ಕೋವ್ಯಾಕ್ಸಿನ್ ಲಸಿಕೆ ಪಡೆದ ತರಳಬಾಳು ಶ್ರೀ
Team Udayavani, Mar 17, 2021, 8:16 PM IST
ಸಿರಿಗೆರೆ : ಇಲ್ಲಿನ ತರಳಬಾಳು ಜಗದ್ಗುರು ಪೀಠಾಧ್ಯಕ್ಷರಾದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಂಗಳವಾರ ಬೆಂಗಳೂರಿನ ವಿಕ್ಟೋರಿಯಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಪಡೆದರು.
ಈ ಸಂದರ್ಭದಲ್ಲಿ ಸಂದೇಶ ನೀಡಿರುವ ತರಳಬಾಳು ಜಗದ್ಗುರುಗಳು, ವಿಶ್ವದೆಲ್ಲೆಡೆ ತಲ್ಲಣ ಸೃಷ್ಟಿಸಿದ ಮಹಾಮಾರಿ ಕೊರೊನಾ ಪಿಡುಗನ್ನು ಹೋಗಲಾಡಿಸಲು ಲಸಿಕೆ ಪಡೆಯುವುದೇ ಏಕೈಕ ಮಾರ್ಗ. ಸರ್ಕಾರದ ನಿಬಂಧನೆಗಳಂತೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಪಡೆಯಲು ಯಾರೂ ಭಯ ಪಡಬೇಕಾಗಿಲ್ಲ. ಸೂಜಿ ಚುಚ್ಚುವುದು ಗೊತ್ತೇ ಆಗುವುದಿಲ್ಲ. ಸಣ್ಣ ನೋವೂ ಆಗುವುದಿಲ್ಲ. ಆದ್ದರಿಂದ ಭಕ್ತಾದಿಗಳು ಮತ್ತು ಸಾರ್ವಜನಿಕರು ಯಾವುದೇ ಭಯವಿಲ್ಲದೆ ವ್ಯಾಕ್ಸಿನ್ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದು ಕರೆ ನೀಡಿದ್ದಾರೆ.
ಮೋದಿ ಆರೋಗ್ಯ ಕಾಳಜಿಗೆ ಪ್ರಶಂಸೆ: “ಮನೆ ಗೆದ್ದು ಮಾರು ಗೆಲ್ಲು’ ಎನ್ನುವಂತೆ ನಮ್ಮ ದೇಶದ ಎಲ್ಲಾ ಪ್ರಜೆಗಳಿಗೆ ಲಸಿಕೆ ಕೊಡುವುದಲ್ಲದೆ ಜಗತ್ತಿನ ಅನೇಕ ರಾಷ್ಟ್ರಗಳಿಗೆ ಉಚಿತವಾಗಿ ಲಸಿಕೆ ಪೂರೈಕೆ ಮಾಡುತ್ತಿರುವ ಪ್ರಧಾನಿ ಮೋದಿ ಮಾನವೀಯ ಗುಣ ಶ್ಲಾಘನೀಯ. ಇಡೀ ದೇಶದ ಜನರ ಆರೋಗ್ಯದ ದೃಷ್ಟಿಯಿಂದ ವ್ಯಾಪಕ ಕ್ರಮಗಳನ್ನು ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿದ್ದಾರೆ. ಜಗತ್ತಿನ ಹಲವು ರಾಷ್ಟ್ರಗಳಿಗೆ ಭಾರತದಲ್ಲಿ ಸಂಶೋಧಿಸಿದ ಲಸಿಕೆಯನ್ನು ಸರಬರಾಜು ಮಾಡುವ ಮೂಲಕ ಜಗತ್ತಿನ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ತೋರಿರುವುದು ಪ್ರಶಂಸನೀಯ ಎಂದು ಶ್ರೀಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.