ಸಂಚಾರಿ ಗ್ರಂಥಾಲಯ ಶೀಘ್ರ ಆರಂಭ
Team Udayavani, Apr 10, 2021, 8:42 PM IST
ಚಿತ್ರದುರ್ಗ: ನಗರದಲ್ಲಿ ಓದುಗರಿಗಾಗಿ ಶೀಘ್ರದಲ್ಲಿಯೇ ನಗರ ಸಂಚಾರಿ ಗ್ರಂಥಾಲಯ ಪ್ರಾರಂಭವಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್ ತಿಳಿಸಿದರು.
ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿರುವ ಮಕ್ಕಳ ಸಮುದಾಯ ಗ್ರಂಥಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ರಂಥಾಲಯ ಪ್ರಾಧಿಕಾರದ ಸಭೆ ಹಾಗೂ 2021-22ನೇ ಸಾಲಿನ ಅಂದಾಜು ಆಯವ್ಯಯ ಸಭೆಯಲ್ಲಿ ಮಾತನಾಡಿದರು. ನಗರದಲ್ಲಿ ಸಂಚಾರಿ ಗ್ರಂಥಾಲಯ ಪ್ರಾರಂಭಿಸಲು ವಾಹನ ಪೂರೈಸುವಂತೆ ಈಗಾಗಲೇ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರಿಗೆ ಪತ್ರ ಬರೆಯಲಾಗಿದ್ದು, ಇದಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
ಬೆಂಗಳೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಕಲಬುರಗಿ ಸೇರಿದಂತೆ ರಾಜ್ಯದ 10 ಕಡೆ ಈಗಾಗಲೇ ಸಂಚಾರಿ ಗ್ರಂಥಾಲಯ ಕಾರ್ಯನಿರ್ವಹಿಸುತ್ತಿದ್ದು, ಚಿತ್ರದುರ್ಗದಲ್ಲಿ ಕೆಲವೇ ದಿನಗಳಲ್ಲಿ ಸಂಚಾರಿ ಲೈಬ್ರರಿ ಪ್ರಾರಂಭವಾಗಲಿದೆ. ಸಂಚಾರಿ ಗ್ರಂಥಾಲಯದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಪುಸ್ತಕಗಳ ವ್ಯವಸ್ಥೆ ಮಾಡಲಾಗುತ್ತದೆ.
ಸಾರ್ವಜನಿಕ ಓದುಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಮುಖ್ಯ ಗ್ರಂಥಾಲಯಾ ಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಈವರೆಗೆ 43,726 ಜನರು ಸದಸ್ಯತ್ವ ಪಡೆದಿದ್ದಾರೆ. ಡಿಜಿಟಲ್ ಗ್ರಂಥಾಲಯದಲ್ಲಿ ಓದುಗರಿಗಾಗಿ 10 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಲಭ್ಯವಿದ್ದು, ಓದುಗರು ಇದರ ಸದುಪಯೋಗ ಪಡೆಯಬಹುದು ಎಂದರು ಜಿಲ್ಲೆಯಲ್ಲಿರುವ ಶಾಲಾ-ಕಾಲೇಜುಗಳಿಗೆ ಗ್ರಂಥಾಲಯ ಸಿಬ್ಬಂದಿ ಭೇಟಿ ನೀಡಿ, ಡಿಜಿಟಲ್ ಗ್ರಂಥಾಲಯ ನೋಂದಣಿ ಬಗ್ಗೆ ಮತ್ತು ಇದರ ಉಪಯೋಗದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.
ಡಿಜಿಟಲ್ ಗ್ರಂಥಾಲಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ನೋಂದಣಿ ಮಾಡಿಸಿಕೊಳ್ಳುವರು ನೇರವಾಗಿ ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ, ಸದಸ್ಯತ್ವ ಪಡೆದುಕೊಳ್ಳಬಹುದು ಎಂದು ತಿಳಿಸಿದರು. ನಗರದ ಧವಳಗಿರಿ ಬಡವಾಣೆಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅನುದಾದಲ್ಲಿ ನಿರ್ಮಾಣಗೊಂಡ ಗ್ರಂಥಾಲಯವನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಡಿಜಿಟಲ್ ಗ್ರಂಥಾಲಯ ಹಾಗೂ ಗ್ರಂಥಾಲಯವನ್ನು ತಿಂಗಳೊಳಗಾಗಿ ಪ್ರಾರಂಭಿಸುವುದಾಗಿ ಸಭೆಗೆ ಮಾಹಿತಿ ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತಹ ಪುಸ್ತಕಗಳನ್ನು ಹಾಗೂ ಹೆಸರಾಂತ ಲೇಖಕರ ಪುಸ್ತಕಗಳನ್ನು 2021-22ನೇ ಸಾಲಿನ ಗ್ರಂಥಾಲಯ ಪ್ರಾಕಾರದ ಕೋಟಾದಲ್ಲಿ ಓದುಗರ ಬೇಡಿಕೆ ಅನ್ವಯ, ಪ್ರಸ್ತುತ ವರ್ಷದಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಐಎಎಸ್, ಕೆಎಎಸ್, ಪಾಸಾದ ವಿದ್ಯಾರ್ಥಿಗಳಿಂದ ಹಾಗೂ ಜಿಲ್ಲಾ ಧಿಕಾರಿಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳ ಮೂಲಕ ಸ್ಪರ್ಧಾತ್ಮಕ ಪುಸ್ತಕಗಳ ಪಟ್ಟಿಯನ್ನು ಸ್ವೀಕರಿಸಲಾಗಿದ್ದು, ಹೆಸರಾಂತ ಪ್ರಕಟಣೆಯ ಪುಸ್ತಕಗಳನ್ನು ಸ್ಪರ್ಧಾತ್ಮಕ ಅಧ್ಯಯನ ಕೇಂದ್ರ ಹಾಗೂ ಶಾಖಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಓದುಗರಿಗೆ ಹೊರಾಂಗಣ ಓದುವ ಆವರಣ ನಿರ್ಮಾಣಕ್ಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. 2021-22ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಗ್ರಂಥಾಲಯ ಪ್ರಾ ಧಿಕಾರದಲ್ಲಿ ಒಟ್ಟು ರೂ.80 ಲಕ್ಷ ಅಂದಾಜು ಆದಾಯ ನಿರೀಕ್ಷಿಸಲಾಗಿದೆ. ರೂ.77 ಲಕ್ಷ ಅಂದಾಜು ವ್ಯಯ ಆಗುವ ನೀರಿಕ್ಷೆ ಇದೆ ಎಂದು ಸಭೆಗೆ ತಿಳಿಸಿದರು. ಹಿರಿಯ ವಕೀಲರಾದ ಕೃಷ್ಣಮೂರ್ತಿ, ಸರ್ಕಾರಿ ಕಲಾ ಕಾಲೇಜು ಗ್ರಂಥಪಾಲಕ ತಿಪ್ಪೇಸ್ವಾಮಿ, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಗ್ರಂಥಪಾಲಕ ಟಿ.ಎನ್.ಪ್ರಸನ್ನ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.