ದಾನ ಮಾಡಿದ ಸಮಾಜಕ್ಕೆ ಬೇಡುವ ಸ್ಥಿತಿ
Team Udayavani, Feb 18, 2019, 10:52 AM IST
ಚಿತ್ರದುರ್ಗ: ವಾಲ್ಮೀಕಿ ನಾಯಕ ಸಮಾಜದ ಅಭಿವೃದ್ಧಿಗೆ ಎಲ್ಲರೂ ಪಕ್ಷ ಭೇದ ಮರೆತು ಒಟ್ಟಾಗಿ ಹೋರಾಟ ಮಾಡಬೇಕು ಎಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಕರೆ ನೀಡಿದರು.
ತಾಲೂಕಿನ ಭರಮಸಾಗರದಲ್ಲಿ ಭಾನುವಾರ ಆಯೋಜಿಸಿದ್ದ 77 ಪಾಳೇಗಾರರ ನೆನಪಿನೋತ್ಸವ, “ವಾಲ್ಮೀಕಿ ಧ್ವನಿ’ ಪತ್ರಿಕೆಯ ವಾರ್ಷಿಕೋತ್ಸವ ಹಾಗೂ ಬಿಚ್ಚುಗತ್ತಿ ಭರಮಣ್ಣ ನಾಯಕನ ಪುತ್ಥಳಿ ಸ್ಥಾಪನೆಗೆ ಭೂಮಿಪೂಜೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮದಕರಿ ನಾಯಕರು ಸೇರಿದಂತೆ ಇತರೆ ನಾಯಕ ಸಮಾಜದ ಆಳ್ವಿಕೆ ಕಾಲದಲ್ಲಿ ಕೆರೆ ಕಟ್ಟೆಗಳನ್ನು ನಿರ್ಮಿಸಿ ಈ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅಲ್ಲದೆ ಸರ್ವ ಸಮುದಾಯದವರ ರಕ್ಷಣೆ ಮಾಡಿದರು. ಇಂತಹ ಹಿರಿಮೆ ಹೊಂದಿರುವ ವಾಲ್ಮೀಕಿ ನಾಯಕ ಸಮಾಜ ಸಂಕಷ್ಟ ಎದುರಿಸುತ್ತಿದೆ. ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಾಲ್ಕನೇ ದೊಡ್ಡ ಸಮಾಜವಾಗಿದ್ದರೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 7.5 ಮೀಸಲಾತಿ ನೀಡಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಇದರಿಂದ ಸಮಾಜಕ್ಕೆ ಅನ್ಯಾಯವಾಗುತ್ತಿದೆ.
ದಾನ ಮಾಡಿದ ಸಮಾಜಕ್ಕೆ ಬೇಡುವ ಸ್ಥಿತಿ ಎದುರಾಗಿದೆ. ಆದ್ದರಿಂದ ಎಲ್ಲ ಶಾಸಕರು ಮತ್ತು ಸಂಸದರು ಸಮಾಜದ ಅಭಿವೃದ್ಧಿಗೆ ಹೋರಾಟ ಮಾಡಬೇಕು. ಸೂಕ್ತ ಮೀಸಲಾತಿ ನೀಡದೆ ಹೋದರೆ ಪ್ರಸನ್ನಾನಂದಪುರಿ ಸ್ವಾಮೀಜಿಯವರ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಗುಡುಗಿದರು. ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಮಾತನಾಡಿ, ನಾಯಕ ಸಮಾಜದವರು ನಿಷ್ಠೆ- ಪ್ರಾಮಾಣಿಕತೆಗೆ ಹೆಸರಾದವರು. ನಂಬಿದರೆ ಜೀವ ಕೊಟ್ಟು ಕಾಪಾಡುವಂಥವರು.
ಅಂತಹ ಸಮಾಜದವರೊಂದಿಗೆ ಭೋವಿ ಸಮಾಜದವರು ಸೇರಿಕೊಂಡು ಕೋಟೆ, ಕೆರೆಗಳನ್ನು ಕಟ್ಟಿ ಋಣ ತೀರಿಸಿದ್ದೇವೆ. ಎರಡು ಸಮಾಜದವರು ರಾಜ್ಯಕ್ಕೆ ಮತ್ತು ದೇಶಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಕೊಡುಗೆ ನೀಡಿದ್ದಾರೆ. ಬಿಚ್ಚುಗತ್ತಿ ಭರಮಣ್ಣ ನಾಯಕ ಪುತ್ಥಳಿ ಅನಾವರಣ ನನ್ನ ಕ್ಷೇತ್ರ ಭರಮಸಾಗರದಲ್ಲಿ ಆಗುತ್ತಿರುವುದು ತುಂಬಾ ಸಂತೋಷವಾಗುತ್ತಿದೆ. ಸರ್ಕಾರದಿಂದ ಅದಕ್ಕೆ ಬೇಕಾದ ಅನುದಾನ ಕೊಡಿಸುತ್ತೇವೆ. ವೈಯಕ್ತಿಕವಾಗಿ ಪುತ್ಥಳಿ ನಿರ್ಮಾಣಕ್ಕೆ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಸಾನ್ನಿಧ್ಯ ವಹಿಸಿದ್ದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆಶೀರ್ವಚನ ನೀಡಿ, ನಾಯಕ ಸಮಾಜದವರು ಸಾಕಷ್ಟು ಬದಲಾವಣೆ ಕಾಣುತ್ತಿದ್ದೇವೆ. ದೇಶಕ್ಕೆ ರಾಮಾಯಣ ನೀಡಿದ ವಾಲ್ಮೀಕಿ, ವ್ಯಾಸ, ಬೇಡರ ಕಣ್ಣಪ್ಪ, ಹಕ್ಕ ಬುಕ್ಕ, ಗುರುದಕ್ಷಿಣೆಯಾಗಿ ಬೆರಳು ಕೊಟ್ಟ ಏಕಲವ್ಯ ಅವರಂತಹ ಮಹಾಪುರುಷರನ್ನು ದೇಶಕ್ಕೆ ಕೊಡುಗೆ ನೀಡಿದ ಸಮಾಜ ನಮ್ಮದು. ಇಂದು ಕಷ್ಟ ಕಾಲದಲ್ಲಿ ಇದ್ದೇವೆ. ಆದ್ದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು.
ಯುವಕರು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಯನ್ನು ಅಲಂಕರಿಸಬೇಕು. ದುಶ್ಚಟಗಳಿಗೆ ಬಲಿಯಾಗದೆ ಬದುಕು ಕಟ್ಟಿಕೊಳ್ಳಬೇಕು ಎಂದರು. ಪ್ರೊ| ಗುಡದೇಶ್ವರಪ್ಪ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಮಕ್ಕಳು ಎಲ್ಲ ರಂಗದಲ್ಲಿ ಕೆಲಸ ಮಾಡುವಷ್ಟು ಸಮರ್ಥರಿದ್ದಾರೆ. ಗ್ರಾಮೀಣ ಭಾಗದ ಪೋಷಕರು ಶಿಕ್ಷಣಕ್ಕೆ ಒತ್ತು ನೀಡಿದರೆ ಕುಟುಂಬ ಮತ್ತು ಸಮಾಜದ ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ಎಲ್ಲರಿಗೂ ಶಿಕ್ಷಣವೇ ಮೂಲಮಂತ್ರವಾಗಬೇಕು ಎಂದು ತಿಳಿಸಿದರು.
ಡಾ| ಶಿವಮೂರ್ತಿ ಮುರುಘಾ ಶರಣರು ಬಿಚ್ಚುಗತ್ತಿ ಭರಮಣ್ಣ ನಾಯಕನ ಪುತ್ಥಳ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿದರು. ಸ್ಮರಣಸಂಚಿಕೆ ಬಿಡುಗಡೆ ಮಾಡಿ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹರ್ತಿಕೋಟೆ ವೀರೇಂದ್ರಸಿಂಹ, ಜಿಪಂ ಸದಸ್ಯರಾದ ಡಾ| ಬಿ. ಯೋಗೇಶ್‌ಬಾಬು, ಡಿ.ವಿ. ಶರಣಪ್ಪ, ರಾಜೇಶ್ವರಿ, ಮುಖಂಡರಾದ ಚೌಳಳ್ಳಿ ನಾಗೇಂದ್ರಪ್ಪ, ಆರ್. ಕೃಷ್ಣಮೂರ್ತಿ, ಎಸ್.ಎಂ.ಎಲ್. ತಿಪ್ಪೇಸ್ವಾಮಿ, ತಿಪ್ಪೇಶ್, ರುದ್ರೇಶ್, ನೀಲಕಂಠಪ್ಪ, ವಸಂತಕುಮಾರ್, ವೀರೇಶ್, ರತ್ನಮ್ಮ ಭಾಗವಹಿಸಿದ್ದರು.
ವಾಲ್ಮೀಕಿ ನಾಯಕ ಸಮಾಜಕ್ಕೆ ರಾಜ್ಯ ಸರ್ಕಾರ ಶೇ. 7.5 ಮೀಸಲಾತಿಯನ್ನು ಕೂಡಲೇ ಕೊಡಬೇಕು. ನ್ಯಾಯಯುತ ಬೇಡಿಕೆ ಈಡೇರಿಕೆಗೆ ಏಕೆ ಯೋಚನೆ ಮಾಡುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ.
ಪ್ರಸನ್ನಾನಂದಪುರಿ ಸ್ವಾಮೀಜಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.