25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು


Team Udayavani, Apr 16, 2019, 3:57 PM IST

cta-1
ಚಿತ್ರದುರ್ಗ: ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, 25ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಮೋದಿ ಸರ್ಕಾರ
ಮತ್ತೆ ಬಂದರೆ ಸಾಕಷ್ಟು ಸಮುದಾಯಗಳು ಮತ್ತು ವಿವಿಧ ಕ್ಷೇತ್ರಗಳಿಗೆ ನ್ಯಾಯ ಸಿಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಪ್ರತಿಪಾದಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ, ಯುವಕರು ಮತ್ತು ಮಹಿಳೆಯರಿಗೆ ಮತ್ತೂಮ್ಮೆ ಮೋದಿ ಸರ್ಕಾರ ಬೇಕಾಗಿದೆ ಎಂದರು.
ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯ, ಗೊಂದಲವಿದೆ. ಉಭಯ ಪಕ್ಷಗಳ ಕಾರ್ಯಕರ್ತರಲ್ಲೇ ಗೊಂದಲ ಏರ್ಪಟ್ಟಿದೆ. ಜೆಡಿಎಸ್‌ ನೊಂದಿಗೆ ಇದೇ ಕೊನೆ ಮೈತ್ರಿ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ದೇವೇಗೌಡರು ಮೇಲ್ನೋಟಕ್ಕೆ ಒಂದಾಗಿದ್ದಾರೆ. ಆದರೆ ಜಿ.ಟಿ. ದೇವೇಗೌಡರು ಕಾಂಗ್ರೆಸ್‌ಗೆ ಬೆಂಬಲ ನೀಡಿಲ್ಲ. ರಾಹು ಕೇತು ಶನಿ ಇರೋದ್ರಿಂದ ಚಾಮುಂಡೇಶ್ವರಿ ಕ್ಷೇತ್ರದಿಂದ ಮತ್ತೆ ಸ್ಪರ್ಧೆ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕ್ಷೇತ್ರದ
ಜನರ ವಿಶ್ವಾಸ ಗಳಿಸದೇ ಇರುವುದರಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಿಲ್ಲ. ಯಾರು ರಾಹು ಕೇತು ಶನಿ ಎಂದು ಅವರಿಗೇ
ಗೊತ್ತಿಲ್ಲ ಎಂದು ಲೇವಡಿ ಮಾಡಿದರು.
ಮೋದಿ ಪ್ರಧಾನಿ ಆಗಲ್ಲ, ಕುಮಾರಸ್ವಾಮಿ ಅವರಪ್ಪನಾಣೆಗೂ ಮುಖ್ಯಮಂತ್ರಿಯಾಗಲ್ಲ ಎಂದು ಸಿದ್ದರಾಮಯ್ಯನವರು  ದಿದ್ದರು. ಆದರೆ ಸಿದ್ದರಾಮಯ್ಯ ಏನು ಹೇಳುತ್ತಾರೋ ಅದು ಉಲ್ಟಾ ಆಗುತ್ತದೆ. ಹಾಗಾಗಿ ಮೋದಿ ಮತ್ತೂಮ್ಮೆ ಪ್ರಧಾನಿ ಆಗಲಿದ್ದಾರೆ ಎಂದರು.
ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ಯೋಗ್ಯರಲ್ಲ. ಅಧಿಕಾರಿಗಳಿಗೆ ಹಣ ಹೊಡೆಯಿರಿ ಎಂದು
ಪ್ರಚೋದಿಸುತ್ತಾರೆ ಎಂದು ದೂರಿದರು.  ಮೋದಿ ಮುಖ ನೋಡಿ ಮತ ಹಾಕಿ ಎಂದು ಅಭ್ಯರ್ಥಿಗಳು ಮತದಾರರನ್ನು ಕೇಳುತ್ತಿರುವ ಕುರಿತು ಪ್ರಶ್ನಿಸಿದಾಗ, ಭಾಗ್ಯವಂತರಿಗೆ ಸಿಗುವ ಮುಖ ಮೋದಿಯವರದು. ಅದು ನಮ್ಮ ತಂದೆ-ತಾಯಿ ಆಶೀರ್ವಾದ ಎಂದು ಪ್ರತಿಕ್ರಿಯಿಸಿದರು.
ಬಿಜೆಪಿ ರಾಷ್ಟ್ರೀಯವಾದಿ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಜಾತಿವಾದಿ ಪಕ್ಷಗಳು. ಜಾತಿವಾದಿ ಪಕ್ಷಗಳಿಂದ ಏನನ್ನೂ
ನಿರೀಕ್ಷಿಸಲು ಸಾಧ್ಯವಿಲ್ಲ. ಶಿವಮೊಗ್ಗದ ಜನ ನನ್ನನ್ನು 1.50 ಲಕ್ಷ ಮತಗಳಿಂದ ಗೆಲ್ಲಿಸಿದ್ದಾರೆ. ಪೆದ್ದ ಯಾರು, ದಡ್ಡ ಯಾರು
ಎಂದು ಜನರು ತೀರ್ಮಾನಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯರನ್ನು ಸೋಲಿಸಿ ಶಿವಮೊಗ್ಗದಲ್ಲಿ ನನ್ನನ್ನು
ಗೆಲ್ಲಿಸಿ ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದರೂ ಅಲ್ಲಿ ಏಕೆ ಸೋತರು ಎಂದು ತಿರುಗೇಟು
ನೀಡಿದರು.
ಮೋದಿ ಪ್ರಧಾನಿಯಾದರೆ ದೇಶ ಬಿಡುವುದಾಗಿ ದೇವೇಗೌಡರು ಹೇಳಿದ್ದರು. ಆದರೆ ಗೌಡರು ದೇಶ ಬಿಡಲಿಲ್ಲ. ಹಾಸನ ಕ್ಷೇತ್ರದಲ್ಲಿ ನಿಂಬೆಹಣ್ಣಿನ ಪ್ರಭಾವ ಬೀಳುತ್ತೆ. ಆದರೆ ನಿಂಬೆಹಣ್ಣು ನೋಡಿ ಜನ ಮತ ಹಾಕಲ್ಲ.
ಕೆ.ಎಸ್‌. ಈಶ್ವರಪ್ಪ, ಮಾಜಿ ಉಪ ಮುಖ್ಯಮಂತ್ರಿ.

ಟಾಪ್ ನ್ಯೂಸ್

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.