ಸಮ್ಮಿಶ್ರ ಸರ್ಕಾರದ ಆಯಸ್ಸು ಕೆಲವೇ ದಿನ: ಶ್ರೀರಾಮುಲು
Team Udayavani, Jun 8, 2018, 6:35 AM IST
ಚಿತ್ರದುರ್ಗ: ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಕಚ್ಚಾಟ ಮಿತಿ ಮೀರಿದೆ. ಹಾಗಾಗಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ಹೆಚ್ಚು ಆಯಸ್ಸು ಇಲ್ಲ. ರಾಜ್ಯದಲ್ಲಿ ಈಗಲೇ ಚುನಾವಣೆ ನಡೆದರೂ ಬಿಜೆಪಿ 150 ಸ್ಥಾನ ಗೆದ್ದು ಅಧಿ ಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ರಚನೆ ಬಳಿಕ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬೇಸರಗೊಂಡಿರುವ ಕಾಂಗ್ರೆಸ್ಸಿನ ಹಿರಿಯ ನಾಯಕರು ಯಡಿಯೂರಪ್ಪ ಹಾಗೂ ಅಮಿತ್ ಶಾ ಜತೆ ಚರ್ಚಿಸಿದರೂ ಅಚ್ಚರಿ ಇಲ್ಲ. ಇದುವರೆಗೆ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದರು.
ಜೆಡಿಎಸ್-ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನ ಮತ್ತು ಸಚಿವ ಸಂಪುಟದಲ್ಲಿ ಅವಕಾಶ ಸಿಗಲಿಲ್ಲ ಎನ್ನುವ ಶಾಸಕರ ಗಲಾಟೆ, ಗೊಂದಲವನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು. ರಾಜ್ಯದ ರೈತರ ಎಲ್ಲಾ ಸಾಲಮನ್ನಾ ಮಾಡುವಂತೆ ಹೋರಾಟ ಮುಂದುವರೆಸುತ್ತೇವೆ.
ಏಕೆಂದರೆ, ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜನರ ಕಿವಿಗೆ ಹೂವು ಇಡುತ್ತಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.