ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೂ ಪಾಸಿಟಿವ್
Team Udayavani, Jul 28, 2020, 11:41 AM IST
ಮೊಳಕಾಲ್ಮೂರು: ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕು ಉಲ್ಬಣವಾಗುತ್ತಿದ್ದು, ಪಟ್ಟಣದಲ್ಲಿ 6 ಮತ್ತು ಗ್ರಾಮೀಣ ಪ್ರದೇಶದಲ್ಲಿ 11 ಸೇರಿದಂತೆ ಒಟ್ಟು 17 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ತಾಲೂಕಿನ ಜನತೆ ಆತಂಕಗೊಂಡಿದ್ದಾರೆ.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರಪ್ರಾಥಮಿಕ ಸಂಪರ್ಕದಲ್ಲಿದ್ದ 31 ಜನರನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 6 ಪ್ರಕರಣಗಳು ಪಾಸಿಟಿವ್ ಎಂದು ದೃಢಪಟ್ಟಿವೆ. ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಿದ ಪರಿಣಾಮ 23 ವರ್ಷದ ಪುರುಷ, 12 ವರ್ಷದ ಬಾಲಕ, 10 ವರ್ಷದ ಬಾಲಕ, 56 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿದೆ. ಕೊಂಡ್ಲಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ 15 ಜನರನ್ನು ಪರೀಕ್ಷಿಸಿದಾಗ 63 ವರ್ಷದ ವೃದ್ಧೆ, 54 ವರ್ಷದ ವೃದ್ಧೆ, 3 ವರ್ಷದ ಬಾಲಕಿ ಹಾಗೂ 48 ವರ್ಷದ ಮಹಿಳೆ ಸೇರಿದಂತೆ ಒಟ್ಟು 4 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಂಪುರದಲ್ಲಿ 64 ವರ್ಷದ ವೃದ್ಧ, 37 ವರ್ಷದ ಯುವಕ, 52 ವರ್ಷದ ಪುರುಷ ಸೇರಿದಂತೆ ಒಟ್ಟು 3 ಪ್ರಕರಣಗಳು ಪತ್ತೆಯಾಗಿವೆ.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ 31 ಜನರ ಪೈಕಿ 53 ವರ್ಷದ ವೈದ್ಯರು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ 46 ವರ್ಷದ ಗ್ರೂಪ್ ಡಿ ಹೊರಗುತ್ತಿಗೆ ನೌಕರ ಮತ್ತು ಗ್ರೂಪ್ ಡಿ ನೌಕರನ 3 ವರ್ಷದ ಮಗ, ಪಶು ಇಲಾಖೆಯ 27 ವರ್ಷದ ಮಹಿಳೆ, ಈ ಮಹಿಳೆಯ 53 ವರ್ಷದ ತಾಯಿ ಹಾಗೂ 25 ವರ್ಷದ ತಮ್ಮನಿಗೆ ಸೋಂಕು ದೃಢಪಟ್ಟಿದೆ.
ಸೋಂಕಿತರನ್ನು ರಾಂಪುರ ಮತ್ತು ಚಿತ್ರದುರ್ಗದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲೂಕು ಆರೋಗ್ಯಾಧಿ ಕಾರಿಗಳ ಕಚೇರಿ ಮತ್ತು ಸಿದ್ದಯ್ಯನಕೋಟೆ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.