ರಾಮಾಯಣದಲ್ಲಿದೆ ಆದರ್ಶ ಬದುಕಿನ ಸಾರ


Team Udayavani, Oct 21, 2021, 2:54 PM IST

The Ramayana

ಚಿತ್ರದುರ್ಗ: ಮಹರ್ಷಿ ವಾಲ್ಮೀಕಿ ರಾಮಾಯಣದ ಮೌಲ್ಯಗಳುಭಾರತಕ್ಕೆ ಮಾತ್ರ ಸೀಮಿತವಾಗದೆ ವಿಶ್ವಕ್ಕೆ ಮಾರ್ಗದರ್ಶನ ನೀಡುವ ಮೌಲ್ಯ ಹೊಂದಿವೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ,ಜಿಪಂ, ನಗರಸಭೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಇಲಾಖೆಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿ ರಾಮಾಯಣ ಕಥೆಯ ರೂಪದಲ್ಲಿಲ್ಲ.ರಾಮಾಯಣ ಮಹಾಕಾವ್ಯಕ್ಕೆ ತನ್ನದೇ ಆದ ಶ್ರೇಷ್ಠತೆ ಮತ್ತು ಪಾವಿತ್ರ್ಯತೆ ಇದೆ. ಮಾನವೀಯ ಮೌಲ್ಯಗಳು, ಮಾನವನ ವ್ಯಕ್ತಿತ್ವ,ಭವಿಷ್ಯದ ಮಾನವನ ಬದುಕು, ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವದಮೌಲ್ಯಗಳು, ಸಮಾಜ, ಸಂಸ್ಕೃತಿಯ ಚಿತ್ರಣವಿದ್ದು, ಅರ್ಥಮಾಡಿಕೊಳ್ಳಬೇಕಾದ ಸಾಕಷ್ಟು ವಿಚಾರಗಳು ಅಡಗಿವೆ ಎಂದರು.

ಪ್ರತಿ ವ್ಯಕ್ತಿಯೂ ತನ್ನ ಬದುಕು, ವ್ಯಕ್ತಿತ್ವ ರೂಪಿಸಿಕೊಳ್ಳಲುರಾಮಾಯಣ ಪ್ರಭಾವ ಬೀರುತ್ತದೆ ಎನ್ನುವ ಬಗ್ಗೆಚರ್ಚೆಯಾಗಬೇಕು. ಇದು ಪ್ರತಿಯೊಬ್ಬರಿಗೂ ತಲುಪಬೇಕು.ಹಾಗಾಗಿ ವಾಲ್ಮೀಕಿ ಜಯಂತಿಯನ್ನು ಆಚರಿಸುವ ಮೂಲಕರಾಮಾಯಣ ದರ್ಶನ, ಅದರಲ್ಲಿ ಅಡಗಿರುವ ಮೌಲ್ಯಗಳು,ಸಂಸ್ಕಾರ, ಜೀವನ ಶೈಲಿ, ಪ್ರಾಮಾಣಿಕತೆ, ಆದರ್ಶದ ಬದುಕು ಅರ್ಥವಾಗಬೇಕಿದೆ.

ರಾಮರಾಜ್ಯದ ನಿರ್ಮಾಣ, ರಾಮ ರಾಜ್ಯದಕನಸನ್ನು ಪ್ರತಿಯೊಬ್ಬ ವ್ಯಕ್ತಿಯಲ್ಲಿ ತುಂಬುವ ಕಾರ್ಯಕ್ರಮಕ್ಕೆಜಯಂತಿ ಕಾರ್ಯಕ್ರಮ ಸಹಕಾರಿಯಾಗಬೇಕು ಎಂದುಅಭಿಪ್ರಾಯಪಟ್ಟರು.ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಇಡೀ ದೇಶಾದ್ಯಂತ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ.

ಮಹರ್ಷಿವಾಲ್ಮೀಕಿ ಸೇರಿದಂತೆ ಮಹಾನ್‌ ವ್ಯಕ್ತಿಗಳ ಆದರ್ಶಗಳನ್ನುಅಳವಡಿಸಿಕೊಂಡು ನಮ್ಮ ಸಂವಿಧಾನ ರಚನೆ ಮಾಡಲಾಗಿದೆ.ಎಲ್‌.ಜಿ. ಹಾವನೂರು ಅವರು ಕೊಟ್ಟ ವರದಿಯನ್ನು ಅಂದಿನಮುಖ್ಯಮಂತ್ರಿಗಳು ಯಥಾವತ್ತಾಗಿ ಅನುಷ್ಠಾನ ಮಾಡಿದರು.ಈ ವರದಿಯು ವಾಲ್ಮೀಕಿ ಜನಾಂಗಕ್ಕೆ ಮಾತ್ರವಲ್ಲ, ಪ್ರತಿಯೊಂದುಜನಾಂಗಕ್ಕೂ ಭಗವದ್ಗೀತೆ ಎಂದರೂ ತಪ್ಪಾಗಲಾರದು.

ಎಲ್ಲವರ್ಗದ ಜನರಿಗೂ ಅನುಕೂಲ ಕಲ್ಪಿಸಿಕೊಡಲಾಗಿದೆ. ಎಲ್‌.ಜಿ.ಹಾವನೂರು ಅಂತಹವರು ಈ ಸಮಾಜದಲ್ಲಿ ಜನಿಸಿರುವುದುನಾಯಕ ಸಮಾಜಕ್ಕೆ ಕೀರ್ತಿ ತಂದಿದೆ. ವಾಲ್ಮೀಕಿ ಮಹರ್ಷಿಯವರಆದರ್ಶಗಳನ್ನು ಮುಂದಿನ ಪೀಳಿಗೆಯವರು ಅರ್ಥಮಾಡಿಕೊಂಡು ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಾಲ್ಮೀಕಿ ನಾಯಕ ನೌಕರರ ಸಂಘದ ಡಾ| ಎಚ್‌.ಗುಡ್ಡದೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸರ್ಕಾರಿ ಕಲಾಕಾಲೇಜಿನ ಸ್ನಾತಕೋತ್ತರ ಇತಿಹಾಸ ವಿಭಾಗದ ಪ್ರಾಧ್ಯಾಪಕಿ ಡಾ|ಬಿ. ಜಯಮ್ಮ ಮಹರ್ಷಿ ವಾಲ್ಮೀಕಿ ಕುರಿತು ವಿಶೇಷ ಉಪನ್ಯಾಸನೀಡಿದರು. ನಗರಸಭೆ ಅಧ್ಯಕ್ಷೆ ಬಿ.ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಬದರಿನಾಥ್‌, ಜಿಲ್ಲಾ ವಾಲ್ಮೀಕಿ ನಾಯಕಸಮಾಜದ ಅಧ್ಯಕ್ಷ ಎಚ್‌.ಜೆ. ಕೃಷ್ಣಮೂರ್ತಿ, ತಾಲೂಕು ವಾಲ್ಮೀಕಿನಾಯಕ ಸಮಾಜದ ಅಧ್ಯಕ್ಷ ಬಿ. ಕಾಂತರಾಜು, ಜಿಲ್ಲಾ ಧಿಕಾರಿಕವಿತಾ ಎಸ್‌. ಮನ್ನಿಕೇರಿ, ಜಿಲ್ಲಾ ಪೊಲೀಸ್‌ ವರಿಷ್ಠಾ ಕಾರಿ ಜಿ.ರಾಧಿ ಕಾ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಉಪವಿಭಾಗಾಧಿಕಾರಿ ಚಂದ್ರಯ್ಯ, ತಹಶೀಲ್ದಾರ್‌ ಸತ್ಯನಾರಾಯಣ, ಜಿಲ್ಲಾಪರಿಶಿಷ್ಟ ವರ್ಗಗಳ ಕಲ್ಯಾಣಾಧಿ ಕಾರಿ ಎನ್‌. ಮಂಜುನಾಥ್‌,ನಗರಸಭೆ ಸದಸ್ಯ ದೀಪಕ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.