ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ

ಕೃಷಿ ಸಚಿವ ಬಿ.ಸಿ. ಪಾಟೀಲ್‌ ಸ್ಪಷ್ಟೋಕ್ತಿ

Team Udayavani, May 21, 2022, 1:50 PM IST

fertilizers

ಚಿತ್ರದುರ್ಗ: ರಾಜ್ಯದಲ್ಲಿ 1118,519 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರದ ದಾಸ್ತಾನಿದೆ. ರಸಗೊಬ್ಬರಕ್ಕೆ ಕೊರತೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದರು. ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ ಜಿಲ್ಲೆಯ ಮುಂಗಾರು ಹಂಗಾಮಿನ ಬಿತ್ತನೆ ಸಿದ್ಧತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಈ ವರ್ಷದ ಆರಂಭದಲ್ಲಿ ಏಪ್ರಿಲ್‌ 1ರಿಂದ 5,94,773 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನು ಇತ್ತು. 5,23,746 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ರಾಜ್ಯಕ್ಕೆ ಬಂದಿದ್ದು, ಒಟ್ಟು 11,18,519 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನಿದೆ. ಕೇಂದ್ರ ಸರ್ಕಾರ ರಸಗೊಬ್ಬರ ಖರೀದಿಗೆ ದೇಶಾದ್ಯಂತ 2.39 ಸಾವಿರ ಕೋಟಿ ರೂ. ರಿಯಾಯಿತಿ ನೀಡಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆಯಿಂದಾಗಿ 240 ಹೆಕ್ಟೇರ್‌ ತೋಟಗಾರಿಕೆ ಹಾಗೂ 40 ಹೆಕ್ಟೇರ್‌ ಕೃಷಿ ಬೆಳೆ ಹಾನಿಯಾಗಿದೆ. 40 ಹೆಕ್ಟೇರ್‌ ಪ್ರದೇಶದಲ್ಲಿ ರಾಗಿ ಬೆಳೆ ಹಾನಿಯಾಗಿದೆ. ಒಟ್ಟು 37 ಲಕ್ಷ ರೂಪಾಯಿ ನಷ್ಟವಾಗಿದೆ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸರ್ವೇ ಕಾರ್ಯ ಕೈಗೊಂಡು ವರದಿ ನೀಡಿದ್ದಾರೆ. ಬೆಳೆ ಹಾನಿಯಾದವರಿಗೆ ಪರಿಹಾರ ನೀಡಲಾಗುವುದು. ಜಿಲ್ಲೆಯಲ್ಲಿ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ದಾಸ್ತಾನು ಇದೆ ಎಂದು ತಿಳಿಸಿದರು.

ಈ ವೇಳೆ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ. ಚಂದ್ರಪ್ಪ, ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ್‌, ಜಂಟಿ ಕೃಷಿ ನಿರ್ದೇಶಕ ಪಿ. ರಮೇಶ್‌ಕುಮಾರ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ. ಸವಿತಾ, ಸಿಸಿಎಫ್‌ ಚಂದ್ರಶೇಖರ್‌ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಅಕ್ರಮವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಲು ಯಾರಾದರೂ ಪ್ರಯತ್ನ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. -ಬಿ.ಸಿ. ಪಾಟೀಲ್‌, ಕೃಷಿ ಸಚಿವ

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.