ರೈತರ ಆತ್ಮಹತ್ಯೆ ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ವಿಫಲ
Team Udayavani, May 8, 2018, 5:48 PM IST
ಧರ್ಮಪುರ: ರೈತರ ಸರಣಿ ಆತ್ಮಹತ್ಯೆ ಹಾಗೂ ಸುಳ್ಳು ಭರವಸೆ ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದು ಹಿರಿಯ ಬಿಜೆಪಿ ಮುಖಂಡ ನಾಗರಾಜ ಆರೋಪಿಸಿದರು. ಹೋಬಳಿಯ ಕೋಡಿಹಳ್ಳಿ, ವೇಣುಕಲ್ಲುಗುಡ್ಡ, ಬ್ಯಾಡರಹಳ್ಳಿ, ಮಸ್ಕಲ್ ಮತ್ತಿತರ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ರೈತರ ಕಲ್ಯಾಣಕ್ಕೆ ಗಮನ ನೀಡಲಿಲ್ಲ. ಇದರಿಂದ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಆದರೂ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆ, ಆತ್ಮಹತ್ಯೆ ತಡೆಗಟ್ಟುವ ಮಾರ್ಗೋಪಾಯಗಳ ಬಗ್ಗೆ ಗಂಭೀರ ಚಿಂತನೆ ನಡೆಸಲಿಲ್ಲ.
ಬದಲಾಗಿ ಬದಲಾಗಿ ರೈತ ವಿರೋಧಿ ನೀತಿ ಅನುಸರಿಸಿದೆ. ಆತ್ಮಹತ್ಯೆ ಮಾಡಿಕೊಂಡ ರೈತ್ರ ಕುಟುಂಬದವರಿಗೆ ಸಾಂತ್ವನವನ್ನೂ ಹೇಳಲಿಲ್ಲ ಎಂದು ಆರೋಪಿಸಿದರು.
ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಇನ್ನು ಕೆಲವೇ ದಿನಗಳಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಆಗ ರೈತ ಪರ ಆಡಳಿತ ನೀಡಲಾಗುವುದು. ನನ್ನನ್ನು ಗೆಲ್ಲಿಸಿದರೆ ಧರ್ಮಪುರ ಫಿಡರ್ ಚಾನಲ್, ತಾಲೂಕು ಕೇಂದ್ರ ಘೋಷಣೆ, ಸಕ್ಕರೆ ಕಾರ್ಖಾನೆ ಪುನರಾರಂಭ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಹೇಳಿದರು.
ಮಾಜಿ ಶಾಸಕ ಆರ್. ರಾಮಯ್ಯ, ತಾಲೂಕು ಬಿಜೆಪಿ ಅಧ್ಯಕ್ಷ ದ್ಯಾಮೇಗೌಡ, ಜಿಲ್ಲಾ ಕಾರ್ಯದರ್ಶಿ ಡಿ.ಆರ್. ತಿಪ್ಪೇಸ್ವಾಮಿ,
ಬಿಜೆಪಿ ಮುಖಂಡರಾದ ಡಿ.ಟಿ. ಶ್ರೀನಿವಾಸ್, ವೆಂಕಟೇಶ್ ಚಲಪತಿ, ನಾಗರಾಜ ರಾವ್, ಪಿ.ಡಿ. ಕೋಟೆ ಮುರಳಿ, ಕೃಷ್ಣಾಪುರ ಹನುಮಂತರಾಯ, ರಾಕೇಶ್ ಯಾದವ್, ವೀರಭದ್ರಪ್ಪ, ತಿಮ್ಮರಾಜ್, ಭೋಜರಾಜ್, ಬೆನಕನಹಳ್ಳಿ ಶಿವಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ
Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.