ಜಿಪಂ ಸಾಮಾನ್ಯ ಸಭೆ ಮತ್ತೆ ಮುಂದೂಡಿಕೆ


Team Udayavani, Feb 5, 2019, 11:22 AM IST

chikk-3.jpg

ಚಿತ್ರದುರ್ಗ: ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ನಡೆಯಬೇಕಾಗಿದ್ದ ಜಿಪಂ ಮುಂದುವರೆದ ಸಾಮಾನ್ಯ ಸಭೆಯನ್ನು ಕೋರಂ ಕೊರತೆಯಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಇದರಿಂದ ಸತತ ಏಳನೇ ಬಾರಿ ಸಭೆಯನ್ನು ಮುಂದೂಡಿದಂತಾಗಿದೆ.

ಸಾಮಾನ್ಯ ಸಭೆ ನಡೆಸಲು ಒಟ್ಟು ಸದಸ್ಯರ ಅರ್ಧದಷ್ಟು ಅಂದರೆ 26 ಸದಸ್ಯರ ಕೋರಂ ಬೇಕು. ಆದರೆ ಇಂದಿನ ಸಭೆಯಲ್ಲಿ 14 ಸದಸ್ಯರು ಮಾತ್ರ ಪಾಲ್ಗೊಂಡಿದ್ದರು. ಹಾಗಾಗಿ ಸಭೆ ನಡೆಸಲು ಬರುವುದಿಲ್ಲ, ಕೋರಂ ಕೊರತೆಯಿಂದ ಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ತಿಳಿಸಿದರು.

ಫೆ. 7 ರಂದು ಅವಿಶ್ವಾಸ ನಿರ್ಣಯ ಮಂಡನೆ ವಿಶೇಷ ಸಭೆಯನ್ನು ಕರೆಯಲಾಗಿದೆ. ನಾನು ಇಲ್ಲಿಯ ತನಕ ಜಿಪಂನಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಆಡಳಿತ ಮಾಡಿದ್ದೇನೆ. ನನ್ನ ಆಡಳಿತಾವಧಿಯ 32 ತಿಂಗಳಲ್ಲಿ 21 ಬಾರಿ ಸಭೆ ಕರೆದಿದ್ದೇನೆ. ಆದರೆ ಕೆಲವು ಸದಸ್ಯರು ನನ್ನ ಮೇಲೆ ವಿಶ್ವಾಸವಿಲ್ಲ ಎಂದು ದೂರಿ ಪದೇ ಪದೇ ಸಭೆಗೆ ಗೈರಾಗುತ್ತಿದ್ದಾರೆ. ಯಾವುದೇ ರೀತಿಯಲ್ಲಿ ಅಭಿವೃದ್ಧಿಗೆ ತೊಂದರೆ ಆಗಬಾರದು, ಬರ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕೆಂದು ಪ್ರತಿ ತಿಂಗಳು ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಕರೆದು ಜಿಲ್ಲೆಯ ಎಲ್ಲ 37 ಜಿಪಂ ಕ್ಷೇತ್ರಗಳಿಗೆ ಯಾವುದೇ ಕೊರತೆ ಆಗದಂತೆ ನೋಡಿಕೊಂಡಿದ್ದೇನೆ. ಜೊತೆಯಲ್ಲಿ ಕಾಲ ಕಾಲಕ್ಕೆ ಸ್ಥಾಯಿ ಸಮಿತಿಗಳ ಸಭೆ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ತ್ತೈಮಾಸಿಕ ಸಭೆ, ಬರ ಅಧ್ಯಯನ ಸಭೆ, ದಿಶಾ ಸಭೆ ಸೇರಿದಂತೆ ಎಲ್ಲ ರೀತಿಯ ಸಭೆಗಳಿಗೆ ಕಡ್ಡಾಯವಾಗಿ ಪಾಲ್ಗೊಂಡು ಜಿಲ್ಲೆಯ ಜನತೆ ಎದುರಿಸುವ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆಂದರು.

ಫೆ.7 ರಂದು ಅಧ್ಯಕ್ಷರ ವಿರುದ್ಧ ಅವಿಶ್ವಾಸ ಸಭೆ ಕರೆದಿದ್ದು ಪಕ್ಷ ಭೇದ ಮರೆತು ನನ್ನನ್ನು ಬೆಂಬಲಿಸುವಂತೆ ಎಲ್ಲರಲ್ಲೂ ಕೋರಿಕೊಂಡಿದ್ದೇನೆ. ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ ಎಂದು ನಾನು ಪಕ್ಷ

ಭೇದ ಮಾಡದೆ ಎಲ್ಲರಲ್ಲೂ ಮನವಿ ಮಾಡಿಕೊಂಡಿದ್ದೇನೆ. ನನ್ನ ವಿರುದ್ಧದ ಅವಿಶ್ವಾಸಕ್ಕೆ ನೂರಕ್ಕೆ ನೂರರಷ್ಟು ಸೋಲಾಗಲಿದೆ ಎನ್ನುವ ವಿಶ್ವಾಸ ನನ್ನಲ್ಲಿದೆ. ನನ್ನ ಆಡಳಿತ ನೋಡಿರುವ ಸದಸ್ಯರು ಕೈ ಬಿಡುವುದಿಲ್ಲ ಎನ್ನುವ ನಂಬಿಕೆ ಇದೆ ಎಂದು ತಿಳಿಸಿದರು.

ಬಿಜೆಪಿ ಸದಸ್ಯ ಅಜ್ಜಪ್ಪ ಮಾತನಾಡಿ, ಆಡಳಿತ ಪಕ್ಷದ ಸದಸ್ಯರೇ ಸಭೆ ನಡೆಸಲು ಸಹಕಾರ ನೀಡುತ್ತಿಲ್ಲ, ಹಾಗಾಗಿ ಏನು ಮಾಡಬೇಕೋ ಅದನ್ನು ವರಿಷ್ಠರ ತೀರ್ಮಾನದಂತೆ ಮಾಡುತ್ತೇವೆ. ಕಾಂಗ್ರೆಸ್‌ ಪಕ್ಷದ ಅಧಿಕಾರ ಹಂಚಿಕೆ ಒಡಂಬಡಿಕೆ ವೈಯಕ್ತಿಕ. ಸದ್ಯಕ್ಕೆ ಸೌಭಾಗ್ಯ ಬಸವರಾಜನ್‌ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಒಂದು ವೇಳೆ ಕಾಂಗ್ರೆಸ್‌ ಪಕ್ಷದ ಒಡಂಬಡಿಕೆಯಂತೆ ಹೊಸದುರ್ಗ ಕ್ಷೇತ್ರದ ಉಪ್ಪಾರ ಸಮಾಜದ ವಿಶಾಲಾಕ್ಷಿ ನಟರಾಜ್‌

ಅಧ್ಯಕ್ಷರಾಗಬೇಕು. ಕಾಂಗ್ರೆಸ್‌ನವರು ಅವರನ್ನು ಅಧ್ಯಕ್ಷರನ್ನಾಗಿ ಮಾಡುತ್ತೇವೆಂದು ಮೊದಲು ಮಾಧ್ಯಮಗಳ ಎದುರು ಬಹಿರಂಗ ಪಡಿಸಲಿ. ಆಗ ಬಿಜೆಪಿ ತನ್ನ ನಿಲುವನ್ನು ಪ್ರಕಟಿಸಲಿದೆ ಎಂದು ಹೇಳಿದರು.

ಸಭೆಯನ್ನು ಮುಂದೂಡುತ್ತಿದ್ದಂತೆ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳ ಸದಸ್ಯರು ಗುಂಪು ಗುಂಪಾಗಿ ಹೊರ ನಡೆದರು.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.