ಕಾಂಗ್ರೆಸ್ನಿಂದ ತಮಟೆ-ಜಾಗಟೆ ಪ್ರತಿಭಟನೆ
Team Udayavani, Apr 1, 2022, 2:21 PM IST
ಹಿರಿಯೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಡಳಿತ ವೈಫಲ್ಯ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೈಕ್ಗೆ ಪೂಜೆ ಮಾಡಿ ತಮಟೆ, ಜಾಗಟೆ ಬಾರಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಎಚ್. ಆಂಜನೇಯ ಮಾತನಾಡಿ, ದೇಶ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆಯನ್ನು ನಿಯಂತ್ರಿಸದೆ ಬಡವರು ಹಾಗೂ ಜನಸಾಮಾನ್ಯರನ್ನು ಬೀದಿಗೆ ತಂದು ನಿಲ್ಲಿಸಿದೆ. ಯುವಕರಿಗೆ ಉದ್ಯೋಗವಿಲ್ಲ. ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿವೆ. ಸರ್ಕಾರದ ಪೊಳ್ಳು ಭರವಸೆಗಳಿಂದ ಜನರು ಬೇಸತ್ತಿದ್ದು, ಬಿಜೆಪಿ ಸರ್ಕಾರವನ್ನು ತೊಲಗಿಸಲು ಚುನಾವಣೆಯನ್ನು ಎದುರು ನೋಡುತ್ತಿದ್ದಾರೆ ಎಂದರು.
ಮಾಜಿ ಸಚಿವ ಡಿ. ಸುಧಾಕರ್ ಮಾತನಾಡಿ, ಕೊರೊನಾದಿಂದ ಎಲ್ಲೆಡೆ ಆರ್ಥಿಕ ಮುಗ್ಗಟ್ಟು ಉಂಟಾಗಿದೆ. ಬೆಲೆ ಏರಿಕೆ ಅಸ್ಥಿರತೆಯಿಂದ ಜನರಿಗೆ ನೆಮ್ಮದಿ ಇಲ್ಲದಂತಾಗಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಾಗಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ ಎಂದು ಭವಿಷ್ಯ ನುಡಿದರು.
ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಖಾದಿ, ರಾಜ್ಯ ಕಾಂಗ್ರೆಸ್ ಕಾರ್ಮಿಕ ಸಂಘಟನೆ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕೆ.ಎಂ. ಅಮೃತೇಶ್ವರ, ಡಾ| ಜೆ.ಆರ್. ಸುಜಾತಾ, ಗಿರೀಶ್, ವಿ. ಶಿವಕುಮಾರ್, ಜ್ಞಾನೇಶ್, ಸಿದ್ದೇಶ್, ಜಿ.ಎಲ್. ಮೂರ್ತಿ, ಹನುಮಂತರಾಯಪ್ಪ, ಕವಿತಾ ಲೋಕೇಶ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.