ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಿ

Team Udayavani, Apr 6, 2018, 12:37 PM IST

cta-1.jpg

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಪಕ್ಷದಲ್ಲಿರುವ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಎನ್‌.ವೈ. ಗೋಪಾಲಕೃಷ್ಣ ಕರೆ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಾಂಗ್ರೆಸ್‌ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡಿ ಎಲ್ಲ ಆರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಅತಿ ಹೆಚ್ಚು ಮತಗಳನ್ನು ಗೆಲ್ಲಿಸಬೇಕು. ಪಕ್ಷದಲ್ಲಿ ಯಾವ ಹುದ್ದೆ ನೀಡಿದರೂ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಜಿ.ಎಸ್‌. ಮಂಜುನಾಥ್‌ ಮಾತನಾಡಿ, ಚುನಾವಣೆ ಹತ್ತಿರವಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಕಾಲ ಬದಲಾಗಿದ್ದು, ಕಾಲಕ್ಕೆ ತಕ್ಕಂತೆ ನಾವು ಬದಲಾಗಿ ಸಂಘಟನೆಗೆ ಒತ್ತು ನೀಡಬೇಕು ಎಂದು ತಿಳಿಸಿದರು. 

ವಿದಾನ ಪರಿಷತ್‌ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನೇರ್ಲಗುಂಟೆ ಎಂ. ರಾಮಪ್ಪ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಗೆದ್ದಿಲ್ಲ. ನನಗೆ ಮೂರು ತಿಂಗಳು ಮುಂಚಿತವಾಗಿ ಅಭ್ಯರ್ಥಿಯಾಗಿ ಪಕ್ಷ ಟಿಕೆಟ್‌ ಘೋಷಿಸಲಾಗಿದೆ. ಇದರಿಂದ ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಐದು ಜಿಲ್ಲೆಯ ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಲು ಅವಕಾಶ ದೊರೆತಿದೆ. ಹಾಗಾಗಿ ಪ್ರತಿ ಜಿಲ್ಲೆಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು, ಪ್ರಚಾರ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸ ನನಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್‌. ಮಂಜುನಾಥ್‌, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಎಂ.ಎ. ಸೇತುರಾಂ, ಕೆಪಿಸಿಸಿ ಸದಸ್ಯ ಜೆ.ಜೆ. ಹಟ್ಟಿ ತಿಪ್ಪೇಸ್ವಾಮಿ, ಎಸ್‌.ಎಂ.ಎಲ್‌. ಫಯಾಜ್‌, ಪ್ರಚಾರ ಸಮಿತಿ ಕಾರ್ಯದರ್ಶಿ ಮಾಧುರಿ ಗಿರೀಶ್‌, ಸಂಚಾಲಕ ಹಾಲಸ್ವಾಮಿ, ಮಾಧ್ಯಮ ಕಾರ್ಯದರ್ಶಿ ಎನ್‌.ಡಿ. ಕುಮಾರ್‌ ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.