ಮೂವರ ಸೆರೆ: 32 ಲಕ್ಷ ಮೌಲ್ಯದ ವಸ್ತು ವಶ

Team Udayavani, Jul 26, 2017, 3:29 PM IST

26-uuuuu.jpg

ಚಿತ್ರದುರ್ಗ: ಜಿಲ್ಲೆಯಲ್ಲಿ ವಿವಿಧ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ 32 ಲಕ್ಷ ರೂ.ಗಳಿಗಿಂತ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಅರುಣ್‌ ರಂಗರಾಜನ್‌ ಈ ಬಗ್ಗೆ ಮಾಹಿತಿ ನೀಡಿದರು. ಜು. 24ರಂದು ರಾತ್ರಿ ಕೋಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಚಂದ್ರವಳ್ಳಿ ಸಮೀಪ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಮನೆಗಳ್ಳತನಕ್ಕೆ
ಉಪಯೋಗಿಸುವ ಆಯುಧಗಳು, ಖಾರದ ಪುಡಿಯನ್ನು ಇಟ್ಟುಕೊಂಡು ನಸ್ರುಲ್ಲಾ ಮತ್ತು ಸುಹೇಬ್‌ ಕನ್ನ ಹಾಕುವ ತಯಾರಿಯಲ್ಲಿದ್ದರು. ಅವರನ್ನು ಪೊಲೀಸರು ಹಿಡಿದುಕೊಳ್ಳಲು ಯತ್ನಿಸಿದಾಗ ಆರೋಪಿ ಬೆಂಗಳೂರಿನ ಸುಹೇಬ್‌ ತಪ್ಪಿಸಿಕೊಂಡಿದ್ದಾನೆ ಎಂದರು.

ನಸ್ರುಲ್ಲಾನನ್ನು ಬಂಧಿಸಿ ಆತನ ವಿಚಾರಣೆ ನಡೆಸಿದಾಗ ಚಿತ್ರದುರ್ಗದ ಜುಲಿ ಖಾನ್‌, ಹೊಳಲ್ಕೆರೆಯ ಅಫೂಜ್‌ ಖಾನ್‌ ಕಳ್ಳತನದ ಕೃತ್ಯಗಳಲ್ಲಿ ಭಾಗಿಯಾಗಿರುವುದಾಗಿ ತಿಳಿಸಿದ್ದ. ಆತ ನೀಡಿದ ಮಾಹಿತಿ ಆಧರಿಸಿ ಉಳಿದಿಬ್ಬರು ಆರೋಪಿಗಳನ್ನು ಬಂಧಿಸಲಾಯಿತು. ಬಂಧಿತ ಆರೋಪಿಗಳಿಂದ 1 ಕೆಜಿ 162 ಗ್ರಾಂ ಬಂಗಾರ, 650 ಗ್ರಾಂ ತೂಕದ ಬೆಳ್ಳಿಯ ಆಭರಣಗಳು, ಮಾರುತಿ 800 ಕಾರು
ಸೇರಿದಂತೆ 32,37,400 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 850 ಗ್ರಾಂ ತೂಕದ 22.95 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಬೇಕಾಗಿದೆ ಎಂದರು. 

ನಗರ ಪೊಲೀಸ್‌ ಠಾಣೆಯಲ್ಲಿ ವರದಿಯಾಗಿದ್ದ 7 ಕನ್ನ, 1 ಸುಲಿಗೆ ಪ್ರಕರಣ, ಕೋಟೆ ಪೊಲೀಸ್‌ ಠಾಣೆಯಲ್ಲಿ 1 ಕನ್ನ,
ಭರಮಸಾಗರ ಠಾಣೆಯ 2 ಕನ್ನ, ಚಳ್ಳಕೆರೆ ಪೊಲೀಸ್‌ ಠಾಣೆಯ 2 ಕನ್ನ ಸೇರಿದಂತೆ ಒಟ್ಟು 13 ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಿದರು. ಎಪಿಎಂಸಿ ಯಾರ್ಡ್‌ನಲ್ಲಿ ಜು. 24ರಂದು ರಾತ್ರಿ ಗಸ್ತಿನಲ್ಲಿದ್ದಾಗ ಒಬ್ಬ ಹುಡುಗ ಬೈಕ್‌ನಲ್ಲಿ ಹೋಗುತ್ತಿದ್ದ. ಅದು ಕಳುವಾದ ಬೈಕ್‌ ಎಂದು ಅನುಮಾನಗೊಂಡು ಆ ಹುಡುಗನನ್ನು ಬೈಕ್‌ ಸಮೇತ ವಶಕ್ಕೆ ಪಡೆದು ವಿಚಾರಣೆ ಮಾಡಲಾಯಿತು. ತೌಫಿಕ್‌ ಎಂಬುವವನೊಂದಿಗೆ ಸೇರಿಕೊಂಡು ಬೈಕ್‌ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿ ತೌಫಿಕ್‌ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ. ಆರೋಪಿಯಿಂದ ಅಂದಾಜು 1.10 ಲಕ್ಷ ರೂ. ಮೌಲ್ಯದ 4 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. 

ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಕೆ. ಪರಶುರಾಮ್‌, ಉಪಾಧೀಕ್ಷಕ ಲಕ್ಷ್ಮಣ ನಿಂಬರಗಿ ಇದ್ದರು.

ಟಾಪ್ ನ್ಯೂಸ್

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.