್ರಾಪಂ ಸದಸ್ಯರು ಕೂಡ ನನ್ನ ಅರ್ಜಿಗೆ ಸಹಿ ಹಾಕಿದ್ದಾರೆ. ಆದರೆ ಪಿಡಿಒ ಮಾತ್ರ ಖಾತೆ ಮಾಡಿಸಿಕೊಡುವ ಬಗ್ಗೆ ಗಮನ ನೀಡುತ್ತಿಲ್ಲ ಎಂದು ದೂರಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.