ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ

Team Udayavani, Feb 1, 2018, 3:14 PM IST

01-38.jpg

ಚಳ್ಳಕೆರೆ: ವಿದ್ಯಾರ್ಥಿಗಳ ಬದುಕು ರೂಪಿಸುವ ಶಕ್ತಿ ಕೇವಲ ಶಿಕ್ಷಕರಿಗೆ ಮಾತ್ರ ಇದೆ. ಶಾಲಾ ಹಂತದಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಶಿಕ್ಷಕರೊಂದಿಗೆ ಪೋಷಕರೂ ಗಮನ ನೀಡಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. 

ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ “ಮಕ್ಕಳ ಹಬ್ಬ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು ಹಲವಾರು ಸೌಲಭ್ಯ ಒದಗಿಸಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ಯಾವುದೇ ರೀತಿಯಲ್ಲಿ ಆರ್ಥಿಕವಾಗಿ ಹೊರೆಯಾಗುತ್ತಿಲ್ಲ. ಶಿಕ್ಷಕರು ನೀಡುವ ಶಿಕ್ಷಣವನ್ನು ಮಕ್ಕಳು ಶ್ರದ್ಧೆಯಿಂದ ಕಲಿಯಬೇಕು. ಎಲ್ಲಾ ಸಮುದಾಯದ ಮಕ್ಕಳಿಗೂ ಸಮಾನ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆ ಸದಾ ಮುಂದಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷ ಎನ್‌. ರವಿಕುಮಾರ್‌ ಮಾತನಾಡಿ, ವಿಶೇಷವಾಗಿ ಪರಿಶಿಷ್ಟ ವರ್ಗಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಲುವಾಗಿ ಮೊರಾರ್ಜಿ ಶಾಲೆಗಳು ಪ್ರಾರಂಭವಾಗಿವೆ. ಮಕ್ಕಳಿಗೆ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಇದರ ಸದುಪಯೋಗ ಪಡೆಯಬೇಕು ಎಂದು ಕರೆ 
ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಸ್‌. ನಾಗೇಂದ್ರಪ್ಪ ಮಾತನಾಡಿ, 2003-04ನೇ ಸಾಲಿನಲ್ಲಿ ಮೊರಾರ್ಜಿ ಶಾಲೆಗಳು ಪ್ರಾರಂಭವಾಗಿವೆ. ಈ ಶಾಲೆಯಲ್ಲಿ 2010-11ನೇ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅವಕಾಶ ದೊರೆತಿದೆ. ಅಲ್ಲಿಂದ ಇಲ್ಲಿಯ ತನಕ ಪ್ರತಿ ವರ್ಷ ಮಕ್ಕಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗುತ್ತಿದ್ದು, ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಶ್ರಮಿಸುತ್ತಿದ್ದಾರೆಂದರು.

ಶಿಕ್ಷಕ ಪಾತಲಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಮೊರಾರ್ಜಿ ಶಾಲೆ ಪ್ರತಿವರ್ಷ ಉತ್ತಮ ಫಲಿತಾಂಶ ಪಡೆಯುತ್ತಿದೆ. ಕ್ರೀಡಾ ಸ್ಪರ್ದೆಗಳಲ್ಲೂ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಬಿ.ಟಿ. ರಮೇಶ್‌ ಗೌಡ, ಪಶುವೈದ್ಯ ಇಲಾಖೆಯ ಡಾ| ಹನುಮಪ್ಪ, ಗ್ರಾಪಂ ಸದಸ್ಯ ಶಿವಣ್ಣ, ಕಿತ್ತೂರು ರಾಣಿ ಚನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ನಾಗರಾಜ, ವೆಂಕಟೇಶ್‌, ಮುರುಗೇಶಪ್ಪ, ಜಗದೀಶ್‌ ಬಾಗವಹಿಸಿದ್ದರು. ಬಸವರಾಜು ಪ್ರಾರ್ಥಿಸಿದರು. ರವಿಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

1-wqewqewq

Bharamasagara;ಕಳ್ಳತನಕ್ಕೆ ಬಂದು ಆಟೋ ಮತ್ತು ಬೈಕ್ ಬಿಟ್ಟು ಪರಾರಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.