ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
Team Udayavani, Dec 18, 2020, 6:52 PM IST
ಚಿತ್ರದುರ್ಗ: ನಗರದ ಹೊಳಲ್ಕೆರ ರಸ್ತೆ ಮತ್ತಿತರೆಡೆ ರಸ್ತೆ ಅಗಲೀಕರಣ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವುದರಿಂದ ಪಾದಚಾರಿಗಳು ಹಾಗೂ ವಾಹನಸವಾರರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಗುರುವಾರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪ್ರತಿಭಟಿಸಿದರು.
ಸ್ಥಳಕ್ಕೆ ಆಗಮಿಸಿದ ಕೋಟೆ ಠಾಣೆ ಪೊಲೀಸರು ಪ್ರತಿಭಟನಾಕಾರರನ್ನು ಬಂ ಧಿಸಿ ಬಿಡುಗಡೆ ಮಾಡಿದರು. ರಸ್ತೆಯಒಂದು ಬದಿಯನ್ನು ಅಗೆದು ಯುಜಿಡಿಕಾಮಗಾರಿ ಮತ್ತು ರಸ್ತೆ ಅಗಲೀಕರಣದಕೆಲಸ ಮೂರ್‍ನಾಲ್ಕು ತಿಂಗಳಿಂದನಡೆಯುತ್ತಿದೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ಜೀವ ಭಯದಿಂದ ಓಡಾಡುವಂತಾಗಿದೆ. ರಸ್ತೆಮಧ್ಯದಲ್ಲೇ ಯುಜಿಡಿ ಗುಂಡಿಗಳು ಅಲ್ಲಲ್ಲಿ ತೆರೆದುಕೊಂಡಿದ್ದು, ಸುತ್ತಲೂ ಕಲ್ಲುಗಳನ್ನಿಟ್ಟು ಕೈ ತೊಳೆದುಕೊಳ್ಳಲಾಗಿದೆ. ಇದರಿಂದ ನಾಗರಿಕರ ಜೀವಕ್ಕೆ ತೊಂದರೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರದ ತುರುವನೂರು ರಸ್ತೆ, ಆರ್‌ಟಿಒ ಕಚೇರಿ ರಸ್ತೆ, ತರಾಸು ರಂಗಮಂದಿರದ ಬಳಿ ಯುಜಿಡಿ ಕಾಮಗಾರಿ ಕಳಪೆಯಾಗಿದೆ. ಇದನ್ನು ಸರಿಪಡಿಸಿ ರಸ್ತೆ ಕಾಮಗಾರಿಯಿಂದಆಗುತ್ತಿರುವ ಧೂಳಿನ ಸಮಸ್ಯೆಗೆ ಆದಷ್ಟಬೇಗ ಇತಿಶ್ರೀ ಹಾಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವಕುಮಾರ್, ನಗರಾಧ್ಯಕ್ಷಎಂ. ತಿಪ್ಪೇಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಗೌರಣ್ಣ, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ್, ನಗರ ಉಪಾಧ್ಯಕ್ಷಓಬಳೇಶ್ ಸೇರಿದಂತೆ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.